Published on: October 15, 2023

ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ

ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ

ಸುದ್ದಿಯಲ್ಲಿ ಏಕಿದೆ?  ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು ಸಂವಹನ ನೀಡುವ ಸಲುವಾಗಿ ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ ನಡೆಸಲಿದೆ.

ಮುಖ್ಯಾಂಶಗಳು

  • ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ದೂರಸಂಪರ್ಕ ಇಲಾಖೆಯು ಪರೀಕ್ಷೆಯನ್ನು ನಡೆಸುತ್ತಿದೆ.
  • ಪ್ರಾಕೃತಿಕ ದುರಂತದ ಸಮಯದಲ್ಲಿ ನಿಮ್ಮ ಮೊಬೈಲ್‌ಗೆ ಎಚ್ಚರಿಕೆಯ ಸಂದೇಶಗಳು ಬರಲಿವೆ.

ಏನಿದು ವ್ಯವಸ್ಥೆ?

  • ಸೆಲ್ ಬ್ರಾಡ್‌ಕಾಸ್ಟ್ ಎಚ್ಚರಿಕೆ ವ್ಯವಸ್ಥೆಯು ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ಗೊತ್ತುಪಡಿಸಿದ ಭೌಗೋಳಿಕ ಪ್ರದೇಶದ ಎಲ್ಲಾ ನಿವಾಸಿಗಳ ಮೊಬೈಲ್ ಸಾಧನಗಳಿಗೆ ವಿಪತ್ತಿಗೆ ಸಂಬಂಧಿಸಿದಂತೆ ನಿರ್ಣಾಯಕ ಮತ್ತು ಸೂಕ್ಷ್ಮ ಸಂದೇಶಗಳ ಜೊತೆಗೆ ನಿಗದಿತ ಸಮಯವನ್ನೂ ಕಳುಹಿಸಲು ಸಹಾಯವಾಗಿದೆ. ಪ್ರಮುಖ ತುರ್ತು ಮಾಹಿತಿಯು ಸಕಾಲಿಕವಾಗಿ ಸಾಧ್ಯವಾದಷ್ಟು ಜನರನ್ನು ತಲುಪುತ್ತದೆ ಎಂಬುದನ್ನು ಇದು ಖಚಿತಪಡಿಸುತ್ತದೆ.

ಉದ್ದೇಶ

  • ಸಂಭಾವ್ಯ ವಿಪತ್ತು ಮಾಹಿತಿ ತುರ್ತು ಎಚ್ಚರಿಕೆಯನ್ನು ಸಾರ್ವಜನಿಕರಿಗೆ ತಿಳಿಸಲು ಮತ್ತು ನಿರ್ಣಾಯಕ ಸಂದರ್ಭಗಳಲ್ಲಿ ಅವರಿಗೆ ಸರ್ಕಾರಿ ಸಂಸ್ಥೆಗಳ ಮೂಲಕ ತುರ್ತು ಸೇವೆಯನ್ನೂ ನೀಡಲೂ ಸಹ ಈ ಸೆಲ್ ಬ್ರಾಡ್‌ಕಾಸ್ಟ್ ಸಹಕಾರಿಯಾಗಲಿದೆ. ಉದಾಹರಣೆಗೆ ತೀವ್ರ ಹವಾಮಾನ ಎಚ್ಚರಿಕೆಗಳಾದ ಸುನಾಮಿ, ಫ್ಲ್ಯಾಶ್ ಫ್ಲಡ್, ಭೂಕಂಪನಗಳ ಬಗ್ಗೆ ಮಾಹಿತಿ ನೀಡಲಿದೆ.