Published on: April 27, 2024

ನಾಡಗೀತೆ

ನಾಡಗೀತೆ

ಸುದ್ದಿಯಲ್ಲಿ ಏಕಿದೆ? ಕರ್ನಾಟಕ ಶಿಕ್ಷಣ ಕಾಯ್ದೆ –1983ರ ಕಲಂ 3ರ ಪ್ರಕಾರ ಎಲ್ಲಾ ಶಾಲೆಗಳಲ್ಲಿ ಅಂದರೆ; ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡಬೇಕು’ ಎಂಬ ರಾಜ್ಯ ಸರ್ಕಾರದ ಆದೇಶವನ್ನು ನ್ಯಾಯಪೀಠ ಎತ್ತಿ ಹಿಡಿದಿದೆ.

ಮುಖ್ಯಾಂಶಗಳು

  • ‘ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
  • ಹಿನ್ನೆಲೆ:ಜಯ ಭಾರತ ಜನನಿಯ ತನುಜಾತೆ, ನಾಡಗೀತೆಯನ್ನು ಅನಂತಸ್ವಾ ಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂ ಬರ್ 25ರಂದುಹೊರಡಿಸಿದ ಆದೇಶವನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ನಿಮಗಿದು ತಿಳಿದಿರಲಿ

  • ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು 1924ರಲ್ಲಿ ‘ಕಿಶೋರ ಚಂದ್ರವಾಣಿ’ ಎಂಬ ಕಾವ್ಯನಾಮದಡಿ ಬರೆದರು.
  • 2004ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
  • ಗೀತೆಗೆ ಮೊಟ್ಟ ಮೊದಲ ಬಾರಿಗೆ ಮೈಸೂರು ಅನಂತಸ್ವಾಮಿ ಅವರು ರಾಗ ಸಂಯೋಜನೆ ಮಾಡಿದರು. ನಂತರದ ದಿನಗಳಲ್ಲಿ ಸಿ. ಅಶ್ವಥ್ ಅವರ ಸಂಯೋಜನೆ ಜನಪ್ರಿಯತೆ ಗಳಿಸಿತು.