Published on: September 8, 2023

ಚುಟುಕು ಸಮಾಚಾರ : 6-7 ಸೆಪ್ಟೆಂಬರ್ 2023

ಚುಟುಕು ಸಮಾಚಾರ : 6-7 ಸೆಪ್ಟೆಂಬರ್ 2023

  • ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆ ಬಹುಕೋಟಿ ಹಗರಣದ ತನಿಖೆಯನ್ನು ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ರಾಜ್ಯ ಸರ್ಕಾರ ಒಪ್ಪಿಸಿದೆ. ವಿಶೇಷ ತಂಡ ರಚನೆ ಆಗಿದ್ದು, ರಾಜ್ಯದ ಎಲ್ಲೆಡೆ ವ್ಯಾಪಿಸಿರುವ ಅಕ್ರಮ ವ್ಯವಹಾರದ ತನಿಖೆ ನಡೆಸಲಾಗುತ್ತಿದೆ.ಬೋರ್ವೆಲ್ ಕೊರೆಯುವ ಮೂಲಕ ಹಾಗೂ ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ.
  • ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರಂ ವಾರ್ಡ್‌ನ ಫುಟ್‌ಪಾತ್ ಅಡಿಯಲ್ಲಿ ಟ್ರಾನ್ಸ್‌ಫಾರ್ಮರ್(ಪರಿವರ್ತಕ) ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಹಯೋಗ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)
  • ಕ್ಷೀರ ಭಾಗ್ಯ ಜಾರಿಯಾಗಿ 10 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಸಮಾರಂಭ ಮತ್ತು ರಾಜ್ಯ ಮಟ್ಟದ ಹಾಲು ಉತ್ಪಾದಕರ ಸಮಾವೇಶವನ್ನು ಆಯೋಜಿಸಲಾಗಿತ್ತು. 2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು.  ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ 65 ಲಕ್ಷಕ್ಕೂ ಹೆಚ್ಚು ಮಕ್ಕಳು ಕ್ಷೀರಭಾಗ್ಯದ ಪ್ರಯೋಜನವನ್ನು ಪಡೆಯುತ್ತಿದ್ದಾರೆ.
  • ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಶುಭಮನ್ ಗಿಲ್ ಅವರು 750 ರೇಟಿಂಗ್ ಅಂಕಗಳೊಂದಿಗೆ ODI ಬ್ಯಾಟರ್ ಶ್ರೇಯಾಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದು, ಇದು ಅವರ ವೃತ್ತಿಜೀವನದ ಶ್ರೇಷ್ಠ ಸಾಧನೆಯಾಗಿದೆ. ಏಕದಿನ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಅವರು 882 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ಡರ್ ದುಸ್ಸಾನ್ ಅವರು 777 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಐಸಿಸಿ ಬೌಲರ್​ಗಳ ನೂತನ ಟಾಪ್-10 ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಮಾತ್ರ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 8ನೇ ಸ್ಥಾನ ಅಲಂಕರಿಸಿದ್ದಾರೆ.
  • ಲಿಗೋ-ಇಂಡಿಯಾ: ಭಾರತವು ವಿಶ್ವಾದ್ಯಂತದ ನೆಟ್ವರ್ಕ್ನ ಭಾಗವಾಗಿ ಭಾರತದಲ್ಲಿ ನೆಲೆಗೊಂಡಿರುವ ಯೋಜಿತ ಸುಧಾರಿತ ಗುರುತ್ವ-ತರಂಗ ವೀಕ್ಷಣಾಲಯವನ್ನು ಅಭಿವೃದ್ಧಿಪಡಿಸುತ್ತಿದೆ. ಲಿಗೋ (LIGO) : ಲೇಸರ್ ಇಂಟರ್ಫೆರೋಮೀಟರ್ ಗ್ರಾವಿಟೇಶನಲ್-ವೇವ್ ಒಬ್ಸರ್ವೇಟರಿ (ಎಲ್ಐಜಿಒ). ಇದರ ಪರಿಕಲ್ಪನೆಯ ಪ್ರಸ್ತಾಪವು ಈಗ ಭಾರತ ಮತ್ತು ಅಮೆರಿಕದಲ್ಲಿ ಸಕ್ರಿಯವಾಗಿದ್ದು ಸರ್ಕಾರಗಳ ಪರಿಗಣನೆಯಲ್ಲಿದೆ. ಇದಕ್ಕೆ  ಫೆಬ್ರವರಿ 2016ರಲ್ಲಿ ಭಾರತ ಸರ್ಕಾರದ ತಾತ್ವಿಕ ಅನುಮೋದನೆಯನ್ನು ಪಡೆಯಿತು. ನಿರ್ಮಾಣದ ಸ್ಥಳ : ಇದನ್ನು ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ.
  • ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತಾದ ಸಾಧಕ ಭಾದಕಗಳನ್ನು ತಿಳಿಯಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ.
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ(MoWCD)ವು 6 ನೇ ರಾಷ್ಟ್ರೀಯ ಪೌಷ್ಟಿಕಾಂಶ ತಿಂಗಳನ್ನು 2023 ರ ಸೆಪ್ಟೆಂಬರ್ ಉದ್ದಕ್ಕೂ ಆಚರಿಸುತ್ತಿದೆ. ಈ ವರ್ಷ , ಇದು ಮಿಷನ್ ಪೋಶನ್ 2.0 ನ ಆಧಾರವಾದ ಜೀವನ-ಚಕ್ರ ವಿಧಾನದ ಮೂಲಕ ಅಪೌಷ್ಟಿಕತೆಯನ್ನು ಸಮಗ್ರವಾಗಿ ನಿಭಾಯಿಸುವ ಗುರಿಯನ್ನು ಹೊಂದಿದೆ. ಪೋಶನ್ ಮಾಹ್ 2023 ರ ಗಮನವು ಮಾನವ ಜೀವನದ ನಿರ್ಣಾಯಕ ಹಂತಗಳ – ಗರ್ಭಧಾರಣೆ , ಶೈಶವಾವಸ್ಥೆ , ಬಾಲ್ಯ ಮತ್ತು ಹದಿಹರೆಯ ಬಗ್ಗೆ ಜನಜಾಗೃತಿ ಮೂಡಿಸುವುದು.