Published on: July 11, 2024

ನಾವು ಮನುಜರು

ನಾವು ಮನುಜರು

ಸುದ್ದಿಯಲ್ಲಿ ಏಕಿದೆ? ಕರ್ನಾಟಕ ಮುಖ್ಯಮಂತ್ರಿ ಅವರು 2024–25ರ ಬಜೆಟ್ನಲ್ಲಿ ಘೋಷಿಸಿದ್ದ ‘ನಾವು ಮನುಜರು’ ಕಾರ್ಯಕ್ರಮವನ್ನು ಎಲ್ಲಾ ಶಾಲಾ-ಕಾಲೇಜುಗಳಲ್ಲೂ ಆರಂಭಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮುಖ್ಯಾಂಶಗಳು

  • ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಕಾರ್ಯಕ್ರಮ ಜಾರಿಗೊಳಿಸಲು ಸೂಚಿಸಲಾಗಿದೆ.
  • ವಾರಕ್ಕೆ ಎರಡು ಗಂಟೆಗಳನ್ನು (ತಲಾ 40 ನಿಮಿಷಗಳ ಮೂರು ಕಾರ್ಯಕ್ರಮ) ಮೀಸಲಿಡಲು ಸೂಚಿಸಲಾಗಿದೆ.
  • ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಾರ್ಯಕ್ರಮದ ಅನುಷ್ಠಾನಕ್ಕಾಗಿ ನಮೂನೆಯನ್ನು ಬಿಡುಗಡೆ ಮಾಡಿದೆ.
  • ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಮತ್ತು ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ(DSERT) ಗೆ ವರದಿಗಳನ್ನು ಸಲ್ಲಿಸಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಒಳಗೊಂಡಿರುವ ಥೀಮ್‌ಗಳು:

  • ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಮೌಲ್ಯಯುತ ಶಿಕ್ಷಣ ಮತ್ತು ಸಹಬಾಳ್ವೆಯನ್ನು ಉತ್ತೇಜಿಸಲು ಸಂಪನ್ಮೂಲ ವ್ಯಕ್ತಿಗಳು, ತಜ್ಞರನ್ನು ಆಹ್ವಾನಿಸಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
  • ದೇಶದ ಸಮಾಜ ಸುಧಾರಕರು, ಕ್ರಾಂತಿಗಳ ಮಾಹಿತಿ ಒದಗಿಸುವುದು, ಸಮೀಪದ ಐತಿಹಾಸಿಕ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದು, ಸಮಾಜದಲ್ಲಿನ ಅಸಮಾನತೆ ನಿವಾರಣೆ ಕುರಿತು ಚರ್ಚೆಗಳನ್ನು ಆಯೋಜಿಸಲಿದೆ.

ವೈಜ್ಞಾನಿಕ ಮನೋಭಾವ ಮತ್ತು ಪರಿಸರ ಜಾಗೃತಿ:

ವೈಜ್ಞಾನಿಕ ಮನೋಭಾವ ಮತ್ತು ಪರಿಸರ ಪ್ರಜ್ಞೆಯ ಪ್ರಚಾರ, ಮನೆಮದ್ದುಗಳು, ವಿಜ್ಞಾನ ಪ್ರಯೋಗಗಳು ಮತ್ತು ವಿದ್ಯಾರ್ಥಿಗಳಲ್ಲಿ ಕುತೂಹಲವನ್ನು ಬೆಳೆಸುವ ಕುರಿತು ಚರ್ಚೆಗಳು.

ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಹಬಾಳ್ವೆ:

ಮಧ್ಯಾಹ್ನದ ಊಟ, ಸಮುದಾಯ ಉಪಾಹಾರ (ಸಹಭೋಜನ) ಮತ್ತು ಶಾಲಾ ಉದ್ಯಾನದ ಮಹತ್ವವನ್ನು ಒತ್ತಿಹೇಳುವ ಚಟುವಟಿಕೆಗಳು

ಎಲ್ಲಾ ವಿದ್ಯಾರ್ಥಿಗಳಿಗೆ ಒಳಾಂಗಣ ಮತ್ತು ಹೊರಾಂಗಣ ಆಟಗಳು, ದೇಸಿ ಕ್ರೀಡೆಗಳು ಮತ್ತು ಸಮಾನ ಅವಕಾಶಗಳನ್ನು ಒದಗಿಸುವುದು