Published on: March 19, 2024

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ

ಸುದ್ದಿಯಲ್ಲಿ ಏಕಿದೆ?ಹಠಾತ್ ಹೃದಯಾಘಾತಗಳನ್ನು ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಕರ್ನಾಟಕದ ಆರೋಗ್ಯ ಸಚಿವರು ಅಧಿಕೃತ ಚಾಲನೆ ನೀಡಿದರು.

ಮುಖ್ಯಾಂಶಗಳು

  • ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.
  • ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಉಚಿತವಾಗಿ ಪಡೆಯಬಹುದಾಗಿದೆ.
  • ಹೃದಯಾಘಾತ ರೋಗಿಗಳ ಉತ್ತಮ ಹಾಗೂ ಗುಣ ಮಟ್ಟದ ನಿರ್ವಹಣೆಗಾಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ 2 ದಿವಸದ CCLS (Coronary Care Life Support) ತರಬೇತಿಯನ್ನು ಮತ್ತು 01 ದಿನದ STLS (Safe Transport Life Support) ತರಬೇತಿಯನ್ನು ಜೀವರಕ್ಷ ಟ್ರಸ್ಟ್ ವತಿಯಿಂದ ನೀಡಲಾಗುವುದು.
  • 41 AED – Automated External Defibrillator ಸಾಧನಗಳನ್ನು ಜನದಟ್ಟನೆಯ ಸಾರ್ವಜನಿಕ ಸ್ಥಳಗಳಲ್ಲಿ (ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ನ್ಯಾಯಾಲಯ ಸಂಕೀರ್ಣಗಳು ಆಸ್ಪತ್ರೆಗಳಲ್ಲಿ) ಹಠಾತ್ ಹೃದಯಾಘಾತ ದಿಂದಾಗುವ ಮರಣಗಳನ್ನು ತಪ್ಪಿಸಲು 2ನೇ ಹಂತದ ಪ್ರಮುಖ ಅಂಶವಾಗಿದ್ದು ಅತಿ ಶೀಘ್ರದಲ್ಲಿ ಅಳವಡಿಸಲಾಗುವುದು.

ಏನಿದು ಹೃದಯ ಜ್ಯೋತಿ ಯೋಜನೆ?

  • ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, 71ತಾಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನ ಸ್ಪೋಕ್ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರದಂತೆ 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನ ಹಬ್ ಕೇಂದ್ರಗಳನ್ನಾಗಿ ರಚಿಸಲಾಗಿದೆ.
  • ಎದೆನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ 6 ನಿಮಿಷದೊಳಗೆ ಅವರ ಕಂಡಿಷನ್ ಕ್ರಿಟಕಲ್ ಹಂತದಲ್ಲಿದೆಯೋ ಇಲ್ಲವೋ ಎಂಬುದನ್ನ AI ತಂತ್ರಜ್ಞಾನದ ಮೂಲಕ ಪತ್ತೆಹಚ್ಚಲಾಗುವುದು.
  • Tricog ಸಂಸ್ಥೆಯವರ AI ತಂತ್ರಜ್ಞಾನದ ಮೂಲಕ ಮೇಲ್ವಿಚಾರಣೆ ನಡೆಸಿ, ಎದೆನೋವು ಕಾಣಿಸಿಕೊಂಡವರ ಇಸಿಜಿ ಪರೀಕ್ಷೆಯಲ್ಲಿ ತೀವ್ರ ಹೃದಯಾಘಾತವಾಗುವ ಮೂನ್ಸೂಚನೆಯನ್ನ ನೀಡುತ್ತಾರೆ.
  • ಕ್ರಿಟಿಕಲ್ ಎಂದು ಖಚಿತವಾದ ತಕ್ಷಣವೇ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನ ಸ್ಪೋಕ್ ಕೇಂದ್ರಗಳಾದ ತಾಲೂಕು ಆಸ್ಪತ್ರೆಯಲ್ಲೇ ನೀಡಲಾಗುವುದು.

ಉದ್ದೇಶ

ಇದರಿಂದ ಹಠಾತ್ ಹೃದಯಾಘಾತವನ್ನ ತಡೆಯುವುದರೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಅತ್ಯಾದುನಿಕ ಅಂಬುಲೆನ್ಸ್ ನಲ್ಲಿ ಹಬ್ ಕೇಂದ್ರಳಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕಳಿಸಿಕೊಡಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿಯೂ ಉಚಿತ ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಗೋಲ್ಡನ್ ಅವರ್ ಒಳಗಡೆ ಜೀವ ಉಳಿಸುವ ಚಿಕಿತ್ಸೆ ದೊರೆಯುವಂತೆ ಯೋಜನೆ ರೂಪಿಸಲಾಗಿದೆ.‌