Published on: October 22, 2022
ಬಾಹ್ಯಾಕಾಶದಲ್ಲಿ ಸೂಕ್ಷ್ಮಜೀವಿಗಳ ಅಧ್ಯಯನ
ಬಾಹ್ಯಾಕಾಶದಲ್ಲಿ ಸೂಕ್ಷ್ಮಜೀವಿಗಳ ಅಧ್ಯಯನ
ಸುದ್ಧಿಯಲ್ಲಿ ಏಕಿದೆ?
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ (ಐಎಸ್ಎಸ್) ಸೂಕ್ಷ್ಮಾಣುಜೀವಿಗಳ ನಡುವಿನ ವರ್ತನೆ ಕುರಿತು ಮದ್ರಾಸ್ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ–ಎಂ) ಮತ್ತು ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿ (ಜೆಪಿಎಲ್) ಸಂಶೋಧಕರು ಮಹತ್ವದ ಅಧ್ಯಯನ ನಡೆಸಿವೆ.
ಮುಖ್ಯಾಂಶಗಳು
- ಐಎಸ್ಎಸ್‌ನಲ್ಲಿರುವ ಸೂಕ್ಷ್ಮಾಣುಜೀವಿಗಳಿಂದ ವಿವಿಧ ಸೂಕ್ಷ್ಮಾಣುಜೀವಿಗಳಿಗೂ ಪ್ರಯೋಜನವಿದೆ ಮತ್ತು ಶಿಲೀಂಧ್ರದ ಬೆಳವಣಿಗೆಯನ್ನೂ ತಡೆಯುತ್ತವೆ ಎನ್ನುವುದು ಈ ಅಧ್ಯಯನದಲ್ಲಿ ಕಂಡುಬಂದಿದೆ.
- ಐಎಸ್ಎಸ್ ಅನ್ನು ಸೋಂಕುರಹಿತಗೊಳಿಸಲು ಮತ್ತು ಗಗನಯಾತ್ರಿಗಳ ಆರೋಗ್ಯದ ಮೇಲಿನ ದುಷ್ಪರಿಣಾಮ ತಗ್ಗಿಸುವ ತಂತ್ರಜ್ಞಾನ ರೂಪಿಸಲು ಈ ಅಧ್ಯಯನ ನೆರವಾಗಲಿದೆ.
- ಐಎಸ್ಎಸ್‌ನ ಏಳು ಜಾಗಗಳಲ್ಲಿ ಮೂರು ಬಾರಿಯ ಬಾಹ್ಯಾಕಾಶ ಯಾನದ ವೇಳೆ ಸಂಗ್ರಹಿಸಿದ ಸೂಕ್ಷ್ಮಜೀವಿಯ ಮಾದರಿಯ ದತ್ತಾಂಶವನ್ನು ಸಂಶೋಧಕರು ವಿಶ್ಲೇಷಿಸಿದ್ದಾರೆ.
- ಐಎಸ್ಎಸ್‌ನಲ್ಲಿರುವ ಪ್ರಮುಖ ಸೂಕ್ಷ್ಮಾಣುಜೀವಿ ಕ್ಲೆಬ್ಸಿಯೆಲ್ಲಾ ನ್ಯುಮೋನಿಯೆ ತನ್ನ ಸುತ್ತಮುತ್ತಲಿನ ಇತರ ಸೂಕ್ಷ್ಮಾಣುಜೀವಿಗಳಿಗೆ ಪ್ರಯೋಜನಕಾರಿಯಾಗಿದೆ. ಅಲ್ಲದೆ, ಇದು ವಿಶೇಷವಾಗಿ ಪ್ಯಾಂಟೊಯ ತಳಿಯ ಬ್ಯಾಕ್ಟೀರಿಯಾ ಆಸ್ಪರ್ಜಿಲಸ್ ಶಿಲೀಂಧ್ರದ ಬೆಳವಣಿಗೆಯನ್ನು ತಡೆಯುತ್ತದೆ.
- ಈ ಅಧ್ಯಯನ ವರದಿಯು ಅಂತರರಾಷ್ಟ್ರೀಯ ವಿಜ್ಞಾನ ಪತ್ರಿಕೆ ‘ಮೈಕ್ರೋಬಯೋಮ್’ನಲ್ಲಿ ಪ್ರಕಟವಾಗಿದೆ.