Published on: March 14, 2022

ಯುವಿಕಾ (ಯುವ ವಿಜ್ಞಾನಿ ಕಾರ್ಯಕ್ರಮ)

ಯುವಿಕಾ (ಯುವ ವಿಜ್ಞಾನಿ ಕಾರ್ಯಕ್ರಮ)

ಸುದ್ಧಿಯಲ್ಲಿ ಏಕಿದೆ ? ಬೆಂಗಳೂರು, ತಿರುವನಂತಪುರಂ, ಹೈದರಾಬಾದ್, ಅಹಮದಾಬಾದ್ ಮತ್ತು ಶಿಲ್ಲಾಂಗ್ ನಲ್ಲಿ ಇಸ್ರೋ ಯುವಿಕಾ (ಯುವ ವಿಜ್ಞಾನಿ ಕಾರ್ಯಕ್ರಮ) ಆಯೋಜಿಸಲಿದೆ.

ಮುಖ್ಯಾಂಶಗಳು

  • ಯುವಜನಾಂಗವನ್ನು ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಎರಡು ವಾರಗಳ ವಿಶೇಷ ಕಾರ್ಯಕ್ರಮಕ್ಕಾಗಿ ದೇಶಾದ್ಯಂತ 9ನೇ ತರಗತಿಯಿಂದ 150 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದೆ.
  • ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಪ್ರಸ್ತುತ ಮತ್ತು ಹೊರಹೊಮ್ಮುತ್ತಿರುವ ಪ್ರವೃತ್ತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಮತ್ತು ವಿಜ್ಞಾನಿಗಳ ನಡುವೆ ವಿವಿಧ ಚರ್ಚೆಗಳು ಮತ್ತು ಸಂವಾದವನ್ನು ಈ ಕಾರ್ಯಕ್ರಮ ಹೊಂದಿರುತ್ತದೆ.  ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ

  • 8ನೇ ತರಗತಿಯಲ್ಲಿ ಪಡೆದಿರುವ ಅಂಕಗಳು, ವಿಜ್ಞಾನ ಮೇಳ, ಒಲಿಂಪಿಯಡ್ ನಲ್ಲಿ ಬಹುಮಾನ, ವಿಜ್ಞಾನ ಸ್ಪರ್ಧೆ , ಎನ್ ಸಿಸಿ, ಅಥವಾ ಎನ್ ಎಸ್ ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಯುವಿಕಾ – ಯುವ ವಿಜ್ಞಾನಿ ಕಾರ್ಯಕ್ರಮ

  • ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಗ್ರಾಮೀಣ ಪ್ರದೇಶಗಳಿಗೆ ಆದ್ಯತೆ ನೀಡುವ ಮೂಲಕ ಕಿರಿಯ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ತಂತ್ರಜ್ಞಾನ, ಬಾಹ್ಯಾಕಾಶ ವಿಜ್ಞಾನ ಮತ್ತು ಬಾಹ್ಯಾಕಾಶ ಅಪ್ಲಿಕೇಶನ್‌ಗಳ ಕುರಿತು ಮೂಲಭೂತ ಜ್ಞಾನವನ್ನು ನೀಡಲು “ಯುವ ವಿಜ್ಞಾನಿ ಕಾರ್ಯಕ್ರಮ”, ಯುವಿಕಾ ಎಂಬ ಶಾಲಾ ಮಕ್ಕಳಿಗೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ರಾಷ್ಟ್ರದ ಭವಿಷ್ಯದ ಮೂಲಾಧಾರವಾಗಿರುವ   ಯುವಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಉದಯೋನ್ಮುಖ ಪ್ರವೃತ್ತಿಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮವು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಆಧಾರಿತ ಸಂಶೋಧನೆ / ವೃತ್ತಿಜೀವನದಲ್ಲಿ ಹೆಚ್ಚಿನ ವಿದ್ಯಾರ್ಥಿಗಳನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.