Published on: October 22, 2022

ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ

ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ

ಸುದ್ಧಿಯಲ್ಲಿ ಏಕಿದೆ?

ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪಂಗಡಗಳ (ಎಸ್‌.ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮುಖ್ಯಾಂಶಗಳು

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಕ್ರಮವಾಗಿ ಶೇ. 15 ರಿಂದ 17 ಮತ್ತು  ಹಾಗೂ  ಶೇ.3 ರಿಂದ 7ಕ್ಕೆ ಹೆಚ್ಚಿಸಲಾಗಿದೆ
  • ಸಂವಿಧಾನದ ಒಂಬತ್ತನೇ ಪರಿಚ್ಛೇದ ಅಡಿ ಮೀಸಲಾತಿ ಪ್ರಮಾಣ ಹೆಚ್ಚಿಸುವುದನ್ನು ಕೇಳುವುದಕ್ಕೂ ಮೊದಲು ಇತರ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಪರಿಗಣಿಸಬೇಕಾಗುತ್ತದೆ. ಮೊದಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಉಳಿದದ್ದು ಬಳಿಕ ನೋಡೋಣ ಎಂಬ ತೀರ್ಮಾನಕ್ಕೆ ಬರಲಾಯಿತು
  • ‘ತಮಿಳುನಾಡು ಒಂಬತ್ತನೇ ಪರಿಚ್ಛೇದ ಅಡಿ ಶೇ 69 ರಷ್ಟು ಮೀಸಲಾತಿ ನೀಡಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ದಾಖಲಾಗಿದೆ. ಆದರೆ, ಸುಪ್ರೀಂಕೋರ್ಟ್‌ ಮೀಸಲಾತಿಗೆ ತಡೆ ನೀಡಿಲ್ಲ. ಇದೇ ರೀತಿ ಹಲವು ರಾಜ್ಯಗಳು ಶೇ 50 ಕ್ಕೂ ಹೆಚ್ಚು ಮೀಸಲಾತಿ ನೀಡಿದ್ದು, ಇವುಗಳ ಪ್ರಕರಣಗಳೂ ಇತ್ಯರ್ಥವಾಗಿಲ್ಲ’

ಮೀಸಲಾತಿ ಹೆಚ್ಚಳಕ್ಕೆ ಸಮರ್ಥನೆ

  • ‘ನಮ್ಮ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪಟ್ಟಿಗೆ ಹೆಚ್ಚಿನ ಜಾತಿಗಳು ಸೇರಿವೆ. ಮೊದಲಿಗೆ ಪರಿಶಿಷ್ಟ ಜಾತಿಯಲ್ಲಿ 6 ಜಾತಿಗಳು ಇದ್ದವು. ಈಗ ಅದು 103 ಕ್ಕೆ ಹೆಚ್ಚಿದೆ. ಪರಿಶಿಷ್ಟ ಪಂಗಡದಲ್ಲಿ 2 ರಿಂದ 3 ಜಾತಿಗಳು ಇದ್ದವು, ಈಗ 56 ಜಾತಿಗಳಿವೆ. ಎಲ್ಲರಿಗೂ ಸೂಕ್ತ ಪ್ರಾತಿನಿಧ್ಯ ನೀಡಬೇಕಾಗುತ್ತದೆ. ಇದಕ್ಕಾಗಿ ಮೀಸಲಾತಿ ಹೆಚ್ಚಿಸುವುದು ಅನಿವಾರ್ಯ