Published on: September 3, 2021

‘ಪೆಡ್ರೋ’ ಚಿತ್ರ

‘ಪೆಡ್ರೋ’ ಚಿತ್ರ

ಸುದ್ಧಿಯಲ್ಲಿ ಏಕಿದೆ? ರಿಷಬ್​ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್​ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ದಕ್ಷಿಣ ಕೊರಿಯಾದ ಬುಸಾನ್​ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು, ಬುಸಾನ್​ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

  • ‘ಪೆಡ್ರೋ’ ಸಿನಿಮಾ ಈ ಮೊದಲು ಎನ್‌ಎಫ್‌ಡಿಸಿ ಫಿಲ್ಮ್ ಬಜಾರ್‌ನ ವರ್ಕ್‌ ಇನ್ ಪ್ರೊಗ್ರೆಸ್ ಲ್ಯಾಬ್‌ಗೆ ಆಯ್ಕೆ ಆಗಿ ಪ್ರಶಸ್ತಿ ಸಹ ಪಡೆದುಕೊಂಡಿತ್ತು.
  • ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ, ಗೋಪಾಲ ಹೆಗಡೆ, ರಾಮಕೃಷ್ಣ ಭಟ್, ಮೇಧಿನಿ ಕೆಳಮನೆ, ನಾಗರಾಜ ಹೆಗಡೆ ಮುಂತಾದವರು ನಟಿಸಿದ್ದಾರೆ.