Published on: September 3, 2022

ಸುದ್ದಿ ಸಮಾಚಾರ – 02 ಸೆಪ್ಟೆಂಬರ್ 2022

ಸುದ್ದಿ ಸಮಾಚಾರ – 02 ಸೆಪ್ಟೆಂಬರ್ 2022

  • ಗೌರಿ-ಗಣೇಶ ಹಬ್ಬದಂದು ಮಹಿಳೆಯರಿಗೆ ವಿವಿಧ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಸಾವಿರ ಮಹಿಳೆಯರಿಗೆ ‘ಸಖಿ ಭಾಗ್ಯ’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ. ಮಹಿಳಾ ಸ್ವಸಹಾಯ ಗುಂಪುಗಳಲ್ಲಿ ತಯಾರಿಸುವ ಉತ್ಪನ್ನಗಳ ಮೌಲ್ಯವರ್ಧನೆ, ಮಾರುಕಟ್ಟೆಗೆ ಸಂಭಂದಿಸಿದಂತೆ ಮಾಹಿತಿ ನೀಡುವುದಕ್ಕೆ ತರಬೇತಿ ಪಡೆದ ಸಿಬ್ಬಂದಿ ಸಖಿಯಾಗುತ್ತಾರೆ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಇವರನ್ನು ನೇಮಿಕ ಮಾಡಲಾಗುತ್ತದೆ. ಸಮುದಾಯ ಸಂಪನ್ಮೂಲ ವ್ಯಕ್ತಿಗಳ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

  • ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ನಬಾರ್ಡ್ ಸಹಯೋಗದಲ್ಲಿ ಆಯೋಜಿಸಿರುವ ಸಿರಿಧಾನ್ಯಗಳ ಅಭಿಯಾನವನ್ನುರಾಯಚೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದ್ಘಾಟಿ ಸಿದರು.
  • ಬೆಂಗಳೂರು ನಗರದಲ್ಲಿನ ಕೊಳಚೆ ಪ್ರದೇಶದ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೆರವಾಗಲು ಬಿಬಿಎಂಪಿ ಕಲ್ಯಾಣ ಇಲಾಖೆ ಎಲ್ಲಾ ವಾರ್ಡ್ ಗಳಲ್ಲಿ ಬೆಳಕು ಕಲಿಕಾ ಕೇಂದ್ರವೊಂದನ್ನು ಸ್ಥಾಪಿಸುತ್ತಿದೆ. ಈ ಕೇಂದ್ರದಲ್ಲಿ ಓರ್ವ ನುರಿತ ಶಿಕ್ಷಕ, ಸುಸಜ್ಜಿತ ಕೊಠಡಿ ಹಾಗೂ ಪುಸ್ತಕಗಳು ಇರಲಿವೆ.
  • ಮಹಿಳೆಯರಿಗೆ ಅವರು ಉದ್ಯೋಗ ಮಾಡುವ ಸ್ಥಳದಲ್ಲಿ ಹೈಟೆಕ್‌ ವ್ಯವಸ್ಥೆಯನ್ನು ‘ಪ್ರಾಜೆಕ್ಟ್‌ ರಶ್ಮಿ’ ಒದಗಿಸುತ್ತಿದೆ. ‘ಉದ್ಯೋಗಸ್ಥ ಮಹಿಳೆಯರಿಗೆ ಉದ್ಯೋಗ ಸ್ಥಳದಲ್ಲಿ ಸೌಕರ್ಯ ಕಲ್ಪಿಸಿರುವ ‘ಪ್ರಾಜೆಕ್ಟ್‌ ರಶ್ಮಿ’ಯನ್ನು ಮೂರು ಕಡೆ ಅಂದರೆ, ಪೊಲೀಸ್‌ ಆಯುಕ್ತರ ಕಚೇರಿ, ಲೋಕೋಪಯೋಗಿ ಇಲಾಖೆ ಕಟ್ಟಡ ಹಾಗೂ ಹೈಕೋರ್ಟ್‌ ಆವರಣದಲ್ಲಿ ಅಭಿವೃದ್ಧಿಪಡಿಸಲಾಗಿದೆ.
