Published on: January 6, 2022
ವಿದ್ಯಾಸಿರಿ ಸೌಲಭ್ಯ
ವಿದ್ಯಾಸಿರಿ ಸೌಲಭ್ಯ
ಸುದ್ಧಿಯಲ್ಲಿ ಏಕಿದೆ ? ಊಟ ಮತ್ತು ವಸತಿ ಸೌಲಭ್ಯಗಳನ್ನು ಕಲ್ಪಿಸುವ ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಜನವರಿ 10, 2022 ರವರೆಗೆ ಅವಧಿ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
- ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಏನಿದು ಯೋಜನೆ ?
- ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೇ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಪ್ರತಿ ತಿಂಗಳಿಗೆ 1,500/- ರಂತೆ ಶೈಕ್ಷಣಿಕ ಅವಧಿಯ ಅಕ್ಟೋಬರ್-2021 ರಿಂದ ಮಾರ್ಚ್-2022 ರವರೆಗೆ ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ಮುಖಾಂತರ ಜಮಾ ಮಾಡುವ ಯೋಜನೆಯನ್ನು 2021-22 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗಿದೆ.