Published on: March 1, 2023

‘ನೃಪತುಂಗ ಸಾಹಿತ್ಯ ಪ್ರಶಸ್ತಿ’

‘ನೃಪತುಂಗ ಸಾಹಿತ್ಯ ಪ್ರಶಸ್ತಿ’


ಸುದ್ದಿಯಲ್ಲಿ ಏಕಿದೆ? 2022ನೇ ಸಾಲಿನ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ವೈದೇಹಿ ಅವರನ್ನು ಆಯ್ಕೆ ಮಾಡಲಾಗಿದೆ. ಇವರ ಜೀವಮಾನದ ಸಾಧನೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ನೃಪತುಂಗ ಪ್ರಶಸ್ತಿಗೆ ಆಯ್ಕೆಯಾದ ಎರಡನೇ ಮಹಿಳಾ ಸಾಹಿತಿ ವೈದೇಹಿ ಆಗಿದ್ದಾರೆ.


ಪ್ರಶಸ್ತಿ ನೀಡುವವರು : ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹಯೋಗದಲ್ಲಿ ನೀಡಲಾಗುತ್ತದೆ.

ಪ್ರಶಸ್ತಿ : ರೂ. 7 ಲಕ್ಷ ನಗದು ಮತ್ತು ಪ್ರಮಾಣಪತ್ರವನ್ನು ಈ ಪ್ರಶಸ್ತಿ ಒಳಗೊಂಡಿದೆ.

ವೈದೇಹಿ

  • ವೈದೇಹಿ ಎಂಬ ಕಾವ್ಯನಾಮದಿಂದ ಖ್ಯಾತರಾಗಿರುವ ಜಾನಕಿ ಶ್ರೀನಿವಾಸಮೂರ್ತಿ, ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರು.
  • ಇವರ ‘ನೀರೆಯರ ದಿನ’ ಎಂಬ ಒಂದು ಲೇಖನ ಸುಧಾ ಪತ್ರಿಕೆಯಲ್ಲಿ ಪ್ರಕಟಿಸುವಾಗ ಪತ್ರಿಕೆಯವರು ಇವರಿಗೆ ‘ವೈದೇಹಿ’ ಎಂಬ ಕಾವ್ಯ ನಾಮ ಕೊಟ್ಟರು.
  • ಜನನ : 12ನೆ ಫೆಬ್ರವರಿ 1945ರಂದು ಕುಂದಾಪುರದಲ್ಲಿ ಜನಿಸಿದರು
  • ಸಣ್ಣಕತೆ, ಕಾದಂಬರಿ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಹೀಗೆ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಅವರು ಬರೆದಿದ್ದಾರೆ. ಕರ್ನಾಟಕದಲ್ಲೇ ಅತೀ ಹೆಚ್ಚು ನಗದು ಮೊತ್ತ ಒಳಗೊಂಡ ಪ್ರಶಸ್ತಿ ಇದಾಗಿದೆ.
  • ಕಥಾಸಂಕಲನಗಳು: 1979ರಲ್ಲಿ ಮೂಡಿದ ‘ಮರ ಗಿಡ ಬಳ್ಳಿ’ಯಿಂದ ಮೊದಲುಗೊಂಡು, ಅಂತರಂಗದ ಪುಟಗಳು, ಗೋಲ, ಸಮಾಜ ಶಾಸ್ತ್ರಜ್ಞೆಯ ಟಿಪ್ಪಣಿಗೆ, ಅಮ್ಮಚ್ಚಿ ಎಂಬ ನೆನಪು, ಹಗಲು ಗೀಚಿದ ನೆಂಟ, ಕ್ರೌಂಚ ಪಕ್ಷಿಗಳು
  • ಕರ್ನಾಟಕ ರಾಜ್ಯ ಸರ್ಕಾರದಿಂದ ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಮತ್ತು ‘ಕ್ರೌಂಚ ಪಕ್ಷಿಗಳು’ ಎಂಬ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿವೆ.

ನೃಪತುಂಗ ಸಾಹಿತ್ಯ ಪ್ರಶಸ್ತಿ

  • ಮೊದಲ ಪ್ರಶಸ್ತಿ: 2007
  • ಮೊದಲ ವಿಜೇತರು : ಜವರೇಗೌಡ ಎಲ್
  • ನೃಪತುಂಗ ಸಾಹಿತ್ಯ ಪ್ರಶಸ್ತಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಸ್ಥಾಪಿಸಿರುವ ಪ್ರಶಸ್ತಿಯಾಗಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ದವಾದ ಹಾಗೂ ಮೌಲಿಕವಾದ ಕೊಡುಗೆ ನೀಡಿದ ಬರಹಗಾರರೊಬ್ಬರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ.
  • ಪ್ರಶಸ್ತಿಯನ್ನು ಯಾವುದೇ ಕೃತಿಗೆ ನೀಡದೆ, ವ್ಯಕ್ತಿಯ ಸಮಗ್ರ ಕೊಡುಗೆಯನ್ನು ಪರಿಗಣಿಸಲಾಗುತ್ತದೆ.

ನಿಮಗಿದು ತಿಳಿದಿರಲಿ

2012ರಲ್ಲಿ ಈ ಪ್ರಶಸ್ತಿಗೆ ಲೇಖಕಿ ಸಾರಾ ಅಬೂಬಕರ್ ಆಯ್ಕೆಯಾಗಿದ್ದರು.