Published on: June 16, 2023
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ
ಸುದ್ದಿಯಲ್ಲಿ ಏಕಿದೆ? ಪ್ರತಿ ವರ್ಷ ಜೂನ್ 12 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
ಮುಖ್ಯಾಂಶಗಳು
- ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಸರ್ಕಾರಗಳು, ಉದ್ಯೋಗದಾತರು ಮತ್ತು ಕಾರ್ಮಿಕ ಸಂಸ್ಥೆಗಳು, ನಾಗರಿಕ ಸಮಾಜ, ಮಕ್ಕಳ ಕಾರ್ಮಿಕರ ದುಃಸ್ಥಿತಿಯನ್ನು ಎತ್ತಿ ಹಿಡಿಯಲು ಮತ್ತು ಅವರಿಗೆ ಸಹಾಯ ಮಾಡಲು ಏನು ಮಾಡಬಹುದು ಎಂಬುದರ ಬಗ್ಗೆ ವಿಶ್ವದಾದ್ಯಂತದ ಲಕ್ಷಾಂತರ ಜನರು ಅನೇಕ ರೀತಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.
- 2023 ರ ಥೀಮ್: “ಎಲ್ಲರಿಗೂ ಸಾಮಾಜಿಕ ನ್ಯಾಯ. ಬಾಲಕಾರ್ಮಿಕ ಪದ್ಧತಿ ಅಂತ್ಯಗೊಳಿಸಿ”
- ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO) ಬಾಲ ಕಾರ್ಮಿಕರ ಅನ್ಯಾಯದ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಮತ್ತು ಕ್ರಮ ತೆಗೆದುಕೊಳ್ಳಲು ಜನರನ್ನು ಪ್ರೇರೇಪಿಸಲು ಒಂದು ವಾರದ ಅಭಿಯಾನವನ್ನು ಪ್ರಾರಂಭಿಸಲು ಉದ್ದೇಶಿಸಿದೆ.
ಉದ್ದೇಶ
- ಮಕ್ಕಳು ಶಿಕ್ಷಣ ಆರಂಭ ಮಾಡುವ ಬದಲು ಗಾರ್ಮೆಂಟ್ಸ್‌ಗಳಲ್ಲಿ, ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿಗಳಲ್ಲಿ, ಗ್ಯಾರೇಜ್, ಹೊಟೇಲ್, ಕಾರ್ಖಾನೆಗಳಲ್ಲಿ, ಬೇಕರಿ, ದೊಡ್ಡ ದೊಡ್ಡ ಮನೆಗಳಲ್ಲಿ ಕೆಲಸದಾಳುಗಳಾಗಿ ಇನ್ನಿತರ ಸ್ಥಳಗಳಲ್ಲಿ ದೈಹಿಕವಾಗಿಯೂ ಹಾಗೂ ಮಾನಸಿಕವಾಗಿಯೂ ಕಷ್ಟವಾಗುವಂತ ಕೆಲಸಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಇದೆಲ್ಲದನ್ನು ತಡೆಯುವ ಉದ್ದೇಶದಿಂದ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಜೊತೆಗೆ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಲಾಗಿದೆ.
ಬಾಲಕಾರ್ಮಿಕರು ಅನುಭವಿಸುತ್ತಿರುವ ತೊಂದರೆಗಳು
- ಐಎಲ್‌ಒನ ಮಾಹಿತಿಯ ಪ್ರಕಾರ, ವಿಶ್ವದಾದ್ಯಂತ ಲಕ್ಷಾಂತರ ಹುಡುಗಿಯರು ಮತ್ತು ಹುಡುಗರಿಗೆ ತಮ್ಮ ಶಿಕ್ಷ ಣದ ಹಕ್ಕು, ಆರೋಗ್ಯ ಮತ್ತು ಮೂಲಭೂತ ಸ್ವಾತಂತ್ರ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಮಕ್ಕಳಲ್ಲಿ, ಅರ್ಧಕ್ಕಿಂತ ಹೆಚ್ಚು ಬಾಲ ಕಾರ್ಮಿಕರ ಕಾನೂನು ಬಾಹಿರ ಚಟುವಟಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಅಪಾಯಕಾರಿ ಪರಿಸರದಲ್ಲಿ ಕೆಲಸ, ಗುಲಾಮಗಿರಿ ಅಥವಾ ಬಲವಂತವಾಗಿ ಕೆಲಸ ಮಾಡುತ್ತಾರೆ. ಜೊತೆಗೆ ವೇಶ್ಯಾವಾಟಿಕೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಸಶಸ್ತ್ರ ಸಂಘರ್ಷಕ್ಕೆ ಬಲಿಯಾಗುತ್ತಿದ್ದಾರೆ.
ದಿನದ ಇತಿಹಾಸ:
- ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ( ಐಎಲ್ಒ ) ಜಾಗತಿಕವಾಗಿ ಬಾಲ ಕಾರ್ಮಿಕರ ರಕ್ಷಣೆಗಾಗಿ ಮತ್ತು ಅದನ್ನು ತೊಡೆದು ಹಾಕಲು ಅಗತ್ಯವಾದ ಕ್ರಮ ಮತ್ತು ಪ್ರಯತ್ನಗಳ ಬಗ್ಗೆ ಗಮನ ಹರಿಸಲು 2002ರಲ್ಲಿ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪ್ರಾರಂಭಿಸಿತು.
ದಿನದ ಮಹತ್ವ:
- ಮಕ್ಕಳು ಶಾಲೆಗೆ ಹಾಜರಾಗುವ ಅವಕಾಶವನ್ನು ಕಸಿದು ಕೊಳ್ಳುವ ಮೂಲಕ ಅವರ ಶಾಲಾ ಶಿಕ್ಷಣದಲ್ಲಿ ಹಸ್ತಕ್ಷೇಪ ಮಾಡಿ ಶಾಲೆಯನ್ನು ಅಕಾಲಿಕವಾಗಿ ಬಿಡಲು ಅವರನ್ನು ನಿರ್ಬಂಧಿಸುವುದು ಇವೆಲ್ಲವೂ ಮಕ್ಕಳ ಮೇಲೆ ಪರಿಣಾಮ ಬೀರುತ್ತವೆ. ಇವುಗಳನ್ನು ತಡೆಯುವದರ ಜೊತೆಗೆ ಬಾಲ ಕಾರ್ಮಿಕರಲ್ಲಿ ಕಂಡು ಬರುವ ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ.