Published on: December 29, 2022

ಮಹಾನಗರ ಭೂ ಸಾರಿಗೆ ಪ್ರಾಧಿಕಾರ

ಮಹಾನಗರ ಭೂ ಸಾರಿಗೆ ಪ್ರಾಧಿಕಾರ

ಸುದ್ದಿಯಲ್ಲಿ ಏಕಿದೆ?  ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಸದನದ ಪರ್ಯಾಲೋಚನೆಗೆ ಹಾಕಿ ವಿಧೇಯಕ ಧ್ವನಿಮತದ ಮೂಲಕ ಸರ್ವಾನುಮತದ ಅಂಗೀಕಾರಗೊಂಡಿತು.

ಮುಖ್ಯಾಂಶಗಳು

  • ಹೊಸ ರಸ್ತೆಗಳ ನಿರ್ಮಾಣಕ್ಕೆ ಭೂಸ್ವಾಧೀನ ಕಾರ್ಯದ ಜವಾಬ್ದಾರಿ ಹಾಗೂ ಸಮಗ್ರ ಪರಿಹಾರ ಕಂಡುಕೊಳ್ಳಲು ವಿಧೇಯಕ ತರಲಾಗುತ್ತಿದೆ.
  • ಬೆಂಗಳೂರಿನ ಸಂಚಾರದ ವೈಜ್ಞಾನಿಕ ನಿರ್ವಹಣೆಗೆ ಅಧ್ಯಯನಕ್ಕೆ ಐಐಎಸ್‌ಸಿ ಗೆ ಕೋರಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಂಘೈ,ಲಂಡನ್ ,ನ್ಯೂಯಾರ್ಕ್ ಮತ್ತಿತರ ನಗರಗಳ ಸಂಚಾರ ನಿರ್ವಹಣೆಯನ್ನೂ ಕೂಡ ಅಧ್ಯಯನ ಮಾಡಲಾಗುವುದು.
  • ಸಂಚಾರ್ ಕಮಾಂಡ್ ಕೇಂದ್ರ ಹಾಗೂ 7 ಸಾವಿರ ನಿರ್ಭಯ ಕ್ಯಾಮೆರಾಗಳನ್ನು ಕೂಡ  ಸಂಚಾರ ನಿಗಾ ಉದ್ದೇಶಕ್ಕೂ ಕೂಡ ಬಳಕೆ ಮಾಡಲಾಗುತ್ತಿದೆ. ರಸ್ತೆ ನಿರ್ಮಾಣ,ಸಂಚಾರ ನಿರ್ವಹಣೆ ಸುಧಾರಣೆಗೆ ನಾಗರಿಕರ ಸಹಕಾರ ಅಗತ್ಯ. ಸಾರಿಗೆ ಸಂಚಾರ ಲೋಪಗಳಿಗೆ ಖುದ್ದಾಗಿ ದಂಡ ಹಾಕುವ ಬದಲು ಕ್ಯಾಮೆರಾಗಳ ಮೂಲಕ ದಂಡ ವಿಧಿಸಲು ಪ್ರಾರಂಭವಾದ ನಂತರ ಹೆಚ್ಚು ದಂಡ ಸಂಗ್ರಹವಾಗುತ್ತಿದೆ.

ಉದ್ದೇಶ

  • ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಭೂಸಾರಿಗೆ ಸಂಚಾರದ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ,ಹಲವು ಮಾದರಿಗಳ ಪ್ರಾಧಿಕಾರ ,ಇಲಾಖೆಗಳ ಬದಲಾಗಿ ಉನ್ನತಾಧಿಕಾರದ ಒಂದೇ ಸಂಸ್ಥೆ ಸ್ಥಾಪಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಅಸ್ತಿತ್ವಕ್ಕೆ ತರಲಾಗುತ್ತಿದೆ.

