Published on: December 6, 2022

ಜೆಇ ಮೆದುಳು ಜ್ವರ ಲಸಿಕಾ ಅಭಿಯಾನ

ಜೆಇ ಮೆದುಳು ಜ್ವರ ಲಸಿಕಾ ಅಭಿಯಾನ

ಸುದ್ದಿಯಲ್ಲಿ ಏಕಿದೆ?

ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1 – 15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ.

ಮುಖ್ಯಾಂಶಗಳು

  • ಕರ್ನಾಟಕ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳು, ಆರೋಗ್ಯ ಸಂಸ್ಥೆಗಳು ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ.
  • ಜೆನವ್ಯಾಕ್ ಜೆಇ ಲಸಿಕೆಗಳನ್ನು ಕೇಂದ್ರ ಸರ್ಕಾರ ಉಚಿತವಾಗಿ ಸರಬರಾಜು ಮಾಡಿದೆ.
  • ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್ಸೆಫಲೈಟಿಸ್ (ಜೆಇ) ಪಿಡುಗು ಗುರುತಿಸಲಾಗಿದೆ. ಭಾರತವೂ ಸೇರಿದಂತೆ ಏಷ್ಯಾದ 11 ರಾಷ್ಟ್ರಗಳು ಈ ಪಟ್ಟಿಯಲ್ಲಿದೆ.
  • ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಗುಣಮುಖರಾದ ಶೇ.30 ರಿಂದ ಶೇ.50 ರಷ್ಟು ಪ್ರಕರಣಗಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟಾಗಿವೆ.
  • ರೋಗ ಪತ್ತೆ ಮಾಡಲು ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ (ಎಸ್ಎಸ್ಎಲ್) ಗಳನ್ನು ಸಜ್ಜುಗೊಳಿಸಲಾಗಿದೆ.

ಹೇಗೆ ಹರಡುತ್ತದೆ :

  • ಪ್ಲೇವಿ ಎಂಬ ವೈರಾಣುವಿನಿಂದ ಹರಡುತ್ತದೆ.
  • ಕ್ಯುಲೆಕ್ಸ್ ಎಂಬ ಸೊಳ್ಳೆಗಳ ಮೂಲಕ ಈ ಸೋಂಕು ಹರಡುತ್ತದೆ.
  • ಹಂದಿಗಳು ಮತ್ತು ಕಾಡಿನ ಪಕ್ಷಿಗಳಲ್ಲಿರುವ ಈ ವೈರಾಣುವಿಗೆ ಮಾನವರು ಕಟ್ಟಕಡೆಯ ಅತಿಥೆಯ ಆಗಿರುತ್ತಾರೆ.
  • ಮರಣ ಪ್ರಮಾಣ: ಶೇ.20 ರಿಂದ ಶೇ.30 ರಷ್ಟಿದೆ.
  • ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955 ರಲ್ಲಿ ತಮಿಳುನಾಡಿನ ವೆಲ್ಲೂರ್ ನಲ್ಲಿ ವರದಿಯಾಗಿತ್ತು. ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡು ಬರುತ್ತಿದೆ.

ಲಕ್ಷಣಗಳು ಮತ್ತು ಪರಿಣಾಮಗಳು

  • ಸೋಂಕಿತರಲ್ಲಿ ಸೌಮ್ಯವಾದ ಜ್ವರ ಮತ್ತು ತಲೆನೋವು ಕಂಡುಬರಬಹುದು. ಅಥವಾ ಯಾವುದೇ ಲಕ್ಷಣಗಳು ಕಾಣಿಸದೆ ಇರಬಹುದು ದೇಹದಲ್ಲಿ ಸೋಂಕು ಕಾಣಿಸಿಕೊಳ್ಳಲು 4  ರಿಂದ 14 ದಿನಗಳನ್ನು ತಗೆದುಕೊಳ್ಳಬಹುದು.
  • ಮಕ್ಕಳಲ್ಲಿ ಹೊಟ್ಟೆನೋವು, ವಾಂತಿ ಆರಂಭಿಕ ಲಕ್ಷಣಗಳಾಗಿವೆ. ಸೋಂಕು ಉಲ್ಬಣಗೊಂಡರೆ ತೀವ್ರವಾದ ಜ್ವರ, ತಲೆನೋವು, ಗಂಟಲು ಬಿಗಿತ, ಪಾರ್ಶ್ವವಾಯು ಕೊನೆಗೆ ಕೋಮಾಗೆ ಜಾರುವ ಸಾಧ್ಯತೆಗಳಿವೆ.