Published on: June 16, 2023

ವಲಯವಾರು 7 ವಿಷನ್ ಗ್ರೂಪ್‌ ರಚನೆ

ವಲಯವಾರು 7 ವಿಷನ್ ಗ್ರೂಪ್‌ ರಚನೆ

ಸುದ್ದಿಯಲ್ಲಿ ಏಕಿದೆ? ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜಿಸಲು ಆಯ್ದ 7 ವಲಯಗಳಲ್ಲಿ ವಿಷನ್ ಗ್ರೂಪ್‌ಗಳನ್ನು(ದೂರದರ್ಶಿ ತಂಡಗಳು)  ಸರ್ಕಾರ ರಚಿಸಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಈ ವಲಯಗಳಿಗಾಗಿ ವಿಷನ್ ಗ್ರೂಪ್ ಗಳು ರಚನೆಯಾಗುತ್ತಿರುವುದು ಇದೇ ಮೊದಲು. ಇದಕ್ಕೆ ಮುಂಚೆ ಒಟ್ಟಾರೆ ಉದ್ಯಮದ ಅಭಿವೃದ್ಧಿಗೆ ವಿಷನ್ ಗ್ರೂಪ್ ಇತ್ತು. ಆದರೆ ಇದು ವಲಯವಾರು ಮಟ್ಟದಲ್ಲಿ ಇರಲಿಲ್ಲ.
  • ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಪೂರಕವಾದ ಕ್ರಮಗಳನ್ನು ವಹಿಸಲಾಗುವುದು.
  • ಏಕಗವಾಕ್ಷಿ ಯೋಜನೆಗೆ ಬದಲಾವಣೆ ತಂದು ಅನಗತ್ಯ‌ ಅಡಚಣೆಗಳನ್ನು ನಿರ್ಮೂಲನೆ ಮಾಡಲಾಗುವುದು.
  • ಬಹುಗವಾಕ್ಷಿಗೆ ಅವಕಾಶ ಇಲ್ಲದಂತೆ‌ ತ್ವರಿತವಾಗಿ ಅನುಮತಿಗಳು ಸಿಗುವ ಹಾಗೆ ಮಾಡಲಾಗುವುದು. ಕೈಗಾರಿಕೆ ಬೆಳವಣಿಗೆಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ತೆರೆದ ಮನಸ್ಸಿನಿಂದ ಪರಿಶೀಲಿಸಲಾಗುವುದು.
  • ಕೈಗಾರಿಕೆಗಳ ಸ್ಥಾಪನೆಗೆ ಶೀಘ್ರ ಅನುಮತಿ ಸಿಗುವ ಹಾಗೆ ಮಾಡಲು ಇಲಾಖೆಯಲ್ಲೇ ಭಾರತೀಯ ಅರಣ್ಯ ಸೇವೆಯ ಪಿಸಿಸಿಎಫ್ ದರ್ಜೆಯ ಅಧಿಕಾರಿಯನ್ನು ನಿಯೋಜಿಸಲಾಗುವುದು. ಇದರಿಂದ ಪರಿಸರ ಸಂಬಂಧಿ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಸಿಗಲಿದೆ.

ಉದ್ದೇಶ

  • ಉದ್ಯಮಿಗಳು, ಉನ್ನತಾಧಿಕಾರಿಗಳು ಮತ್ತು ಶಿಕ್ಷಣ ತಜ್ಞರು ಇರುವ ಈ ವಿಷನ್ ಗ್ರೂಪ್‌ಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡಲಿವೆ.

ಯಾವ ಏಳು ವಲಯಗಳಿಗೆ ವಿಷನ್‌ ಗ್ರೂಪ್‌?

  • ಏರೋಸ್ಪೇಸ್‌ ಮತ್ತು ರಕ್ಷಣೆ, ಮಷೀನ್‌ ಟೂಲ್ಸ್, ಇಎಸ್‌ಡಿಎಂ, ಫಾರ್ಮಾ, ಕಬ್ಬಿಣ-ಉಕ್ಕು-ಸಿಮೆಂಟ್‌ ಉತ್ಪಾದನಾ ಕ್ಷೇತ್ರಗಳನ್ನೊಳಗೊಂಡ ಕೋರ್‌ ಮ್ಯಾನುಫ್ಯಾಕ್ಚರಿಂಗ್‌, ಸ್ಟಾರ್ಟಪ್ಸ್‌ (ಐಟಿ‌ಯೇತರ) ಮತ್ತು ಆಟೋ/ವಿದ್ಯುತ್‌ಚಾಲಿತ ಇವು ಹೊಸದಾಗಿ ವಿಷನ್ ಗ್ರೂಪ್ ರಚನೆಯಾಗಲಿರುವ ವಲಯಗಳಾಗಿವೆ.

ಏಳು ವಲಯಗಳ ಹೊರತಾಗಿ ಆದ್ಯತೆಯ ವಲಯಗಳು

  • ಮೇಲೆ ತಿಳಿಸಿದ ಏಳು ವಲಯಗಳ ಜೊತೆಗೆ ಭವಿಷ್ಯದ ಸಂಚಾರ ವ್ಯವಸ್ಥೆ, ಗ್ರೀನ್‌ ಹೈಡ್ರೋಜನ್, ಆಹಾರ ಸಂಸ್ಕರಣೆ, ಜವಳಿ, ಉಗ್ರಾಣ ಮತ್ತು ಲಾಜಿಸ್ಟಿಕ್ಸ್‌ ಗಳನ್ನು ಆದ್ಯತೆಯ ವಲಯಗಳೆಂದು ಗುರುತಿಸಲಾಗಿದೆ.

ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರ

  • ಏರೋಸ್ಪೇಸ್‌ ಮತ್ತು ರಕ್ಷಣಾ ಕ್ಷೇತ್ರಕ್ಕೆ ಉತ್ತೇಜನ ನೀಡಲು ದೇವನಹಳ್ಳಿಯ ಆರ್ ಆಂಡ್‌ ಡಿ ಪಾರ್ಕ್‌ನಲ್ಲಿ ‘ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರ’ ತೆರೆಯಲು ಯೋಜನೆ ರೂಪಿಸಲಾಗಿದೆ.

ನಿಮಗಿದು ತಿಳಿದಿರಲಿ

  • ವಿದ್ಯುತ್‌ಚಾಲಿತ ವಾಹನ ತಯಾರಿಕೆ ಕ್ಷೇತ್ರದಲ್ಲಿ ಈಗಾಗಲೇ 40 ಸಾವಿರ ಕೋಟಿ ರೂ. ಹೂಡಿಕೆಯಾಗಿದೆ. ದೇಶದ ಪ್ರಪ್ರಥಮ ಗ್ರೀನ್‌ ಹೈಡ್ರೋಜನ್‌ ಕ್ಲಸ್ಟರ್ ಮಂಗಳೂರಿನಲ್ಲಿ ತಲೆಯೆತ್ತಲಿದೆ.