Published on: September 30, 2021

ಪಿಎಂ ಪೋಷಣ್’ ಯೋಜನೆ

ಪಿಎಂ ಪೋಷಣ್’ ಯೋಜನೆ

ಸುದ್ಧಿಯಲ್ಲಿ ಏಕಿದೆ? ದೇಶದಾದ್ಯಂತ ಸರ್ಕಾರಿ ಹಾಗೂ ಅನುದಾನಿತ  ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಬಿಸಿಯೂಟ ಒದಗಿಸುವ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಏನಿದು ಯೋಜನೆ ?

  • ಪ್ರಸ್ತುತ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆಯಲ್ಲಿ ವಿಲೀನಗೊಳಿಸಲಾಗುವುದು. 2021–22ರಿಂದ 2025–26 ವರೆಗೆ ಇದು ಜಾರಿಯಲ್ಲಿರುವುದು.
  • ದೇಶದ 11.20 ಲಕ್ಷ ಶಾಲೆಗಳ 11.80 ಕೋಟಿ ಮಕ್ಕಳಿಗೆ ಈ ಯೋಜನೆಯ ಲಾಭ.
  • ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಕಾರ್ಯದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು ಸೇರಿದಂತೆ ಹಲವಾರು ಹೊಸ ಅಂಶಗಳನ್ನು ಯೋಜನೆ ಒಳಗೊಂಡಿದೆ. ಹಬ್ಬ ಹಾಗೂ ವಿಶೇಷ ದಿನಗಳಂದು ಜನರು ಶಾಲಾ ಮಕ್ಕಳಿಗೆ ವೈವಿಧ್ಯವಾದ ಊಟ ನೀಡಲು ಅವಕಾಶ ನೀಡುವ ವಿಶೇಷ ಕಾರ್ಯಕ್ರಮವನ್ನು ಈ ಯೋಜನೆ ಒಳಗೊಂಡಿದೆ.
  • ಶಾಲೆಗಳಲ್ಲಿರುವ ಕೈತೋಟಗಳಲ್ಲಿ ಬೆಳೆದ ತರಕಾರಿ, ಬೆಳೆಗಳನ್ನು ಬಳಸಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವುದು, ಸಾಂಪ್ರದಾಯಿಕ ಅಡುಗೆ ಸ್ಪರ್ಧೆ ಆಯೋಜನೆಯನ್ನು ಪ್ರೋತ್ಸಾಹಿಸಲಾಗುತ್ತದೆ. ಯೋಜನೆ ಅನುಷ್ಠಾನದಲ್ಲಿ ಕೃಷಿಕರ ಸಂಘಟನೆಗಳು (ಎಫ್‌ಪಿಒ) ಹಾಗೂ ಮಹಿಳಾ ಸ್ವಸಹಾಯ ಸಂಘಗಳನ್ನು ಸಹ ತೊಡಗಿಸಲಾಗುತ್ತದೆ.