Published on: January 24, 2023

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ


ಸುದ್ದಿಯಲ್ಲಿ ಏಕಿದೆ? ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ.


ಮುಖ್ಯಾಂಶಗಳು

  • ಈ ವರ್ಷ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು “ಬೇಟಿ ಬಚಾವೋ ಬೇಟಿ ಪಢಾವೋ” ಅಭಿಯಾನದ 5 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ.

ಮಹತ್ವ

  • ಭಾರತದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದಾಗಿದೆ

ಉದ್ದೇಶ

  • ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣಿಗೆ ಸಮಾನ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸುವುದು. ಸ್ತ್ರೀಯರ ಶಿಕ್ಷಣದ ಮಹತ್ವ, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವುದು ಈ ಆಚರಣೆಯ ಮೂಲ ಉದ್ದೇಶವಾಗಿದೆ.

ಆಚರಣೆಯ ಹಿನ್ನೆಲೆ

  • ರಾಷ್ಟ್ರೀಯ ಹೆಣ್ಣುಮಕ್ಕಳ ದಿನವನ್ನು ಮೊದಲ ಬಾರಿಗೆ 2008 ರಲ್ಲಿ ಆಚರಣೆ ಮಾಡಲಾಯಿತು. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಸರ್ಕಾರದಿಂದ ಈ ದಿನ ಆಚರಣೆಯನ್ನು ಆರಂಭಿಸಲಾಯಿತು.
  • ಥೀಮ್ : ರಾಷ್ಟ್ರೀಯ ಹೆಣ್ಣುಮಕ್ಕಳ ದಿನ 2023 ಥೀಮ್ ಅಧಿಕೃತವಾಗಿ ಘೋಷಿಸಿಲ್ಲ. ಆದರೆ 2022ರ ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಥೀಮ್ ಅನ್ನು ‘ಉಮಂಗ್ ರಂಗೋಲಿ ಉತ್ಸವ’ ಎಂದು ಆಚರಣೆ ಮಾಡಲಾಗಿತ್ತು. 2021ರ ಥೀಮ್ ‘ಡಿಜಿಟಲ್ ಜನರೇಷನ್, ನಮ್ಮ ಪೀಳಿಗೆ’, ಹಾಗೂ 2020ರ ಥೀಮ್ ‘ಮೇರಿ ಅವಾಜ್, ಹಮಾರಾ ಸಕ್ಷಾ ಭವಿಷ್ಯ’ ಎನ್ನುವ ಥೀಮ್ ಮೇಲೆ ಆಚರಣೆ ಮಾಡಲಾಗಿತ್ತು.

ಆಚರಣೆ ಧ್ಯೇಯಗಳು

  • ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುವ ಎಲ್ಲ ತಾರತಮ್ಯವನ್ನು ತೊಡೆದು ಹಾಕುವುದು.
    ಸಮಾಜದಲ್ಲಿ ಹೆಣ್ಣು ಮಗುವಿಗೆ ದೊರೆಯಬೇಕಿರುವ ಗೌರವ ಮತ್ತು ಮೌಲ್ಯವನ್ನು ಖಾತ್ರಿಗೊಳಿಸುವುದು.
  • ದೇಶದಲ್ಲಿ ಪ್ರತಿ ಹೆಣ್ಣು ಮಗುವಿಗೂ ಎಲ್ಲ ಮೂಲಭೂತ ಹಕ್ಕುಗಳು ದೊರೆಯುಂತೆ ಮಾಡುವುದು.
  • ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜದ ದೃಷ್ಟಿಕೋನ ಬದಲಿಸುವುದು.
  • ಭಾರತೀಯ ಜನರಲ್ಲಿ ಲಿಂಗಸಮಾನತೆಯ ಜಾಗೃತಿ ಉಂಟು ಮಾಡುವುದು.
  • ಭಾರತದಲ್ಲಿ ಹೆಣ್ಣು ಮಗುವಿನ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು.
  • ಪ್ರಸವಪೂರ್ವ ಲಿಂಗ ಪತ್ತೆ ನಿಷೇಧ.
  • ಹೆಣ್ಣು ಮಕ್ಕಳ ಬಾಲ್ಯ ವಿವಾಹ ಪದ್ಧತಿಗೆ ನಿರ್ಬಂಧ.