  • ಭಾರತದ ಕ್ಲೀನ್ ಏರ್ ಶೃಂಗಸಭೆಯ (ಐಸಿಎಎಸ್) ನಾಲ್ಕನೇ ಆವೃತ್ತಿಯು ಬೆಂಗಳೂರಿನಲ್ಲಿ ಆಗಸ್ಟ್ 23 ರಿಂದ 26 ರವರೆಗೆ ಜಾಗತಿಕ ತಜ್ಞರೊಂದಿಗೆ ನಡೆಯಿತು. ICAS ನಲ್ಲಿ ಜಾಗತಿಕ ತಜ್ಞರು ವಾಯು ಮಾಲಿನ್ಯ ಮತ್ತು ಹವಾಮಾನ ಬದಲಾವಣೆಯನ್ನು ಪರಿಹರಿಸುವ ವಿಧಾನಗಳನ್ನು ಚರ್ಚಿಸಿದ್ದಾರೆ.
  • ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ) ಖಾತೆದಾರರನ್ನು ಸರ್ಕಾರಿ ಬೆಂಬಲಿತ ಜೀವ ವಿಮೆ ಮತ್ತು ಅಪಘಾತ ವಿಮಾ ಯೋಜನೆಗಳ ಅಡಿಯಲ್ಲಿ ಕವರ್ ಮಾಡಲು ಬ್ಯಾಂಕ್ಗಳಿಗೆ ತಿಳಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
  • ಆಗಸ್ಟ್ 27 ರಂದು  ಅಹಮದಾಬಾದ್ನ ಸಾಬರಮತಿ ನದಿ ತೀರದಲ್ಲಿ ನಡೆದ ‘ಖಾದಿ ಉತ್ಸವ’ ನಡೆಯಿತು. ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಭಾಗವಾಗಿ ಈ ಉತ್ಸವವನ್ನು ಆಯೋಜಿಸಲಾಗಿದೆ ಖಾದಿ ಉತ್ಸವದಲ್ಲಿ ಸುಮಾರು 7,500 ಮಹಿಳೆಯರು ಏಕಕಾಲಕ್ಕೆ ಚರಕದಲ್ಲಿ ನೂಲುವ ಮೂಲಕ ದಾಖಲೆ ಬರೆದಿದ್ದಾರೆ.  ಇದೇ ಸಂದರ್ಭದಲ್ಲಿ ಪ್ರಧಾನಿಯವರು ಅಹಮದಾಬಾದ್ನಲ್ಲಿ ಅಟಲ್ ಸೇತುವೆಯನ್ನು ಉದ್ಘಾಟಿಸಿದರು. ಅಟಲ್ ಸೇತುವೆಯು ಸಾಬರಮತಿ ನದಿಯ ಎರಡು ದಡಗಳನ್ನು ಸಂಪರ್ಕಿಸುವುದು ಮಾತ್ರವಲ್ಲದೆ ವಿನ್ಯಾಸ ಮತ್ತು ನಾವೀನ್ಯತೆಯಲ್ಲಿ ಅಭೂತಪೂರ್ವವಾಗಿದೆ.
  • ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್(CSIR) ಮತ್ತು ಖಾಸಗಿ ಸಂಸ್ಥೆ KPIT ಲಿಮಿಟೆಡ್ ಅಭಿವೃದ್ಧಿಪಡಿಸಿದ ಭಾರತದ ಮೊದಲ ಸ್ಥಳೀಯ ಹೈಡ್ರೋಜನ್ ಇಂಧನ ಸೆಲ್ ಬಸ್ ಅನ್ನು ಪುಣೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಅನಾವರಣಗೊಳಿಸಿದರು.
  • ಕೃತಕ ಬುದ್ಧಿಮತ್ತೆ (ಎಐ) ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ‘ಡ್ರೋನ್ಗಳ ಸಮೂಹ’ ವನ್ನು ಸಶಸ್ತ್ರ ಪಡೆಗಳಿಗೆ ಸೇರ್ಪಡೆ ಮಾಡಲಾಗುತ್ತಿದೆ. ಗುರಿಗಳನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ.
  • ರಾಷ್ಟ್ರೀಯ ಕ್ರೀಡಾ ದಿನ: ಆಗಸ್ಟ್ 29 ರಂದು  ಹಾಕಿ ಕ್ರೀಡಾಪಟು, ಮೇಜರ್ ಧ್ಯಾನ್‌ಚಂದ್  ಸಿಂಗ್ ಅವರ ಜನ್ಮದಿನ. ಈ ದಿನವನ್ನು  ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ. ಧ್ಯಾನ್‌ಚಂದ್ ಹಾಕಿ ಆಟಗಾರ ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ 29 ಆಗಸ್ಟ್ 1905 ರಂದು ಜನಿಸಿದರು. 16ನೇ ವಯಸ್ಸಿನಲ್ಲಿ ಸೇನೆಗೆ ಸೇರಿದ ಬಳಿಕವೇ ಅವರು ಹಾಕಿ ಆಡಲು ಆರಂಭಿಸಿದ್ದರು.
  • ನಿರಾಶ್ರಿತರನ್ನು ಆಶ್ರಯ ನೀಡುವ ಪ್ರಯತ್ನಗಳಿಗಾಗಿ ಜರ್ಮನಿಯ ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರಿಗೆ 2022 ರ ಯುನೆಸ್ಕೋ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.
  • ಪಂಜಾಬ್ ವಿಧಾನ ಸಭೆಯು ವಿಮಾನ ನಿಲ್ದಾಣಕ್ಕೆ ‘ಶಹೀದ್-ಇ-ಆಜಮ್ ಸರ್ದಾರ್ ಭಗತ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮೊಹಾಲಿ’ ಎಂದು ಹೆಸರಿಸಲು ನಿರ್ಣಯವನ್ನು ಅಂಗೀಕರಿಸಿತ್ತು ಆದರೆ ಹೆಸರಿನಲ್ಲಿ ಮೊಹಾಲಿ ಇರುವುದರಿಂದ ಹರಿಯಾಣ ಅದನ್ನು ವಿರೋಧಿಸಿತು. ನಂತರ ಹರಿಯಾಣ ವಿಧಾನ ಸಭೆಯು ವಿಮಾನ ನಿಲ್ದಾಣವನ್ನು’ಚಂಡೀಗಢ’ ಅನ್ನು ಬಳಸಿ ಮರುನಾಮಕರಣ ಮಾಡುವ ಬಗ್ಗೆ ನಿರ್ಣಯವನ್ನು ಅಂಗೀಕರಿಸಿತು.
  • ಸುಪ್ರೀಂ ಕೋರ್ಟ್‌ನ ಕಲಾಪ ಲೈವ್-ಸ್ಟ್ರೀಮ್: ವಿಧ್ಯುಕ್ತ ಪೀಠದ ನೇತೃತ್ವ ವಹಿಸಿದ್ದ ಸಿಜೆಐ ಎನ್‌.ವಿ. ರಮಣ ಅವರು, ಎನ್‌ಐಸಿಯ ವೆಬ್ ಕಾಸ್ಟ್ ಪೋರ್ಟಲ್ ಮೂಲಕ ನಿವೃತ್ತಿ ದಿನದ ಕಲಾ‍‍ಪ ನೇರ ಪ್ರಸಾರಕ್ಕೆ ಚಾಲನೆ ನೀಡಿದರು. ನ್ಯಾಯಾಲಯದಲ್ಲಿ ಸಾಂವಿಧಾನಿಕ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಕರಣಗಳ ವಿಚಾರಣೆಗಳ ಕಲಾಪದ ನೇರ ಪ್ರಸಾರಕ್ಕೆ 2018ರಲ್ಲಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಸುಪ್ರೀಂಕೋರ್ಟ್‌ನಿಂದ ಇದೇ ಮೊದಲ ಬಾರಿಗೆ ಕಲಾಪದ ನೇರ ಪ್ರಸಾರ ಚಾಲನೆ ಸಿಕ್ಕಿತು. ಸಿಜಿಐ ಅವರು ನಡೆಸುವ ಪ್ರಮುಖ ಪ್ರಕರಣಗಳ ವಿಚಾರಣೆಯ ಕಲಾಪದ ನೇರ ಪ್ರಸಾರವನ್ನು ಪೈಲಟ್‌ ಯೋಜನೆ ಆಧಾರದ ಮೇಲೆ ಪ್ರಾರಂಭಿಸಬಹುದು.
