Published on: March 6, 2023

ಚುಟುಕು ಸಮಾಚಾರ – 6 ಮಾರ್ಚ್ 2023

ಚುಟುಕು ಸಮಾಚಾರ – 6 ಮಾರ್ಚ್ 2023

  • ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಸತಿ ಸಮುಚ್ಚಯಗಳನ್ನು ನಿರ್ಮಾಣ ಮಾಡಿ, ನೆರವಿಗೆ ಮುಂದಾಗಿದೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕಾರ್ಮಿಕ ಇಲಾಖೆಯಿಂದ ಶ್ರಮಿಕರಿಗೆ ಶ್ರಮಿಕ ನಿವಾಸ್ ವಸತಿ ಯೋಜನೆ ಜಾರಿಗೆ ಬರುತ್ತಿದೆ.
  • ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ 105 ಪಂಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ರಾಜ್ಯದ ಮೊದಲ ಜಿಲ್ಲೆಗಳಲ್ಲಿ ಕೊಡಗು ಆಗಿದೆ. ಈ ವರ್ಷ ಒಟ್ಟು ಐದು ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್, ವಿರಾಜಪೇಟೆ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್, ಸೋಮವಾರಪೇಟೆ ತಾಲೂಕಿನ ದೊಡ್ಡಮಲ್ತೆ ಗ್ರಾಮ ಪಂಚಾಯತ್, ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯತ್, ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತ್ ಗೆ ಈ ವರ್ಷ ಗಾಂಧಿ ಪುರಸ್ಕಾರ ಲಭಿಸಿದ್ದು, 5 ಲಕ್ಷ ರೂಪಾಯಿ ನಿಧಿ ಮಂಜೂರಾಗಿದೆ.
  • ದೇಶದಾದ್ಯಂತ ಈಗ ಕೋವಿಡ್ ಲಕ್ಷಣಗಳನ್ನೇ ಹೋಲುವ ಇನ್ಫ್ಲೂಯೆಂಜಾ ಎಚ್3ಎನ್2 ಉಪ ಮಾದರಿ ವೈರಸ್ ಸೋಂಕು ಹರಡುತ್ತಿವೆ. ಇದರ ಲಕ್ಷಣಗಳನ್ನು ಪಟ್ಟಿಮಾಡಿರುವ ಕೇಂದ್ರ ಸರ್ಕಾರ, ಇದರ ತಡೆಗೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ವಿವರಿಸಿದೆ. ಇನ್ಫ್ಲೂಯೆಂಜಾ ಎ ಉಪವಿಧದ ಎಚ್3ಎನ್2 ವೈರಸ್ ಈ ಸಮಸ್ಯೆಗೆ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.
  • ಇಫ್ಕೋ ತಯಾರಿಸಲಿರುವ ಲಿಕ್ವಿಡ್ ನ್ಯಾನೊ ಡಿಎಪಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ನ್ಯಾನೊ ಯೂರಿಯಾವನ್ನು ಪರಿಚಯಿಸಿದ್ದ ಕೇಂದ್ರ ಸರಕಾರ, ಈಗ ನ್ಯಾನೊ ಲಿಕ್ವಿಡ್ ಡಿಎಪಿ (ಡೈ-ಅಮೋನಿಯಂ ಫಾಸ್ಪೇಟ್) ರಸಗೊಬ್ಬರವನ್ನು ರೈತರಿಗೆ ನೀಡಲು ಮುಂದಾಗಿದೆ.
