Published on: July 25, 2023

ಚುಟುಕು ಸಮಾಚಾರ : 24 ಜುಲೈ 2023

ಚುಟುಕು ಸಮಾಚಾರ : 24 ಜುಲೈ 2023

  • ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆ ಮಂಡಿಸಲು ವಿಶೇಷ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.‘ಪರಿಶಿಷ್ಟರಿಗೆ ಅನ್ಯಾಯ ಆಗುವುದನ್ನು ತಪ್ಪಿಸಲು ತಿದ್ದುಪಡಿ ತರಲಾಗುತ್ತಿದೆ.
  • ಕುಚ್ಚಿಲಕ್ಕಿ ಹಾಗೂ ಬಾಸ್ಮತಿ ಹೊರತುಪಡಿಸಿ ಇತರ ಬಗೆಯ ಅಕ್ಕಿ ರಫ್ತನ್ನು ಕೇಂದ್ರ ಸರ್ಕಾರವು ನಿಷೇಧಿಸಿದೆ. ಕಪ್ಪು ಸಮುದ್ರ ಧಾನ್ಯ ಒಪ್ಪಂದದಿಂದ ರಷ್ಯಾ ಹಿಂದೆ ಸರಿದ ನಂತರ ಈಗ ಜಾಗತಿಕ ಆಹಾರ ಬೆಲೆಗಳು ಮತ್ತಷ್ಟು ಹೆಚ್ಚಳವಾಗುವ ಅಪಾಯ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ಅಕ್ಕಿಯ ಪೂರೈಕೆ ಹೆಚ್ಚಿಸುವ ಹಾಗೂ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ರಿಟೇಲ್ ಮಾರುಕಟ್ಟೆಯಲ್ಲಿ ಬೆಲೆಯನ್ನು ನಿಯಂತ್ರಣದಲ್ಲಿಡುವುದಾಗಿದೆ
  • ಪ್ರತಿ ವರ್ಷ, ಭಾರತದಲ್ಲಿ ಜುಲೈ 22 ರಂದು ರಾಷ್ಟ್ರೀಯ ಧ್ವಜ ದಿನವನ್ನು ಆಚರಿಸಲಾಗುತ್ತದೆ. ನಮ್ಮ ದೇಶವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯುವ ಒಂದು ತಿಂಗಳ ಮೊದಲು 1947 ರಲ್ಲಿ ತ್ರಿವರ್ಣ ಧ್ವಜವನ್ನು ಪ್ರಸ್ತುತ ರೂಪದಲ್ಲಿ ಸಂವಿಧಾನ ಸಭೆಯು ಅಳವಡಿಸಿಕೊಂಡ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.