Published on: January 10, 2022

ಪ್ರೊ.ಚಂದ್ರಶೇಖರ್ ಪಾಟೀಲ್

ಪ್ರೊ.ಚಂದ್ರಶೇಖರ್ ಪಾಟೀಲ್

ಸುದ್ಧಿಯಲ್ಲಿ ಏಕಿದೆ ? ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಅವರು ಬೆಂಗಳೂರಿನಲ್ಲಿ ನಿಧನರಾದರು.

ಮುಖ್ಯಾಂಶಗಳು

  • ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರು. ಚಂದ್ರಶೇಖರ್ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾದವರು.
  • ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು
  • 2017ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ.
  • ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು.

ಚಂಪಾ ಕೃತಿಗಳು

  • ಕನ್ನಡ ಬರ್‍ರೀ ನಮ್ಮ ಸಂಗಡ, ಸಂಕ್ರಮಣ ಕಾವ್ಯ, ಗಾಂಧಿ ಗಾಂಧಿ, ಜೂನ್‌ 75 ಮಾರ್ಚ್ 77, ಬಂಡಾಯ ಮತ್ತು ಸಾಹಿತ್ಯ, ನೆಲ್ಸನ್‌ಮಂಡೇಲಾ, ಕನ್ನಡನಾಡಿಗೊಂದು ಪ್ರಾದೇಶಿಕ ಪಕ್ಷ, ಸಂಕ್ರಮಣ ಸಾಹಿತ್ಯ (3 ಸಂಪುಟಗಳಲ್ಲಿ), ಗಾಂಧಿ ಎನ್ನುವ ಹೆಸರು… ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, 26 ದಿನ 25 ರಾತ್ರಿ, ಇಂಗ್ಲಿಷ್‌ ಕೃತಿ ಅಟ್‌ದಿ ಅದರ್‌ ಎಂಡ್‌ .

ಕವನ ಸಂಕಲನ

  • ಬಾನುಲಿ, ಮಧ್ಯಬಿಂದು, ಹತ್ತೊಂಬತ್ತು ಕವನಗಳು, ಗಾಂಧಿಸ್ಮರಣೆ, ಓ! ನನ್ನ ದೇಶ ಬಾಂಧವರೇ, ಹೂವು ಹೆಣ್ಣು ತಾರೆ, ಅರ್ಧ ಸತ್ಯದ ಹುಡುಗಿ, ಗುಂಡಮ್ಮನ ಹಾಡು, ಶಾಲ್ಮಲಾ ನನ್ನ ಶಾಲ್ಮಲಾ, ದೇವಬಾಗ.

ನಾಟಕಗಳು:

  • ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ

ಪ್ರಶಸ್ತಿಗಳು

  • ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76)
  • ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (1988)
  • ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ (1989)
  • ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ (1992)
  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1995)
  • ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ (1996)
  • ಸಂದೇಶ ಮಾಧ್ಯಮ ಪ್ರಶಸ್ತಿ (1996)
  • ಕರುನಾಡ ಭೂಷಣ ಪ್ರಶಸ್ತಿ (2006)
  • ಆಳ್ವಾಸ್ ನುಡಿಸಿರಿ ಪ್ರಶಸ್ತಿ (2011)
  • ಪಂಪ ಪ್ರಶಸ್ತಿ (2011)