Published on: November 12, 2021

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿ

ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿ

ಸುದ್ಧಿಯಲ್ಲಿ ಏಕಿದೆ ? ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ.

  • ಪಾಕಿಸ್ತಾನದ ರಾಜಧಾನಿ ಲಾಹೋರ್​ನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 600ಕ್ಕೂ ಹೆಚ್ಚು ಪ್ರಮಾಣದಲ್ಲಿ ದಾಖಲಾಗಿದೆ. ಪಟ್ಟಿಯಲ್ಲಿ ಕರಾಚಿ ಐದನೇ ಸ್ಥಾನದಲ್ಲಿದೆ. ಕಳೆದ ವರ್ಷ ಕೂಡ ಲಾಹೋರ್​ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಹಣೆಪಟ್ಟಿ ಪಡೆದಿತ್ತು.
  • ಲಾಹೋರ್​ನ ಗುಲ್ಬರ್ಗ್ ನಲ್ಲಿ 681, ರೈವಿಂಡ್ ನಲ್ಲಿ 626, ಅನಾರ್ಕಲಿ ಮಾರುಕಟ್ಟೆಯಲ್ಲಿ 541 ಮತ್ತು ಮಾಡೆಲ್ ಟೌನ್ ನಲ್ಲಿ 532 ಮಟ್ಟ ದಾಖಲಾಗಿದೆ.
  • ಈ ನಡುವೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹೊಗೆ ಆವರಿಸಿರುವುದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.