  • ಪುನೀತ್’ ಉಪಗ್ರಹ: ಸ್ವಾತಂತ್ರ್ಯಅಮೃತ ಮಹೋತ್ಸವದ ನೆನಪಿಗಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸಿದ `ಪುನೀತ್’ ಉಪಗ್ರಹವನ್ನು ನ.15ರಿಂದ ಡಿ.31ರ ಮಧ್ಯೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು. ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ, ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ, ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗುವುದು. ಬೆಂಗಳೂರು ವಲಯದ ಶಾಲೆಗಳ ವಿದ್ಯಾರ್ಥಿಗಳು ‘ಕೆಜಿಎಸ್ 3 ಸ್ಯಾಟ್’ ಉಪಗ್ರಹವನ್ನು ರೂ. 1.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದಾರೆ.
  • ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ 2022 ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಹಾಗೂ ಚಿರಾಗ್‌ ಶೆಟ್ಟಿ ಜೋಡಿ ಕಂಚಿನ ಪದಕ ಗೆದ್ದಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌‌ ಡಬಲ್ಸ್ ವಿಭಾಗದಲ್ಲಿ ಭಾರತಕ್ಕೆ ದೊರಕಿದ ಎರಡನೇ ಪದಕ ಇದಾಗಿದೆ. 2011ರಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಹಾಗೂ ಜ್ವಾಲಾ ಗುಟ್ಟಾ ಮಹಿಳಾ ಡಬಲ್ಸ್‌ನಲ್ಲಿ ಕಂಚು ಗೆದ್ದಿದ್ದರು.
  • ಅರವತ್ತರ ದಶಕದ ಮಹಿಳಾ ಹಾಕಿಯ ಚಾಂಪಿಯನ್ ಆಟಗಾರ್ತಿ ಮತ್ತು ಆಡಳಿತಗಾರ್ತಿ ಎಲ್ವಿರಾ ಬ್ರಿಟ್ಟೊ ಅವರಿಗೆ ಭಾರತೀಯ ಅಂಚೆ ಇಲಾಖೆ ಗೌರವ ಸಲ್ಲಿಸಿದೆ. ಅವರ ಹೆಸರಿನಲ್ಲಿ ಸಿದ್ಧಗೊಂಡಿರುವ ವಿಶೇಷ ಪೋಸ್ಟಲ್ ಕವರ್ ಇದೇ 29ರಂದು, ಕ್ರೀಡಾ ದಿನಾಚರಣೆಯಲ್ಲಿ ಬಿಡುಗಡೆಯಾಗಲಿದೆ.ಭಾರತ ತಂಡದಲ್ಲಿ ಆಡಿದ್ದ ಎಲ್ವಿರಾ, ಮೇ ಮತ್ತು ರೀಟಾ ‘ಬ್ರಿಟ್ಟೊ ಸಹೋದರಿಯರು’ ಎಂದೇ ಹಾಕಿ ಲೋಕದಲ್ಲಿ ಚಿರಪರಿಚಿತರಾಗಿದ್ದರು.