Published on: April 6, 2024

ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಜಾಗೃತಿ ತರಬೇತಿ (START), 2024

ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಜಾಗೃತಿ ತರಬೇತಿ (START), 2024

ಸುದ್ದಿಯಲ್ಲಿ ಏಕಿದೆ? ಇತ್ತೀಚೆಗೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಜಾಗೃತಿ ತರಬೇತಿ (START), ಎಂಬ ಸಕ್ರಿಯ ಬಾಹ್ಯಾಕಾಶ ವಿಜ್ಞಾನ ಕಾರ್ಯಕ್ರಮವನ್ನು ಘೋಷಿಸಿದೆ.

ಮುಖ್ಯಾಂಶಗಳು

  • START ಎಂಬುದು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪರಿಚಯಾತ್ಮಕ ಮಟ್ಟದ ಆನ್‌ಲೈನ್ ತರಬೇತಿಯಾಗಿದೆ.
  • ಭಾರತದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಭೌತ ವಿಜ್ಞಾನ (ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ) ಮತ್ತು ತಂತ್ರಜ್ಞಾನದ (ಉದಾ. ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮೆಕ್ಯಾನಿಕಲ್,) ಪದವಿಪೂರ್ವ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿಗಳು ತರಬೇತಿಗೆ ಪರಿಗಣಿಸಲು ಅರ್ಹರಾಗಿರುತ್ತಾರೆ.

ಉದ್ದೇಶ

ಯುವಕರನ್ನು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳತ್ತ ಆಕರ್ಷಿಸುವುದು ತರಬೇತಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.