Published on: August 3, 2023

ಜನನ ಮತ್ತು ಮರಣಗಳ ನೋಂದಣಿ ತಿದ್ದುಪಡಿ ಮಸೂದೆ, 2023

ಜನನ ಮತ್ತು ಮರಣಗಳ ನೋಂದಣಿ ತಿದ್ದುಪಡಿ ಮಸೂದೆ, 2023

ಸುದ್ದಿಯಲ್ಲಿ ಏಕಿದೆ? ಜನನ ಮತ್ತು ಮರಣಗಳ ನೋಂದಣಿ ಕಾಯ್ದೆ-1969ಕ್ಕೆ ತಿದ್ದುಪಡಿ ತರುವ ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿದೆ. ‘ತಿದ್ದುಪಡಿ ಮೂಲಕ ಕಾಯ್ದೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ.

ಮುಖ್ಯಾಂಶಗಳು

  • ಈ ಕಾಯ್ದೆಜಾರಿಗೆ ಬಂದು 54 ವರ್ಷಗಳ ನಂತರ ಇದೇ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹ.
  • ‘ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’.
  • ಡಿಜಿಟಲ್ ಜನನ ಪ್ರಮಾಣಪತ್ರವನ್ನು ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್, ಸರ್ಕಾರಿ ಉದ್ಯೋಗಗಳು, ಪಾಸ್‌ಪೋರ್ಟ್‌ಗಳು, ಆಧಾರ್, ಮತದಾರರ ನೋಂದಣಿ ಮತ್ತು ವಿವಾಹ ನೋಂದಣಿಗೆ ಒಂದೇ ದಾಖಲೆಯಂತೆ ಬಳಸಲು ತಿದ್ದುಪಡಿಗಳು ಅವಕಾಶ ಕಲ್ಪಿಸುತ್ತವೆ.

ತಿದ್ದುಪಡಿ ಮಸೂದೆಯಲ್ಲಿನ ಪ್ರಮಖ ಅಂಶಗಳು

  • ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.
  • ಜನಸಂಖ್ಯಾ ರಿಜಿಸ್ಟ್ರಾರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು
  • ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್ರಿಜಿಸ್ಟ್ರಾರ್ಗಳ ನೇಮಕಕ್ಕೆ ಅವಕಾಶ
  • ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ
  • ರಿಜಿಸ್ಟ್ರಾರ್ ಅಥವಾ ಜಿಲ್ಲಾರಿಜಿಸ್ಟ್ರಾರ್ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.
  • ಡೇಟಾಬೇಸ್ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (NPR), ಪಡಿತರ ಚೀಟಿಗಳು ಮತ್ತು ಆಸ್ತಿ ನೋಂದಣಿ ದಾಖಲೆಗಳನ್ನು ಸಹ ನವೀಕರಿಸುತ್ತದೆ.
  • ಇದು ದತ್ತು ಪಡೆದ, ಅನಾಥ, ಪರಿತ್ಯಕ್ತ, ಶರಣಾದ ಮತ್ತು ಬಾಡಿಗೆ ಮಕ್ಕಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ.