Published on: April 3, 2023

ರಕ್ಷಣಾ ಸಾಮಗ್ರಿಗಳ ರಫ್ತಿನಲ್ಲಿ ಭಾರತ

ರಕ್ಷಣಾ ಸಾಮಗ್ರಿಗಳ ರಫ್ತಿನಲ್ಲಿ ಭಾರತ

ಸುದ್ದಿಯಲ್ಲಿ ಏಕಿದೆ? ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಭಾರತ ಮಹತ್ತರ ಸಾಧನೆ ಗೈದಿದ್ದು, 2022-23ನೇ ಸಾಲಿನಲ್ಲಿ 15,920 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳನ್ನು ವಿವಿಧ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ.

ಮುಖ್ಯಾಂಶಗಳು

  • ದೇಶದಲ್ಲಿ ಇದೇ ಮೊದಲ ಬಾರಿಗೆ ಬಹುದೊಡ್ಡ ಪ್ರಮಾಣದಲ್ಲಿ ರಕ್ಷಣಾ ಪರಿಕರಗಳ ರಫ್ತು ನಡೆದಿದೆ. “2022 – 2023ನೇ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ವಲಯದ ರಫ್ತು ಸಾರ್ವಕಾಲಿಕ ದಾಖಲೆಯಾಗಿದೆ.
  • “ಆತ್ಮನಿರ್ಭರ ಭಾರತ ಹಾಗೂ ಮೇಕ್‌ ಇನ್‌ ಇಂಡಿಯಾ ಯೋಜನೆ ಫಲವಾಗಿ ಇಂದು ರಕ್ಷಣಾ ಕ್ಷೇತ್ರದಲ್ಲಿ ಭಾರತ ಹೊಸ ಸಾಧನೆ ಮಾಡಿದೆ.
  • 2024-25ರ ವೇಳೆಗೆ 1,75,000 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಯಂತ್ರಾಂಶ ತಯಾರಿಕೆ ಮತ್ತು ರಕ್ಷಣಾ ರಫ್ತುಗಳನ್ನು 35,000 ಕೋಟಿ ರೂಪಾಯಿಗೆ ತೆಗೆದುಕೊಳ್ಳುವ ಗುರಿಯನ್ನು ಸರ್ಕಾರ ಹೊಂದಿದೆ.

ಶಸ್ತ್ರಾಸ್ತ್ರ ಆಮದಿನಲ್ಲೂ ಮುಂಚೂಣಿಯಲ್ಲಿದೆ ಭಾರತ

  • ಭಾರತ ಶಸ್ತ್ರಾಸ್ತ್ರ ಆಮದಿನಲ್ಲೂ ಮುಂಚೂಣಿಯಲ್ಲಿದೆ. ಜಗತ್ತಿನಲ್ಲೇ ಅತಿ ಹೆಚ್ಚು ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಭಾರತ ಮೊದಲ ಸಾಲಿನಲ್ಲಿದೆ. ಆಮದಿಗೆ ಹೋಲಿಸಿದರೆ ರಫ್ತಿನ ಪ್ರಮಾಣ ನಗಣ್ಯ ಎನ್ನುವಷ್ಟು ಕಡಿಮೆ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ದೇಶೀಯ ಉತ್ಪಾದನೆ ಹೆಚ್ಚಾಗುತ್ತಿರುವುದು ಭಾರತದ ಪಾಲಿಗೆ ಆಶಾದಾಯಕ ಬೆಳವಣಿಗೆಯಾಗಿದೆ. ದೇಶದ ಕೆಲವು ಕ್ಷಿಪಣಿಗಳು ಮತ್ತು ಇನ್ನಿತರ ಪರಿಕರಗಳಿಗೆ ಸಣ್ಣಪುಟ್ಟ ದೇಶಗಳಿಂದ ಬೇಡಿಕೆ ವ್ಯಕ್ತವಾಗುತ್ತಿದೆ.