Published on: January 14, 2024

‘ಯುವನಿಧಿ’ ಯೋಜನೆ

‘ಯುವನಿಧಿ’ ಯೋಜನೆ

ಸುದ್ದಿಯಲ್ಲಿ ಏಕಿದೆ? ಕಳೆದ ಸಾಲಿನಲ್ಲಿ ಡಿಪ್ಲೊಮಾ ಮತ್ತು ಪದವಿ ಪೂರೈಸಿ, ಉದ್ಯೋಗದ ಹುಡುಕಾಟದಲ್ಲಿರುವ ಯುವ ಜನತೆಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡುವ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಕರ್ನಾಟಕದ ಮುಖ್ಯಮಂತ್ರಿ ಅವರು ಶಿವಮೊಗ್ಗದಲ್ಲಿ ಚಾಲನೆ ನೀಡಿದರು.

ಯೋಜನೆ

ಯುವ ನಿಧಿ ಯೋಜನೆಯು ನಿರುದ್ಯೋಗಿ ಪದವಿ ಹೊಂದಿರುವವರಿಗೆ ತಿಂಗಳಿಗೆ ರೂ 3,000 ಮತ್ತು ನಿರುದ್ಯೋಗಿ ಡಿಪ್ಲೋಮಾ ಹೊಂದಿರುವವರಿಗೆ ರೂ 1,500 ಹಣವನ್ನು ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಯುವ ನಿಧಿ ಯೋಜನೆಗಾಗಿ ಸೇವಾಸಿಂಧು ಪೋರ್ಟಲ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು.

ಉದ್ದೇಶ

ಈ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕರಿಗೆ ಎರಡು ವರ್ಷಗಳವರೆಗೆ ಅಥವಾ ಫಲಾನುಭವಿಗೆ ಉದ್ಯೋಗ ಸಿಗುವವರೆಗೆ, ಯಾವುದು ಮೊದಲೋ ಆ ವರೆಗೆ ಆರ್ಥಿಕ ನೆರವು ಒದಗಿಸುವ ಗುರಿಯನ್ನು ಹೊಂದಿದೆ.

ಅರ್ಹತೆ

  • ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು
  • ಫಲಾನುಭವಿಯು 2023 ರಲ್ಲಿ ಪದವಿ/ಡಿಪ್ಲೊಮಾ ಪಡೆದಿರಬೇಕು. ಕನಿಷ್ಠ 180 ದಿನಗಳವರೆಗೆ ಯಾವುದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿರಬಾರದು.