Published on: March 3, 2023

ವಿಶ್ವ ವನ್ಯಜೀವಿಗಳ ದಿನ 2023

ವಿಶ್ವ ವನ್ಯಜೀವಿಗಳ ದಿನ 2023


ಸುದ್ದಿಯಲ್ಲಿ  ಏಕಿದೆ? ಪ್ರತಿ ವರ್ಷ ಮಾರ್ಚ್ 3 ರಂದು ಆಚರಣೆ ಮಾಡಲಾಗುತ್ತದೆ. ಈ ದಿನದಂದು ವನ್ಯಜೀವಿಗಳ ಬಗ್ಗೆ ಅರಿವು ಹಾಗೂ ಶಿಕ್ಷಣ ನೀಡಲು, ವನ್ಯಜೀವಿ ವೈವಿದ್ಯತೆಯ ಮತ್ತು ಪ್ರಾಮುಖ್ಯತೆಯ ತಿಳುವಳಿಕೆ ಹೆಚ್ಚಿಸಲು ಈ ದಿನವನ್ನು ಮೀಸಲಿಡಲಾಗಿದೆ.


ಥೀಮ್ : “ವನ್ಯಜೀವಿ ಸಂರಕ್ಷಣೆಗಾಗಿ ಪಾಲುದಾರಿಕೆಗಳು” , ಅಳಿವಿನಂಚಿನಲ್ಲಿರುವ ಪ್ರಾಣಿ ಮತ್ತು ಸಸ್ಯ ಸಂಕುಲಗಳ ಜಾತಿಗಳ ಬಗ್ಗೆ ಜಾಗೃತಿ ಮೂಡಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ಛಾಯಚಿತ್ರಗಳನ್ನು ಹಂಚಿಕೊಂಡು ಜಾಗೃತಿ ಮೂಡಿಸುವುದಾಗಿದೆ.

ಉದ್ದೇಶ 

  • ಬದಲಾಗುತ್ತಿರುವ ಪ್ರಕೃತಿಯ ಬಗ್ಗೆ ಜಾಗೃತಿ ಹಾಗು ಮಾಹಿತಿ ನೀಡಲು ವಿಶ್ವ ವನ್ಯಜೀವಿ ದಿನವನ್ನು ಆಚರಿಸಲಾಗುತ್ತದೆ. ಮಾನವನ ಚಟುವಟಿಕೆಗಳಿಂದ ವೃಕ್ಷ ಮತ್ತು ಪ್ರಾಣಿ ಜೀವ ಸಂಕುಲ ಸಮಸ್ಯೆ ಎದುರಿಸುತ್ತಿರುವ ವಿಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ.

ಹಿನ್ನೆಲೆ

  • ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ ಮಾರ್ಚ್‌ 3ನ್ನು ವಿಶ್ವ ವನ್ಯಜೀವಿ ದಿನವನ್ನಾಗಿ ಆಚರಿಸಲು ಡಿಸೆಂಬರ್ 20, 2013 ರಲ್ಲಿ ಘೋಷಣೆ ಮಾಡಿತು. ಪ್ರಾಣಿ ಸಂಕುಲ ಮತ್ತು ಸಸ್ಯ ಸಂಕುಲದ ಬಗ್ಗೆ ಅರಿವು ಮೂಡಿಸಲು ಈ ದಿನವನ್ನು ಆಚರಿಸಲು ತೀರ್ಮಾನಿಸಲಾಯಿತು. ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ, ಸಸ್ಯ ಹಾಗೂ ಪ್ರಾಣಿಗಳ ಪಾಮುಖ್ಯತೆಯನ್ನು ತಿಳಿಸುವುದು, ವನ್ಯಜೀವಿ ಸಂಕುಲದ ವಿವಿಧ ಕೊಡುಗೆಗಳನ್ನು ಗೌರವಿಸಲು ಈ ದಿನವನ್ನು ಮೀಸಲಿರಿಸಲಾಗಿದೆ.

ಇತಿಹಾಸ

  • ಜಗತ್ತಿನ ಸಸ್ಯ ಹಾಗೂ ಪ್ರಾಣಿ ಪ್ರಭೇದಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ವನ್ಯಜೀವಿ ದಿನಾಚರಣೆಯ ಧ್ಯೇಯವಾಗಿದೆ. ಸಿಐಟಿಇಎಸ್‌ ಒಪ್ಪಂದಕ್ಕೆ 1973 ಮಾರ್ಚ್‌ 3 ರಂದು ಸಹಿ ಹಾಕಲಾಯಿತು. ಇದರ ನೆನಪಿಗಾಗಿ ಮಾರ್ಚ್‌ 3 ರಂದು ವನ್ಯಜೀವಿ ದಿನವನ್ನು ಆಚರಿಸಲಾಗುತ್ತದೆ. ಸಿಐಟಿಎಎಸ್‌ ಅಂತರಾಷ್ಟ್ರೀಯ ಒಪ್ಪಂದವಾಗಿದ್ದು, ವಿಶ್ವದಾದ್ಯಂತ ಸಸ್ಯ ಹಾಗೂ ವನ್ಯ ಜೀವಿ ಸಂಕುಲಗಳ ಮೇಲೆ ಹಾನಿ ಆಗದಂತೆ ನಿಗಾವಹಿಸುತ್ತದೆ.