Published on: October 9, 2021

ನೊಬೆಲ್ ಶಾಂತಿ ಪ್ರಶಸ್ತಿ

ನೊಬೆಲ್ ಶಾಂತಿ ಪ್ರಶಸ್ತಿ

ಸುದ್ಧಿಯಲ್ಲಿ ಏಕಿದೆ? ರಷ್ಯಾ ಮತ್ತು ಫಿಲಿಪ್ಪೀನ್ಸ್‌ ಇಬ್ಬರು ಪತ್ರಕರ್ತರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ವಿಶ್ವಾದ್ಯಂತ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದಕ್ಕೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಪ್ರಶಸ್ತಿ ಸಮಿತಿಯು, ಅದರ ರಕ್ಷಣೆಗಾಗಿ ಈ ಇಬ್ಬರೂ ಪತ್ರಕರ್ತರು ನಡೆಸಿದ ಪ್ರಯತ್ನವನ್ನು ಮನ್ನಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಫಿಲಿಪ್ಪೀನ್ಸ್‌ನ  ಮರಿಯಾ ರೆಸ್ಸಾ, ರಷ್ಯಾದ ಡಿಮಿಟ್ರಿ ಮುರಾಟೋವ್ ಪ್ರಶಸ್ತಿ ಪುರಸ್ಕೃತರು.

  • ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಧೈರ್ಯದಿಂದ ಹೋರಾಡಿದ್ದಕ್ಕಾಗಿ ಪ್ರಶಸ್ತಿಯನ್ನು ನೀಡಲಾಗಿದೆ.ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯವು ವಿಶ್ವದಲ್ಲಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸುತ್ತಿದೆ. ಅದರ ರಕ್ಷಣೆಗಾಗಿ ನಿಲ್ಲುವ ಎಲ್ಲ ಪತ್ರಕರ್ತರನ್ನು ಈ ಇಬ್ಬರೂ ಪ್ರಶಸ್ತಿ ಪುರಸ್ಕೃತರು ಪ್ರತಿನಿಧಿಸುತ್ತಾರೆ.
  • 1935ರ ನಂತರ ಇದೇ ಮೊದಲ ಬಾರಿಗೆ ಪತ್ರಕರ್ತರಿಗೆ ಶಾಂತಿ ಪ್ರಶಸ್ತಿ ನೀಡಲಾಗುತ್ತಿದೆ. ಜರ್ಮನಿಯ ಪತ್ರಕರ್ತ ಕಾರ್ಲ್‌ ವಾನ್‌ ಒಸಿಟೆಸ್ಕಿ ಅವರು ತಮ್ಮ ದೇಶ ಜಾಗತಿಕ ಯುದ್ಧಾ ನಂತರ ಹೇಗೆ ಮತ್ತೆ ಶಸ್ತ್ರಸಜ್ಜಿಕೆ ಆರಂಭಿಸಿತ್ತು ಎಂಬುದನ್ನು ಜಗತ್ತಿಗೆ ತಿಳಿಸಿದ್ದರು. ಅದಕ್ಕಾಗಿ ಅವರಿಗೆ ಶಾಂತಿ ಪ್ರಶಸ್ತಿ ನೀಡಲಾಗಿತ್ತು.
  • ಮುಕ್ತ, ಸ್ವತಂತ್ರ ಮತ್ತು ಸತ್ಯಾಧಾರಿತ ಪತ್ರಿಕೋದ್ಯಮವು ಅಧಿಕಾರ ದುರುಪಯೋಗ, ಸುಳ್ಳು ಮತ್ತು ಯುದ್ಧದ ವಿರುದ್ಧ ರಕ್ಷಣೆಯಂತೆ ನಿಲ್ಲುತ್ತದೆ.
  • ನೊಬೆಲ್‌ ಪ್ರಶಸ್ತಿಯನ್ನು ಸ್ಥಾಪಿಸಿದ ಆಲ್ಫ್ರೆಡ್‌ ನೊಬೆಲ್‌ ಅವರ ಪುಣ್ಯಸ್ಮರಣೆಯಾದ ಡಿ.10ರಂದು ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
  • ಪ್ರಶಸ್ತಿಯು ಚಿನ್ನದ ಪದಕ ಮತ್ತು 10 ಮಿಲಿಯನ್ ಸ್ವೀಡಿಷ್ ಕ್ರೋನರ್ (₹55 ಕೋಟಿ) ಒಳಗೊಂಡಿರಲಿದೆ.