Published on: March 15, 2023

ಚುಟುಕು ಸಮಾಚಾರ – 15 ಮಾರ್ಚ್ 2023

ಚುಟುಕು ಸಮಾಚಾರ – 15 ಮಾರ್ಚ್ 2023

  • ತಮಿಳುನಾಡು, ಕರ್ನಾಟಕ ಹಾಗೂ ಕೇರಳ ಸೇರಿ ಮೂರು ರಾಜ್ಯಗಳಲ್ಲಿ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ರಣಹದ್ದುಗಳ ಸಮೀಕ್ಷೆ ನಡೆಯಿತು. ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶ (ಎಂಟಿಆರ್ ) ಮತ್ತು ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶ (ಎಸಟಿಆರ್ ), ಕೇರಳದ ವಯನಾಡ್ ವನ್ಯಜೀವಿ ಅಭಯಾರಣ್ಯ (ಡಬ್ಲ್ಯೂಡಬ್ಲ್ಯೂಎಸ್) , ಕರ್ನಾಟಕದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (ಬಿಟಿಆರ್) ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ (ಎನ್ ಟಿಆರ್)ಗಳಲ್ಲಿ  ಸಮೀಕ್ಷೆಯನ್ನು ನಡೆಸಲಾಯಿತು.
  • ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಯಚೂರು ಜಿಲ್ಲೆಗೆ ಜವಳಿ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
  • ಪೂರ್ವ ಲಡಾಖ್‌ನಲ್ಲಿ ಗಡಿ ವಾಸ್ತವ ರೇಖೆಯುದ್ದಕ್ಕೂ ನಿಯೋಜಿಸಲಾದ ಸ್ವತಂತ್ರ ಫೀಲ್ಡ್ ಬೆಟಾಲಿಯನ್‌ಗೆ ಕಮಾಂಡ್ ಮಾಡಿದ ಮೊದಲ ಮಹಿಳಾ ಅಧಿಕಾರಿ ಕರ್ನಲ್ ಗೀತಾ ಕರ್ನಲ್ ಉತ್ತರಾಖಂಡ್‌ನ ಪೌರಿಯವರು, ಇವರು ಬೆಟಾಲಿಯನ್ ಆಫ್ ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ಗೆ ಸೇರಿದವರು. ಭಾರತೀಯ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರಿಗೆ ಇಂತಹ ಕಮಾಂಡ್ ನೀಡಲಾಗಿದೆ. ಕಮಾಂಡರ್‌ಗಳ ಪಾತ್ರದಲ್ಲಿ ಮಹಿಳಾ ಅಧಿಕಾರಿಗಳನ್ನು ನಿಯೋಜಿಸಲು ಸೇನೆಯು ಇತ್ತೀಚೆಗೆ ಸರ್ಕಾರದ ಅನುಮೋದನೆಯನ್ನು ಪಡೆದಿತ್ತು. ಇವರು ಪ್ರಸ್ತುತ ಕಾರ್ಪ್ಸ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್‌ನಲ್ಲಿ ಹುದ್ದೆಗೆ ಸೇರ್ಪಡೆಯಾಗಿದ್ದಾರೆ.
  • ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಪೈಲಟ್ ಮಾಡಿದರು. ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದವರಾಗಿರುವ ಇವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು. ಇಲಾಖೆಯಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಾಗಿ ಈವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
  • ಅಮೆರಿಕ, ಬ್ರಿಟನ್ ಹಾಗೂ ಆಸ್ಟ್ರೇ ಲಿಯಾಗಳು ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆ ಯೋಜನೆಗೆ ಒಪ್ಪಿಗೆ ಸೂಚಿಸಿವೆ. ಇದಕ್ಕೆ ಚೀನಾದಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.