Published on: September 3, 2022

ಸಿರಿಧಾನ್ಯಗಳ ಅಭಿಯಾನ

ಸಿರಿಧಾನ್ಯಗಳ ಅಭಿಯಾನ

ಸುದ್ದಿಯಲ್ಲಿ ಏಕಿದೆ?

ಕೃಷಿ ವಿಜ್ಞಾನಗಳ‌ ವಿಶ್ವವಿದ್ಯಾಲಯವು ನಬಾರ್ಡ್ ಸಹಯೋಗದಲ್ಲಿ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನವನ್ನುರಾಯಚೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್‌ ಅವರು ಉದ್ಘಾಟಿ ಸಿದರು.

ಮುಖ್ಯಾಂಶಗಳು

  • ವಿಶ್ವಸಂಸ್ಥೆಯು 2023ನೇ‌ ವರ್ಷವನ್ನು ಸಿರಿಧಾನ್ಯಗಳ‌ ವರ್ಷವೆಂದು ಘೋಷಿಸಿದೆ. ಹೀಗಾಗಿ ಭಾರತದಲ್ಲಿ ಸಿರಿಧಾನ್ಯಗಳ ಅಭಿಯಾನವನ್ನು ರಾಯಚೂರಿನಿಂದ ಉದ್ಘಾಟಿಸುತ್ತಿರುವುದು ವಿಶೇಷವಾಗಿದೆ.

ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ

  • ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು.
  • ಉದ್ದೇಶ: ಸಿರಿಧಾನ್ಯ ಬ್ರಾಂಡ್ ಗಳನ್ನು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾಡಬಹುದು. ಕೆಪೆಕ್ ಮೂಲಕ ರಫ್ತು ಮಾಡುವವರಿಗೆ ಪ್ರೋತ್ಸಾಹಕಗಳನ್ನು ನೀಡುವ ಉದ್ದೇಶದಿಂದ 50 ಕೋಟಿ ರೂ.ಗಳನ್ನು ಒದಗಿಸಿದೆ. ಅದರ ಉಪಯೋಗ ಪಡೆದು ರಫ್ತು ಮಾಡಲು ಕೆಪೆಕ್ ಮೂಲಕ ಎಲ್ಲಾ ಸಹಾಯ ಮತ್ತು ಸಹಕಾರವನ್ನು ಸರ್ಕಾರ ಮಾಡಲಿದೆ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ

  • ಎಲ್ಲಿ ತರಬೇತಿ? ಕಲ್ಯಾಣ ಕರ್ನಾಟಕ ಅರೆ ಒಣ ಪ್ರದೇಶ. ಜಾಹೀರಾಬಾದಿನಲ್ಲಿರುವ ಕೃಷಿ ಸಂಸ್ಥೆಯಲ್ಲಿ 108 ವರ್ಷದ ಜೋಳ, ನವಣೆ, ಸಾಮೆಗಳನ್ನು  ಸಂರಕ್ಷಣೆ ಮಾಡಿದ್ದು, ರೈತರು ಹೇಗೆ ಬೆಳೆಯಬೇಕೆಂದು ತರಬೇತಿಯನ್ನು ನೀಡುತ್ತಾರೆ.
  • ಇಂಥ 8 ಸಂಸ್ಥೆಗಳು ಜಗತ್ತಿನಲ್ಲಿದ್ದು, ಈ ಪೈಕಿ ಜಾಹೀರಾಬಾದಿನಲ್ಲಿದೆ. ಇಲ್ಲಿನ ಹವಾಮಾನಕ್ಕೆ ತಕ್ಕ ಬೆಳೆಗಳನ್ನು ಬೆಳೆಯಬೇಕು.ಇದಕ್ಕೆ ವಿಶೇಷ ಮಾರುಕಟ್ಟೆ ನಿರ್ಮಾಣ ಮಾಡುವುದು ಸರ್ಕಾರದ  ಸಂಘ ಸಂಸ್ಥೆಗಳ ಕರ್ತವ್ಯ.
  • ಕಲ್ಯಾಣ ಕರ್ನಾಟಕದಲ್ಲಿ 7 ಜಿಲ್ಲೆಗಳಿವೆ. ಏಳು ಜಿಲ್ಲೆಗಳಲ್ಲಿ 7 ಸಿರಿಧಾನ್ಯಗಳನ್ನು ಬೆಳೆಸಲಾಗುತ್ತದೆ.

ರಾಯಚೂರಿನಲ್ಲಿ ಜವಳಿ ಪಾರ್ಕ್

  • ಕರ್ನಾಟಕದ ಜವಳಿ ನೀತಿಯಿಂದ ಪ್ರೋತ್ಸಾಹಕಗಳಿರುವ ಜವಳಿ ಪಾರ್ಕ್ ನಿರ್ಮಿಸಲಾಗುವುದು. ರಾಜ್ಯ ಸರ್ಕಾರದ ನೆರವಿನಿಂದ ರಾಯಚೂರಿನಲ್ಲಿ ಜವಳಿ ಪಾರ್ಕ್  ಸ್ಥಾಪಿಸಲಾಗುವುದು. ಬಳ್ಳಾರಿಯಲ್ಲಿ ಜೀನ್ಸ್ ತಯಾರಿಸುವ ಕಾರ್ಖಾನೆ ಇದೆ. ಉತ್ತಮ ಹತ್ತಿ ಬೆಳೆಯುವ ಕಾಲವಿತ್ತು. ರಫ್ತು ಮಾಡುವಂಥ ಹತ್ತಿ ಬೆಳೆಯಲಾಗುತ್ತಿತ್ತು. ಇದಕ್ಕೆ ಮಾರುಕಟ್ಟೆ ನಿರ್ಮಾಣ ಮಾಡುವ ಅವಶ್ಯಕತೆ ಇದೆ.