ಈ ಪ್ರಾಧಿಕಾರವನ್ನು ಸ್ಥಾಪಿಸಲು ಕಾರಣಗಳು

  • ಬೆಂಗಳೂರು ಮಹಾನಗರಕ್ಕೆ ಸುತ್ತಮುತ್ತಲಿನ ಪುರಸಭೆ,ನಗರಸಭೆಗಳು ಸುಮಾರು 110 ಹಳ್ಳಿಗಳು ಸೇರ್ಪಡೆಯಾಗಿವೆ.
  • ಮಹಾನಗರದ ಮೂಲಸೌಕರ್ಯಗಳಿಗೂ ಗ್ರಾಮೀಣ ಮೂಲಸೌಕರ್ಯಗಳಿಗೂ ವ್ಯತ್ಯಾಸ ಇರುತ್ತದೆ. ಕಳೆದ ಸುಮಾರು 25 ವರ್ಷಗಳಿಂದ ಬೆಂಗಳೂರಿನ ರಸ್ತೆಗಳ ಅಗಲೀಕರಣವಾಗಿಲ್ಲ.
  • ಪ್ರತಿನಿತ್ಯ ಸುಮಾರು 5 ಸಾವಿರಕ್ಕೂ ಹೆಚ್ಚು ಹೊಸವಾಹನಗಳು ರಸ್ತೆಗಿಳಿಯುತ್ತಿವೆ.
  • ಮಹಾನಗರದಲ್ಲಿ ಸುಮಾರು 1 ಕೋಟಿ 25 ಲಕ್ಷ ಜನಸಂಖ್ಯೆ ಇದೆ, ಸುಮಾರು 1 ಕೋಟಿ 3 ಲಕ್ಷ ವಾಹನಗಳಿವೆ. ಬರುವ ದಿನಗಳಲ್ಲಿ ಜನಸಂಖ್ಯೆಗಿಂತ ವಾಹನಗಳ ಸಂಖ್ಯೆಯೇ ಅಧಿಕವಾಗಲಿದೆ. ಇವುಗಳ ನಿರ್ವಹಣೆಯನ್ನು ಬಹುವಿಧದ ಸಂಸ್ಥೆಗಳು ನೋಡಿಕೊಳ್ಳುತ್ತಿವೆ.
  • ಹೊಸ ರಸ್ತೆಗಳ ನಿರ್ಮಾಣಕ್ಕೆ ಭೂಸ್ವಾಧೀನ ಕಾರ್ಯದ ಜವಾಬ್ದಾರಿ ಹಾಗೂ ಸಮಗ್ರ ಪರಿಹಾರ ಕಂಡುಕೊಳ್ಳಲು ವಿಧೇಯಕ ತರಲಾಗುತ್ತಿದೆ.
  • ಬೆಂಗಳೂರು ಮಹಾನಗರಕ್ಕೆ ರಿಂಗ್ ರಸ್ತೆ ,ಪೆರಿಫೆರಲ್ ರಿಂಗ್ ರಸ್ತೆ ಮತ್ತಿತರ ಕಾಮಗಾರಿಗಳ ಭೂಸ್ವಾಧೀನ ಕಾರ್ಯ,ಮೆಟ್ರೋ ಮಾರ್ಗದ ವಿಸ್ತರಣೆ ಮೊದಲಾದ ಕಾರ್ಯಗಳನ್ನು ಕೈಗೊಳ್ಳಲಾಗುವುದು.

ಪ್ರಾಧಿಕಾರದ ಅವಶ್ಯಕತೆ

  • ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಮಹಾನಗರ ವಲಯ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಸಂಚಾರ ಪೊಲೀಸ್, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಮೆಟ್ರೋ ರೇಲ್ವೆ ನಿಗಮ ನಿಯಮಿತ ಮತ್ತು ಸಾರಿಗೆ ಇಲಾಖೆಯಂಥ ಸಂಸ್ಥೆಗಳು ಅಥವಾ ಏಜೆನ್ಸಿಗಳು ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತಲಿನ ವಲಯದಲ್ಲಿ ನಗರ ಸಂಚಾರಕ್ಕೆ ಸಂಬಂಧಿಸಿದಂತೆ ಯೋಜನೆಗಳನ್ನು ಮಾಡುವುದಕ್ಕೆ, ಅಭಿವೃದ್ಧಿಪಡಿಸುವುದಕ್ಕೆ, ಅನುಷ್ಟಾನಗೊಳಿಸುವುದಕ್ಕೆ ಮತ್ತು ಅವುಗಳ ನಿರ್ವಹಣಾ ಚಟುವಟಿಕೆಗಳಿಗೆ ಜವಾಬ್ದಾರಿಯಾಗಿರುವುದರಿಂದ ಮತ್ತು ಮೇಲ್ಕಂಡ ಪ್ರತಿಯೊಂದು ಸಂಸ್ಥೆಗಳು ಮತ್ತು ಇಲಾಖೆಗಳು ಅವುಗಳ ಒಂದು ನಿರ್ಧಿಷ್ಟ ಕಾಯಾಚೌಕಟ್ಟಿನೊಳಗೆ ನಗರ ಸಂಚಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ವ್ಯವಹರಿಸಲು ವಿವಿಧ ಶಾಸನಗಳ ಮೇರೆಗೆ ಅಧಿಕಾರವನ್ನು ಹೊಂದಿರುವುದರಿಂದ
  • ಸಂಸ್ಥೆಗಳು, ಇಲಾಖೆಗಳು ಮತ್ತು ಅವುಗಳು ಅನುಸರಿಸಲು ಬದ್ದವಾಗಿರುವ ಸ್ವತಂತ್ರ ಶಾಸನಗಳ ಸಂಖ್ಯೆಯು ಹೆಚ್ಚಾಗಿದ್ದು, ಪ್ರಸ್ತುತದಲ್ಲಿ ಅವುಗಳ ಜವಾಬ್ದಾರಿಗಳು ಮತ್ತು ಕರ್ತವ್ಯಗಳು ಪರಸ್ಪರ ಅತಿ ವ್ಯಾಪ್ತವಾಗುತ್ತಿದ್ದು, ಇದರಿಂದಾಗಿ ನಗರ ಸಂಚಾರವನ್ನು ಸುಗಮಗೊಳಿಸುವ ಮತ್ತು ಉತ್ತಮ ಪಡಿಸುವ ಗುರಿಯನ್ನು ಹೊಂದಿರುವ ಪ್ರಮುಖ ಸಾರಿಗೆ ಯೋಜನೆಗಳ ಯೋಜನಾ ಪ್ರಕ್ರಿಯೆಗೆ ಮತ್ತು ಅವುಗಳ ಅನುಷ್ಟಾನಕ್ಕೆ ಅಡ್ಡಿಯುಂಟಾಗುತ್ತಿದೆ.