ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನಾ
ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನಾ
ಸುದ್ದಿಯಲ್ಲಿ ಏಕಿದೆ? ಸೌರವಿದ್ಯುತ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನಾ’ (ಸೌರ ಮೇಲ್ಚಾವಣಿ ಯೋಜನೆಯ ಮರುನಾಮಕರಣ) ಆರಂಭಿಸುತ್ತಿದೆ.
ಮುಖ್ಯಾಂಶಗಳು
- ಈ ಯೋಜನೆಗಾಗಿ ಒಟ್ಟು ₹75 ಸಾವಿರ ಕೋಟಿಗಿಂತ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗುತ್ತದೆ.
- ಈ ಯೋಜನೆಯನ್ನು ತಳಮಟ್ಟದಲ್ಲಿ ಜನಪ್ರಿಯಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಪಂಚಾಯಿತಿಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ.
- ಸಬ್ಸಿಡಿ ಮೊತ್ತವನ್ನು ಯೋಜನೆಗೆ ಸೇರುವವರ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
- ಸುಸ್ಥಿರ ಅಭಿವೃದ್ಧಿಯನ್ನು ಹೆಚ್ಚಿಸಲು ಹಾಗೂ ಜನರ ಕಲ್ಯಾಣ ಹೆಚ್ಚಿಸಲು ಯೋಜನೆಯನ್ನು ಜಾರಿ ತರಲಾಗಿದೆ. ಜನರು ಮನೆ ಮೇಲೆಯೇ ಸೌರ ಘಟಕಗಳನ್ನು ಸ್ಥಾಪಿಸಿ ವಿದ್ಯುತ್ ಉತ್ಪಾದಿಸಬಹುದಾಗಿದೆ.
ನೋಡಲ್ ಏಜನ್ಸಿ: ನೋಡಲ್ ಏಜನ್ಸಿ : REC (ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್) ಲಿಮಿಟೆಡ್
ಉದ್ದೇಶ
ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ತಲಾ 300 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ಪೂರೈಸುವ ಗುರಿಯನ್ನು ಈ ಯೋಜನೆಯು ಹೊಂದಿದೆ. ಭಾರತವು ತನ್ನ ಇಂಧನ ಅಗತ್ಯಗಳಿಗೆ ಕಲ್ಲಿದ್ದಲು ಆಧಾರಿತ ವಿದ್ಯುತ್ ಮೂಲಗಳನ್ನು ಗಣನೀಯವಾಗಿ ಅವಲಂಬಿಸಿದೆ. ಹೀಗಾಗಿ ಈ ಸೌರ ಮೇಲ್ಛಾವಣಿ ಯೋಜನೆಯು ಸಾಂಪ್ರದಾಯಿಕ ವಿದ್ಯುತ್ ಮೂಲಗಳ ಅವಲಂಬನೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ.
ಪ್ರಯೋಜನ
ಈ ಯೋಜನೆಯು ಜನರ ಆದಾಯ ಹೆಚ್ಚಿಸುತ್ತದೆ, ವಿದ್ಯುತ್ ಬಿಲ್ ಮೊತ್ತವನ್ನು ತಗ್ಗಿಸುತ್ತದೆ ಹಾಗೂ ಉದ್ಯೋಗ ಸೃಷ್ಟಿಸುತ್ತದೆ. ಬ್ಯಾಂಕ್ ಸಾಲವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಈ ಮೂಲಕ ಜನರ ಮೇಲೆ ವೆಚ್ಚದ ಹೊರೆ ಬೀಳದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳುತ್ತದೆ.
Super sir… Kpsc magazine and mahithi magazine 2du bekitthu. Cost???