Published on: January 11, 2023

ನ್ಯಾ. ಎ.ಜೆ. ಸದಾಶಿವ ಆಯೋಗ

ನ್ಯಾ. ಎ.ಜೆ. ಸದಾಶಿವ ಆಯೋಗ


ಸುದ್ದಿಯಲ್ಲಿ ಏಕಿದೆ? ಪರಿಶಿಷ್ಟರ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕವಾಗಿದ್ದು, ಈ ವರದಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಪ್ರತಿಭಟನೆ ಮಾಡುತ್ತಿದೆ.


ಮುಖ್ಯಾಂಶಗಳು

  • ಪರಿಶಿಷ್ಟರ ಮೀಸಲಾತಿ ಸೌಲಭ್ಯವನ್ನು ಬಲಿಷ್ಠರು ಮಾತ್ರ ಪಡೆದುಕೊಳ್ಳುತ್ತಿದ್ದು ಒಳಮೀಸಲಾತಿ ನೀಡದೇ ಹೋದರೆ ಈ ಸೌಲಭ್ಯ ಪರಿಣಾಮಕಾರಿಯಾಗಿ ಹಂಚಿಕೆಯಾಗುವುದಿಲ್ಲ ಎಂಬ ಅಸಮಾಧಾನ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಳಮೀಸಲಾತಿ ಸೌಲಭ್ಯ ನೀಡುವ ಸಂಬಂಧ ಪರಿಶೀಲನೆ ನಡೆಸಲು ಸಂಪುಟ ಉಪಸಮಿತಿ ರಚಿಸಿದೆ. ಈ ಉಪಸಮಿತಿ ಬೇಡಿಕೆಯನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ.
  • ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃ‍ತ್ವದಲ್ಲಿ ಸಂಪುಟ ಉಪಸಮಿತಿ ರಚಿಸಿದೆ. ಉಪ ಸಮಿತಿಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇದ್ದಾರೆ.

ಸುಪ್ರೀಂ ಕೋರ್ಟ್ ಹೇಳಿಕೆ :

  • 2005 ರಲ್ಲಿ ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ಸರ್ಕಾರ ಪ್ರಕರಣದಲ್ಲಿ ಒಳಮೀಸಲಾತಿ ಕೊಡುವುದಕ್ಕೆ ರಾಜ್ಯಕ್ಕೆ ಅಧಿಕಾರವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.
  • ಐದು ಜನರ ಪೀಠ ರಾಜ್ಯಗಳಿಗೆ ಅಧಿಕಾರವಿದೆ. ಆದರೆ 7 ರಿಂದ 9 ಜನರ ನ್ಯಾಯಾಧೀಶರ ಪೀಠದಲ್ಲಿ ಅಂತಿಮ ತೀರ್ಮಾನ ವಾಗಬೇಕು ಎಂದು ಹೇಳಿದೆ.

ಸದಾಶಿವ ಆಯೋಗ :

  • ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಜನಪರ ಸಂಘಟನೆಗಳೆಲ್ಲಾ ಒಂದಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಯಾಗಬೇಕೆಂದು ಹೋರಾಟ ಮಾಡಿದ್ದರ ಪರಿಣಾಮ ಈ ಹಿಂದಿನ ಧರ್ಮಸಿಂಗ್ ನೇತೃತ್ವದ ಸರ್ಕಾರ ಒಂದು ಆಯೋಗವನ್ನು ರಚನೆ ಮಾಡಿ ಆ ಆಯೋಗದ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ ಎ ಜೆ ಸದಾಶಿವರವರನ್ನು ನೇಮಕ ಮಾಡಿತ್ತು. ನ್ಯಾಯಮೂರ್ತಿ ಸದಾಶಿವರವರು ಏಳು ವರ್ಷಕ್ಕೂ ಹೆಚ್ಚುಕಾಲ ಪರಿಶಿಷ್ಟ ಜಾತಿಗಳ ಸಾಮಾಜಿಕ ಶೈಕ್ಷಣಿಕ ಮತ್ತು ಉದ್ಯೋಗದ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ 2012ರಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು.

ಸದಾಶಿವ ಆಯೋಗದ ಶಿಫಾರಸ್ಸು

  • ಎಡಗೈ ಸಮುದಾಯ ಶೇ. 6
  • ಬಲಗೈ ಸಮುದಾಯ ಶೇ. 5
  • ಸ್ಪೃಶ್ಯ ಸಮುದಾಯಗಳಿಗೆ ಶೇ. 3
  • ಇತರ ಸಮುದಾಯಗಳಿಗೆ ಶೇ. 1

ವರದಿಯ ಬಗ್ಗೆ ಆಕ್ಷೇಪ

  • ಕೆಲವು ಸಮುದಾಯಗಳು ಸದಾಶಿವ ವರದಿಯ ಬಗ್ಗೆ ಆಕ್ಷೇಪಗಳನ್ನು ಹೊಂದಿವೆ. ಕೇಂದ್ರ ಸರ್ಕಾರದ ಜಾತಿಗಣತಿಯ ಅಂಕಿಅಂಶ ಮತ್ತು ಸದಾಶಿವ ವರದಿಯ ಅಂಕಿಅಂಶಗಳಿಗೆ ಸಾಕಷ್ಟು ವ್ಯತ್ಯಾಸಗಳಿವೆ ಎಂಬ ಆರೋಪಗಳನ್ನು ಮಾಡುತ್ತಿವೆ. ಇನ್ನೊಂದು ಗಣತಿಯ ನಂತರವೇ ಅಂತಿಮ ತೀರ್ಮಾನವಾಗ್ಬೇಕು ಎಂದು ಒತ್ತಾಯಿಸುತ್ತಿವೆ.

ನ್ಯಾ. ನಾಗಮೋಹನ್ ದಾಸ ಆಯೋಗ

  • ಪರಿಶಿಷ್ಟ ಜಾತಿ ಮತ್ತು ಪಂಗಡದವರು ಅವರ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಬೇಕೆಂಬ ಒತ್ತಡ ಸರಕಾರದ ಮೇಲಿತ್ತು ಆದ್ದರಿಂದ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲು ಪ್ರಮಾಣ ಹೆಚ್ಚಳದ ಪರಿಶೀಲನೆಗಾಗಿ ನ್ಯಾ.ನಾಗಮೋಹನದಾಸ್‌ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

ನ್ಯಾ. ನಾಗಮೋಹನ್ ದಾಸ ಆಯೋಗದ ಶಿಫಾರಸ್ಸು

  • ಪರಿಶಿಷ್ಟ ಜಾತಿಗೆ ಶೇ. 15ರಿಂದ ಶೇ.17 ಏರಿಕೆ
  • ಪರಿಶಿಷ್ಟ ಪಂಗಡಕ್ಕೆ ಶೇ. 3 ರಿಂದ ಶೇ.7 ಏರಿಕೆ

ವಿವಿಧ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಎಷ್ಟಿದೆ?