Published on: March 20, 2023

ಚುಟುಕು ಸಮಾಚಾರ : 20 ಮಾರ್ಚ್ 2023

ಚುಟುಕು ಸಮಾಚಾರ : 20 ಮಾರ್ಚ್ 2023

  • ಅಯೋದ್ಯೆಯಲ್ಲಿ ನಿರ್ಮಿಸುತ್ತಿರುವ ಶ್ರೀರಾಮ ಮೂರ್ತಿಗೆ ಕರ್ನಾಟಕದ ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದ ಈದು ಗ್ರಾಮದ ತುಂಗಾ ಪೂಜಾರಿಯವರ ಮನೆಯಿಂದ ನೆಲ್ಲಿಕಾರು ಶಿಲಾಕಲ್ಲನ್ನು  ಆಯ್ಕೆ ಮಾಡಲಾಗಿದೆ. ಕಾರ್ಕಳದ ನೆಲ್ಲಿಕಾರಿನ ಶಿಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದ್ದು ದೇಶದ ರಾಷ್ಟ್ರಪತಿ ಭವನದಲ್ಲಿರುವ ಕಾರ್ಕಳ ಬಾಹುಬಲಿ, ಮಾನಸ್ತಂಭ ಪ್ರತಿಕೃತಿ, ಕವಿ ಮುದ್ದಣ, ಮಿಥುನ ನಾಗ ,ಸೋಮನಾಥ ಪುರದ ದ್ವಾರ, ಗಜಸಿಂಹ,ಗೇಟ್ ವೇ, ಕಲ್ಲಿನ ಕಾರಂಜಿ, ಚೆನ್ನಿಗರಾಯ ದೇವರು ಸೇರಿದಂತೆ ಒಟ್ಟು ಹತ್ತು ವಿಗ್ರಹಗಳನ್ನು ಇಡಲಾಗಿದೆ.
  • ಬೆಂಗಳೂರಿಗೆ 128 ವರ್ಷಗಳ ನೀರು ಪೂರೈಕೆಯ ಇತಿಹಾಸವನ್ನು ವಿವರಿಸುವ ವಿಶಿಷ್ಟ ಜಲ ಸಂಗ್ರಹಾಲಯವನ್ನು ಉದ್ಘಾಟಿಸಲಾಯಿತು. ಜಲ ಸಂಪನ್ಮೂಲಗಳ ವೈಜ್ಞಾನಿಕ ಬಳಕೆ ಮತ್ತು ನಿರ್ವಹಣೆಯನ್ನು ಜನಪ್ರಿಯಗೊಳಿಸುವಲ್ಲಿ ಪರಿಣಾಮಕಾರಿ ಸಂವಹನದ ಕ್ರಿಯಾತ್ಮಕ ಮಾಧ್ಯಮವಾಗಿ ಕಾರ್ಯನಿರ್ವಹಿಸುವ ಗುರಿಯನ್ನು ಹೊಂದಿದೆ.
  • ದೇಶದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರವು ‘ ಹೀಲ್ ಇನ್ ಇಂಡಿಯಾ ‘ ಎಂಬ ಉಪಕ್ರಮವನ್ನು ಪ್ರಾರಂಭಿಸಿದೆ. ಆರೋಗ್ಯ ಪ್ರವಾಸೋದ್ಯಮದ ಮೂಲಕ ಆಯುಷ್ ಚಿಕಿತ್ಸೆಯನ್ನು ಉತ್ತೇಜಿಸಲು ಸರ್ಕಾರ ಪ್ರಯತ್ನಿಸುತ್ತಿದೆ.ಆಯುಷ್ ಸಚಿವಾಲಯವು ಆಯುರ್ವೇದ ಮತ್ತು ಇತರ ಸಾಂಪ್ರದಾಯಿಕ ಔಷಧ ಪದ್ಧತಿಗಳಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ಪ್ರವಾಸೋದ್ಯಮ ಸಚಿವಾಲಯದೊಂದಿಗೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ
  • ಪ್ರತೀ ವರ್ಷ ಮಾರ್ಚ್ 20 ವಿಶ್ವ ಗುಬ್ಬಚ್ಚಿ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. 2023ರ ದಿನದ ಥೀಮ್ : “ನಾನು ಗುಬ್ಬಚ್ಚಿಗಳನ್ನು ಪ್ರೀತಿಸುತ್ತೇನೆ”, ಉದ್ದೇಶ: ಗುಬ್ಬಚ್ಚಿಗಳನ್ನು ರಕ್ಷಣೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.