Published on: March 2, 2024

ಶುಚಿ ಯೋಜನೆ

ಶುಚಿ ಯೋಜನೆ

ಸುದ್ದಿಯಲ್ಲಿ ಏಕಿದೆ? ರಾಜ್ಯದ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ `ಶುಚಿ ಯೋಜನೆ’ಗೆ ಕರ್ನಾಟಕ ರಾಜ್ಯದ ಆರೋಗ್ಯ ಸಚಿವರು ಹಾಗೂ ಶಿಕ್ಷಣ ಸಚಿವರು ಮರು ಚಾಲನೆ ನೀಡಿದರು. 2020-21 ರಲ್ಲಿ ಆಗಿನ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು

ಮುಖ್ಯಾಂಶಗಳು

  • ಮುಟ್ಟಿನ ನೈರ್ಮಲ್ಯಕ್ಕಾಗಿ ಉಚಿತವಾಗಿ ಸ್ಯಾನಿಟರಿ ನ್ಯಾಪ್​ಕಿನ್​ಗಳನ್ನು ವಿತರಿಸುವ, ಕರ್ನಾಟಕ ಸರ್ಕಾರ ಹಮ್ಮಿಕೊಂಡ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ.
  • ಯೋಜನೆಯ ಮೂಲಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಸುಮಾರು 19 ಲಕ್ಷ ವಿದ್ಯಾರ್ಥಿನಿಯರಿಗೆ (10 ರಿಂದ 18 ವರ್ಷ ವಯಸ್ಸಿನ) ಉಚಿತ ಸ್ಯಾನಿಟರಿ ನ್ಯಾಪ್​​​ಕಿನ್​​ಗಳನ್ನು ಒದಗಿಸುತ್ತದೆ.
  • ಪ್ರತಿ ಕಿಟ್‌ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್‌ಗಳು ಇರುತ್ತವೆ. ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ಅಗತ್ಯವಿರುವ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೀಡಲಾಗುವುದು.
  • ಕಳೆದ ವರ್ಷ ದಕ್ಷಿ ಣ ಕನ್ನ ಡ ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ಮೈತ್ರಿ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು

ಉದ್ದೇಶ

ಮುಟ್ಟಿನ ನೈರ್ಮಲ್ಯಕ್ಕಾಗಿ ಉಚಿತವಾಗಿ ಸ್ಯಾನಿಟರಿ ನ್ಯಾಪ್​ಕಿನ್​ಗಳನ್ನು ವಿತರಿಸುವ ಈ ಯೋಜನೆಯಿಂದ ಸುಮಾರು 19 ಲಕ್ಷ ವಿದ್ಯಾರ್ಥಿನಿಯರಿಗೆ ಪ್ರಯೋಜನವಾಗಲಿದೆ.

ಯೋಜನೆಯ ಬಗ್ಗೆ

  • 2013-14 ರಲ್ಲಿ ಪ್ರಾರಂಭವಾದ ಶುಚಿ ಯೋಜನೆಯು ಆರಂಭದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಯಾಗಿತ್ತು. ಆದರೆ, ಕೇಂದ್ರವು 2015-16ನೇ ಸಾಲಿನಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ರಾಜ್ಯಗಳನ್ನು ಕೇಳಿದೆ.
  • ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಕ್‌ಗಳ ವಿಕೇಂದ್ರೀಕೃತ ಖರೀದಿಗಾಗಿ ತಮ್ಮ ಕಾರ್ಯಕ್ರಮ ಅನುಷ್ಠಾನ ಯೋಜನೆಗಳಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಮೂಲಕ ರಾಜ್ಯಗಳು/UTಗಳನ್ನು ಬೆಂಬಲಿಸಿದೆ.
  • ಇದು ಹದಿಹರೆಯದ ಹುಡುಗಿಯರಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.