  • ಜಗತ್ತಿನಲ್ಲಿಯೇ ಇದೇ ಮೊದಲ ಬಾರಿಗೆ ಭಾರತದಲ್ಲಿ ಮಹಾರಾಷ್ಟ್ರದ ಚಂದ್ರಾಪುರ ಹಾಗೂ ಯಾವತ್ಮಲ್ ಜಿಲ್ಲೆಗಳನ್ನು ಕೂಡಿಸುವ ವಾನಿ–ವರೋರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದಿರಿನಿಂದ ನಿರ್ಮಿಸಲಾದ 200 ಮೀಟರ್ ವರೆಗಿನ ಅಪಘಾತ ತಡೆಗೋಡೆಯನ್ನು ನಿರ್ಮಿಸಲಾಗಿದೆ. ಈ ತಡೆಗೋಡೆಯ ತಯಾರಿಕೆಯಲ್ಲಿ ಬಳಸಲಾಗುವ ಬಿದಿರಿನ ಜಾತಿಯೆಂದರೆ ಬಂಬುಸಾ ಬಾಲ್ಕೋವಾ
  • ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ 65ನೇ ಜನ್ಮದಿನದಂದು, ಮಹಿಳೆಯರಿಗೆ ಪ್ರತಿ ತಿಂಗಳು ರೂ.1 ಸಾವಿರ ಪಡೆಯುವ ‘ಮುಖ್ಯಮಂತ್ರಿ ಲಾಡ್ಲಿ ಬೆಹನಾ’ ಯೋಜನೆಗೆ ಚಾಲನೆ ನೀಡಿದರು.  ಈ ಯೋಜನೆಯಡಿಯಲ್ಲಿ, ಆದಾಯ ತೆರಿಗೆ ಪಾವತಿ ವ್ಯಾಪ್ತಿಗೆ ಬಾರದ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಕ್ಕಿಂತ ಕಡಿಮೆ ಇರುವ ಅರ್ಹ ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು ರೂ. 1 ಸಾವಿರ ಸಹಾಯ ನೀಡಲಾಗುತ್ತದೆ.
  • ಸಂತೋಷ್‌ ಟ್ರೋಫಿ ಫುಟ್ಬಾಲ್‌ ಟೂರ್ನಿ: 54 ವರ್ಷಗಳ ಬಳಿಕ ಕರ್ನಾಟಕ ತಂಡ ರಾಷ್ಟ್ರೀಯ ಫುಟ್ಬಾಲ್‌ ಚಾಂಪಿಯನ್‌ ಪಟ್ಟಅಲಂಕರಿಸಿದೆ.ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ 76ನೇ ಆವೃತ್ತಿಯ ಸಂತೋಷ್‌ ಟ್ರೋಫಿ ಫುಟ್ಬಾಲ್‌ ಟೂರ್ನಿಯ ಫೈನಲ್‌ನಲ್ಲಿ  ಮೇಘಾಲಯ ವಿರುದ್ಧ 3-2 ಗೋಲುಗಳ  ಗೆಲುವು ಸಾಧಿಸಿತು  ಕರ್ನಾಟಕಕ್ಕೆ ಇದು ಒಟ್ಟಾರೆ 5ನೇ ಟ್ರೋಫಿ. ಈ ಹಿಂದೆ ಮೈಸೂರು ಸಂಸ್ಥಾನವಿದ್ದಾಗ ರಾಜ್ಯ 4 ಬಾರಿ ಟ್ರೋಫಿ ಎತ್ತಿಹಿಡಿದಿತ್ತು. 1946-47ರಲ್ಲಿ ಮೊದಲ ಬಾರಿಗೆ ಚಾಂಪಿಯನ್‌ ಆಗಿದ್ದ ಮೈಸೂರು ತಂಡ, 1952-53, 1967-68, 1968-69ರಲ್ಲಿ ಪ್ರಶಸ್ತಿ ಜಯಿಸಿತ್ತು. ಇದಕ್ಕೂ ಮುನ್ನ 1975-76ರಲ್ಲಿ ಫೈನಲ್‌ ಪ್ರವೇಶಿಸಿದ್ದ ಕರ್ನಾಟಕ, ಬಂಗಾಳ ವಿರುದ್ಧ ಸೋತು ರನ್ನರ್‌-ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.