Published on: September 21, 2023
ಚುಟುಕು ಸಮಾಚಾರ : 20 ಸೆಪ್ಟೆಂಬರ್ 2023
ಚುಟುಕು ಸಮಾಚಾರ : 20 ಸೆಪ್ಟೆಂಬರ್ 2023
- ಜನರೊಟ್ಟಿಗೆ ಸಂಪರ್ಕವನ್ನು ಮತ್ತಷ್ಟು ಸುಲಭವಾಗಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲು ಮುಂದಾಗಿರುವ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಈ ಮೂಲಕ ವಾಟ್ಸಪ್ ಚಾನೆಲ್ ಆರಂಭಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಮತ್ತು ದೇಶದ ಸರ್ಕಾರವೊಂದರ ಮುಖ್ಯಸ್ಥರ ಪೈಕಿ ಮೊಟ್ಟಮೊದಲ ವಾಟ್ಸಪ್ ಚಾನೆಲ್ ಅನ್ನು ಆರಂಭಿಸಿದ ಹೆಗ್ಗಳಿಕೆಯು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ.
- ಕರ್ನಾಟಕದ ಹಾಸನ ಜಿಲ್ಲೆಯಲ್ಲಿರುವ ಬೇಲೂರು ಚನ್ನಕೇಶವ ದೇವಾಲಯ, ಹಳೆಬೀಡು ಹೊಯ್ಸಳೇಶ್ವರ ದೇವಾಲಯ ಮತ್ತು ಮೈಸೂರು ಜಿಲ್ಲೆಯಲ್ಲಿರುವ ಸೋಮನಾಥಪುರದ ಚನ್ನಕೇಶವ ದೇವಾಲಯಗಳಿಗೆ ವಿಶ್ವ ಪರಂಪರೆಯ ಸ್ಥಾನಮಾನಗಳನ್ನು ನೀಡಿದೆ.
- ಸೆಪ್ಟೆಂಬರ್ 17 ವಿಶ್ವಕರ್ಮ ಜಯಂತಿಯಂದು ಪಿಎಂ ವಿಶ್ವಕರ್ಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಎರಡು ಹಂತಗಳಲ್ಲಿ ಮೂರು ಲಕ್ಷ ರೂ ಸಾಲ ನೀಡುವ ಈ ಯೋಜನೆಯು ಲಕ್ಷಾಂತರ ಕರಕುಶಲ ಕರ್ಮಿಗಳಿಗೆ ನೆರವಾಗಲಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಯೋಜನೆಗಾಗಿ ಕೇಂದ್ರ ಸರ್ಕಾರ 13,000 ಕೋಟಿ ರೂ. ಹಣ ಮೀಸಲಿಟ್ಟಿದೆ.
- ದಿಲ್ಲಿಯ ದ್ವಾರಕಾದಲ್ಲಿ ನಿರ್ಮಾಣ ಮಾಡಲಾಗಿರುವ ‘ಯಶೋಭೂಮಿ (ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ಪೋ ಸೆಂಟರ್)’ ಯನ್ನು ಲೋಕಾರ್ಪಣೆಗೊಳಿಸಿದರು. ದಿಲ್ಲಿಯ ದ್ವಾರಕಾದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಮಾದರಿಯ ಆಧುನಿಕ ಸಮಾವೇಶ ಮತ್ತು ವಸ್ತು ಪ್ರದರ್ಶನ ಕೇಂದ್ರವಾಗಿದೆ.
- ಭಾರತದ ಪಶ್ಚಿಮ ಬಂಗಾಳದಲ್ಲಿರುವ, ನೋಬೆಲ್ ಪ್ರಶಸ್ತಿ ಪುರಸ್ಕೃತರಾದ ಕವಿ ರವೀಂದ್ರನಾಥ ಠಾಗೋರರ ನಿವಾಸವಾದ ಶಾಂತಿ ನಿಕೇತನಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣದ ಎಂಬ ಮಾನ್ಯತೆ ಸಿಕ್ಕಿದೆ. ಸೌದಿ ಅರೇಬಿಯಾದ ರಿಯಾದ್ ನಲ್ಲಿ ನಡೆದ ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಆಯ್ಕೆ ಸಮಿತಿಯ 45ನೇ ವಾರ್ಷಿಕ ಸಮ್ಮೇಳನದಲ್ಲಿ ಈ ವಿಚಾರವನ್ನು ಘೋಷಿಸಲಾಗಿದೆ.