Published on: September 21, 2021

ಶಿಲಾಯುಗದ ಬೃಹತ್ ನಿಲ್ಸಕಲ್

ಶಿಲಾಯುಗದ ಬೃಹತ್ ನಿಲ್ಸಕಲ್

ಸುದ್ಧಿಯಲ್ಲಿ ಏಕಿದೆ? ಉಡುಪಿ ಜಿಲ್ಲೆ, ಕುಂದಾಪುರ ತಾಲ್ಲೂಕಿನ ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬೃಹತ್ ನಿಲ್ಸಕಲ್‌ ಪತ್ತೆಯಾಗಿದೆ.ಗರ್ಭಿಣಿ ಸ್ತ್ರೀಯ ದೇಹದ ಬಾಗು-ಬಳುಕುಗಳಂತೆ ಈ ನಿಲ್ಸಕಲ್‌ ವಿನ್ಯಾಸಗೊಂಡಿದೆ. ಕರಾವಳಿಯ ನಿಲ್ಸಕಲ್‌ಗಳನ್ನು ಗರ್ಭಿಣಿ ಕಲ್ಲುಗಳೆಂದೇ ಕರೆಯಲಾಗಿದೆ.

ನಿಲ್ಸಕಲ್‌ ಎಂದರೆ ?:

  • ಭೂಮಿಯ ಮೇಲೆ ಲಂಭವಾಗಿ, ಸ್ವಲ್ಪ ವಾಲಿದಂತೆ ನಿಂತು ಬೃಹತ್ ಶಿಲಾಯುಗದ ಸಮಾಧಿಯ ಮೇಲೆ ಅಥವಾ ಸಮಾಧಿ ಸಮೀಪದಲ್ಲಿ ಮೃತರ ಸ್ಮರಣಾರ್ಥವಾಗಿ ನಿಲ್ಲಿಸಲಾದ ಒರಟಾದ ಬೃಹತ್ ಶಿಲೆಗಳನ್ನು ನಿಲ್ಸಕಲ್ಲು, ನಿಂತಿಕಲ್ಲು, ಗರ್ಭಿಣಿಕಲ್ಲು, ಆನೆಕಲ್ಲು, ರಕ್ಕಸಕಲ್ಲು ಹೆಸರುಗಳಿಂದ ಕರೆಯಲಾಗುತ್ತದೆ.
  • ದಕ್ಷಿಣ ಭಾರತದೆಲ್ಲೆಡೆ ಇಂತಹ ಕಲ್ಲುಗಳು ಕಂಡುಬರುತ್ತವೆ.

ಬಸ್ರೂರಿನ ನಿಲ್ಸಕಲ್‌

  • ಬಸ್ಸೂರಿನ ನಿಲ್ಸಕಲ್‌ ಏಳು ಅಡಿ ಎತ್ತರವಿದ್ದು, ವಾಯವ್ಯ ದಿಕ್ಕಿಗೆ ಮುಖಮಾಡಿ ನಿಂತಿದೆ. ಪೂರ್ವಕ್ಕೆ ಸ್ವಲ್ಪ ವಾಲಿದಂತೆ ನಿಲ್ಲಿಸಲ್ಪಟ್ಟಿದೆ.
  • ಬಸ್ರೂರನ್ನು ಶಾಸನಗಳಲ್ಲಿ ಬಸುರೆ ಪಟ್ಟಣ, ಬಸುರೆ ನಗರ, ಬಸ್ರೂರು, ವಸುಪುರ ಎಂದು ಕರೆಯಲಾಗಿದೆ. ಕನ್ನಡ ಭಾಷೆಯಲ್ಲಿ ಬಸಿರು, ಬಸುರೆ ಎಂದರೆ ಗರ್ಭಿಣಿ ಎಂದೇ ಅರ್ಥವಿದೆ. ವಸುಪುರ ಎಂಬ ಸಂಸ್ಕೃತ ಪದದಲ್ಲಿನ ವಸು ಎಂಬ ಅರ್ಥವೂ ಭೂಮಿ ಎಂದೇ ಅರ್ಥ.
  • ಬಸ್ರೂರಿನ ನಿಲ್ಸಕಲ್‌ಗೂ ಹೆಣ್ಣಿಗೂ ನಿಕಟ ಸಂಬಂಧವಿದೆ.
  • ಬಸ್ರೂರಿನ ಪ್ರಾಚೀನತೆಯನ್ನು ಕನಿಷ್ಠ ಕ್ರಿ.ಪೂ. 1000 ವರ್ಷಗಳ ಪ್ರಾಚೀನತೆಗೆ ಸಂಶೋಧನೆ ತೆಗೆದುಕೊಂಡು ಹೋಗುತ್ತದೆ. ಈ ನಿಲ್ಸಕಲ್‌ ಬಸ್ರೂರಿನ ವೆಂಕಟರಮಣ ದೇವಾಲಯ ಮತ್ತು ಕೋಟೆ ಆಂಜನೇಯ ದೇವಾಲಯಗಳ ನಡುವಿನಲ್ಲಿದೆ.