Published on: November 1, 2022
ಸುದ್ಧಿ ಸಮಾಚಾರ – 01 ನವೆಂಬರ್ 2022
ಸುದ್ಧಿ ಸಮಾಚಾರ – 01 ನವೆಂಬರ್ 2022
- “೨೦೨೧-೨೨ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳು ಹಾಗೂ ಸಂಘ-ಸಂಸ್ಥೆಗಳನ್ನು 67ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಆಯ್ಕೆ ಮಾಡಲಾಗಿದೆ.
- ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅಂಚೆ ಇಲಾಖೆ ದೇಶದ 75 ನಗರಗಳಲ್ಲಿ ಸುಕನ್ಯಾ ಸಮೃದ್ಧಿ ಮಹೋತ್ಸವ ಹಮ್ಮಿಕೊಂಡಿತ್ತು. ರಾಜ್ಯದ ಐದು ನಗರಗಳ ಪೈಕಿ ಕೊಪ್ಪಳ ಅತಿ ಹೆಚ್ಚು ಖಾತೆ ತೆರೆಯುವುದರ ಮೂಲಕ ಮೊದಲನೆಯ ಸ್ಥಾನ ಪಡೆದಿದೆ.
- ಮುಖ್ಯಮಂತ್ರಿ ಅವರು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ರಾದ ವಿಜ್ಞಾನಿ ಸುರೇಶ್ ಬಿ.ಎನ್ ಅವರ ಆತ್ಮಕಥೆ “ಆನ್ ಟು ದಿ ರಾಕೆಟ್ ಶಿಪ್” ಕೃತಿಯನ್ನು ಬಿಡುಗಡೆ ಮಾಡಿದರು.
- ಪಶ್ಚಿಮ ಗುಜರಾತ್ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದ್ದು, ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.ಐತಿಹಾಸಿಕ ಹಿನ್ನೆಲೆ ಹೊಂದಿದ ಈ ಸೇತುವೆಯನ್ನು 143 ವರ್ಷಗಳ ಹಿಂದೆ ಅಂದರೆ 1879, ಫೆಬ್ರವರಿ 20 ರಂದು ಚಾಲನೆ ದೊರಕಿತು
- ಗುಜರಾತ್ ರಾಜ್ಯದ ಗೃಹ ಸಚಿವ ಹರ್ಷ ಸಂಘವಿ ಅವರು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುನಿಫಾರ್ಮ್ ಸಿವಿಲ್ ಕೋಡ್- ಯುಸಿಸಿ) ಜಾರಿಗೊಳಿಸಲು ಸಮಿತಿಯೊಂದನ್ನು ರಚಿಸುವುದಾಗಿ ಪ್ರಕಟಿಸಿದ್ದಾರೆ. 44 ನೇ ವಿಧಿಯು ರಾಜ್ಯ ನಿರ್ದೇಶಕ ತತ್ವಗಳಲ್ಲಿ ಒಂದು.
- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಡೋದರಾದಲ್ಲಿ ಸಿ-295 ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಭಾರತೀಯ ವಾಯುಪಡೆಗಾಗಿ ಟಾಟಾ-ಏರ್ಬಸ್ ಸಿ-295 ಸಾರಿಗೆ ವಿಮಾನವನ್ನು ತಯಾರಿಸಲಿದೆ. ಏರ್ಬಸ್ ಸಿ-295 ವಿಮಾನವನ್ನು ಇದೇ ಮೊದಲ ಬಾರಿಗೆ ಯುರೋಪ್ ಖಂಡದಿಂದ ಹೊರಗೆ ನಿರ್ಮಿಸಲು ಉದ್ದೇಶಿಸಲಾಗಿದೆ. ದೇಶದಲ್ಲೇ ಪ್ರಥಮ ಬಾರಿಗೆ ಖಾಸಗಿ ವಲಯದಿಂದ ವಿಮಾನ ತಯಾರಿಕಾ ಘಟಕವನ್ನು ಸ್ಥಾಪಿಸಲಾಗುತ್ತಿದೆ