Published on: January 25, 2024

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ 2024

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ 2024

ಸುದ್ದಿಯಲ್ಲಿ ಏಕಿದೆ? ವಿವಿಧ ಕ್ಷೇತ್ರಗಳಲ್ಲಿ ಅಧಮ್ಯ ಸಾಧನೆಗೈದ 19 ಮಕ್ಕಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಮುಖ್ಯಾಂಶಗಳು

ಕೇಂದ್ರಾಡಳಿತ ಪ್ರದೇಶ ಮತ್ತು 18 ರಾಜ್ಯಗಳ ಒಟ್ಟು 9 ಬಾಲಕರು ಹಾಗೂ 10 ಬಾಲಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ 2024 ಅನ್ನು ಆರು ವಿಭಾಗಗಳಲ್ಲಿ ನೀಡಲಾಗುತ್ತಿದೆ. ಕಲೆ ಮತ್ತು ಸಂಸ್ಕೃತಿ (7), ಶೌರ್ಯ (1) ವಿಜ್ಞಾನ ಮತ್ತು ತಂತ್ರಜ್ಞಾನ (1), ಸಾಮಾಜಿಕ ಸೇವೆ (4) ಕ್ರೀಡೆ (5) ಹಾಗೂ ಆವಿಷ್ಕಾರ ಕ್ಷೇತ್ರದಲ್ಲಿ ಒಬ್ಬರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಉದ್ದೇಶ

5 ರಿಂದ 18 ವರ್ಷದೊಳಗಿನ ಮಕ್ಕಳ ಸಾಧನೆಯನ್ನು ಗುರುತಿಸಿ ಗೌರವಿಸುವುದೇ ಈ ಪ್ರಶಸ್ತಿಯ ಮುಖ್ಯ ಉದ್ದೇಶವಾಗಿದೆ.

ಕರ್ನಾಟಕದ ಚಾರ್ವಿ ಅನಿಲಕುಮಾರ ಗೆ  ಪ್ರಶಸ್ತಿ

ಕರ್ನಾಟಕದ ಚೆಸ್ ಮಾಸ್ಟರ್ ಚಾರ್ವಿ ಅನಿಲಕುಮಾರ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ 2024 ಗೆ ಆಯ್ಕೆಯಾಗಿದ್ದಾರೆ.  2022 ರಲ್ಲಿ ಜಾರ್ಜಿಯಾದಲ್ಲಿ ನಡೆದ ವಿಶ್ವ ಕೆಡೆಟ್ಸ್ ಚೆಸ್ ಚಾಂಪಿಯನ್ಶಿಪ್ನಲ್ಲಿ 8 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವ ಚಾಂಪಿಯನ್ಆಗಿದ್ದರು.

ಪ್ರಶಸ್ತಿಯ ವಿವರ ಮತ್ತು ಹಿನ್ನೆಲೆ

  • ಮಕ್ಕಳಿಗಾಗಿ ಭಾರತದ ಅತ್ಯುನ್ನತ ನಾಗರಿಕ ಗೌರವವಾಗಿದೆ
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ವಾರ್ಷಿಕವಾಗಿ ನೀಡಲಾಗುತ್ತದೆ.
  • ಪ್ರಶಸ್ತಿಯು 1 ಲಕ್ಷ ನಗದು, ಪದಕ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿರಲಿದೆ.
  • ಬಾಲ ಕಲ್ಯಾಣ ಪುರಸ್ಕಾರ (1979 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಸ್ಥಾಪಿಸಲ್ಪಟ್ಟವು) ಮತ್ತು ರಾಷ್ಟ್ರೀಯ ಮಕ್ಕಳ ಪ್ರಶಸ್ತಿಯಾಗಿದ್ದ ಬಾಲ ಶಕ್ತಿ ಪುರಸ್ಕಾರವನ್ನು (ಎನ್‌ಜಿಒ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‌ಫೇರ್ 1996 ರಲ್ಲಿ ಸ್ಥಾಪಿಸಲಾಯಿತು) 2018 ರಲ್ಲಿ, ಈ ಎರಡು ಪ್ರಶಸ್ತಿಗಳನ್ನು ಸಂಯೋಜಿಸಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಎಂದು ಮರುನಾಮಕರಣ ಮಾಡಲಾಯಿತು.