Published on: July 5, 2022

ಸುದ್ಧಿ ಸಮಾಚಾರ – 05 ಜುಲೈ 2022

ಸುದ್ಧಿ ಸಮಾಚಾರ – 05 ಜುಲೈ 2022

  • ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಅವರಿಗೆ ಪರಿಸರ ರಾಯಭಾರಿ ಗೌರವ ನೀಡಿ, ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

  • ಬೆಂಗಳೂರಿನ ಆಕರ್ಷಣೆಗಳಲ್ಲಿ ಒಂದಾಗಿರುವ ಐತಿಹಾಸಿಕ ಕಬ್ಬನ್ ಪಾರ್ಕ್‌ ಉದ್ಯಾನದಲ್ಲಿ ಶೀಘ್ರದಲ್ಲೇ ಸುರಂಗ ಅಕ್ವೇರಿಯಂ ತಲೆ ಎತ್ತಲಿದೆ.
  • ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವರದಾನವಾಗುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ (ಎಂಎಲ್ಎಲ್ಯಾಡ್‌) ಅಡಿಯಲ್ಲಿ ಸರ್ಕಾರಿ ಶಾಲೆಗಳಿಗೆ ಬಸ್ ಖರೀದಿಸಲು ಸೌಲಭ್ಯವನ್ನು ಕಲ್ಪಿಸಿದೆ.
  • ಅಮೃತ ಸ್ವಾತಂತ್ರೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ  17ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ.
  • ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಎಟಿಆರ್ (ಏರೋನಾಟಿಕಲ್ ಟೆಸ್ಟ್ ರೇಂಜ್‌) ನಿಂದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ.
  • ಬೆಂಗಳೂರು ರೈಲ್ವೆ ವಿಭಾಗವು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲೋಕ್ ರೂಮ್‌ಗಳನ್ನು (ಡಿಜಿಲಾಕರ್‌ಗಳು) ಪ್ರಾರಂಭಿಸಿದೆ.
  • ಪೋಷಣ್ ಯೋಜನೆಯ ಪ್ರಯೋಜನ ಪಡೆಯುವಲ್ಲಿ ಮಕ್ಕಳ ಆಧಾರ್ ಕಡ್ಡಾಯವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಸ್ಪಷ್ಪಪಡಿಸಿದೆ. ತಾಯಿಯ ಬಯೋಮೆಟ್ರಿಕ್ ಕಾರ್ಡ್ ಬಳಸಿ ಪೋಷಣ್ ಆ್ಯಪ್ ನಲ್ಲಿ ನೋಂದಣಿಯಾಗಿ ಇದರ ಅನುಕೂಲ ಪಡೆಯಬಹುದಾಗಿದೆ.
  • ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಸೆಂಟರ್‌ ಫಾರ್‌ ನ್ಯೂರೋ ಸೈನ್ಸ್‌ ವಿಭಾಗದ ಸಂಶೋಧಕರು ಹೊಸದಾಗಿ ಅಭಿವೃದ್ಧಿಪಡಿಸಿರುವ ಜಿಪಿಯು (ಗ್ರಾಫಿಕ್‌ ಪ್ರೊಸೆಸಿಂಗ್‌ ಯುನಿಟ್‌) ಆಧಾರಿತ ‘ಮೆಷಿನ್‌ ಲರ್ನಿಂಗ್ ಅಲ್ಗಾರಿದಮ್‌’, ಇದರಿಂದ ವಿಜ್ಞಾನಿಗಳು ಮಿದುಳಿನ ವಿವಿಧ ಭಾಗಗಳ ನಡುವಿನ ಸಂಪರ್ಕಗಳನ್ನು ಹೆಚ್ಚು ತರ್ಕಬದ್ಧವಾಗಿ ಅರ್ಥೈಸಿಕೊಳ್ಳುವುದರ ಜತೆ ಮುಂದೇನಾಗಬಹುದು ಎಂಬುದನ್ನು ಊಹಿಸಲೂ ಅಥವಾ ಭವಿಷ್ಯವನ್ನು ನುಡಿಯಲು ಸಾಧ್ಯವಾಗು ತ್ತದೆ.
  • ರಾಜ್ಯ ಸರಕಾರವು ‘ಆರೋಗ್ಯ ಕರ್ನಾಟಕ’ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು 2018ರ ಮಾರ್ಚ್ 2 ರಿಂದ ಅನುಷ್ಠಾನಗೊಳಿಸುತ್ತಿತ್ತು. ನಂತರದಲ್ಲಿ ಕೇಂದ್ರ ಸರಕಾರವು ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೊಳಿಸಿದೆ. ಯೋಜನೆಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ‘ಆಯುಷ್ಮಾನ್‌ ಭಾರತ್‌ – ಆರೋಗ್ಯ ಕರ್ನಾಟಕ ಎಂಬ ಹೆಸರಿನಲ್ಲಿಅನುಷ್ಠಾನ ಮಾಡಲಾಗುತ್ತಿದೆ. ಪ್ರಸ್ತಕ ಆರ್ಥಿಕ ವರ್ಷದ ಮೊದಲ ಎರಡು ತಿಂಗಳಲ್ಲಿಯೇ 3 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
  • ಹಾವು ಮತ್ತಿತರ ಜಂತುಗಳ ವಿಷ ನಿಷ್ಕ್ರಿಯಗೊಳಿಸುವ ಔಷಧ ಉತ್ಪಾದಿಸಲು ನೆರವಾಗುವ ‘ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ’ದ ಕಟ್ಟಡ ನಿರ್ಮಾಣಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ‘ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್’ನ ಐಬಿಎಬಿ ಸಂಸ್ಥೆ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
  • ಜಿಲ್ಲೆಯಲ್ಲಿ ಕೃಷ್ಣಾ, ಭೀಮಾ ನದಿ ಪ್ರವಾಹ ಸೇರಿದಂತೆ ಇನ್ನಿತರ ಪ್ರಾಕೃತಿಕ ವಿಪತ್ತುಗಳು ಸಂಭವಿಸಿದಾಗ ತುರ್ತಾಗಿ ಜನರಿಗೆ ರಕ್ಷಣೆ ನೀಡಲು, ಆಸ್ತಿ ಹಾಗೂ ಪ್ರಾಣ ರಕ್ಷಣೆ ಮಾಡಲು ಸಮುದಾಯದಲ್ಲಿ 24 ಗಂಟೆಗಳು ಲಭ್ಯವಿರುವಂಥ ಜನರಿಗೆ ತರಬೇತಿ ಸರ್ಕಾರ ಮುಂದಾಗಿದೆ.ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ವತಿಯಿಂದ ರಾಜ್ಯದ 11 ಜಿಲ್ಲೆಗಳಲ್ಲಿ ವಿಪತ್ತು ನಿರ್ವಹಣೆಗೆ ‘ಆಪದ್ ಮಿತ್ರ’ ಅನುಷ್ಠಾನಗೊಳಿಸುತ್ತಿದೆ.
  • ಉಡುಪಿ ಸುಂದರಿ ಸಿನಿ ಶೆಟ್ಟಿ ಮಿಸ್ ಇಂಡಿಯಾ: ಫೆಮಿನಾ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಕಿರೀಟ ಮುಡಿಗೇರಿಸಿಕೊಂಡಿರುವ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಇನ್ನಂಜೆ ಸಮೀಪದ ಮಡಂಬು ಮೂಲದವರು.
  • ಕೇಂದ್ರ ಸರ್ಕಾರವು ಧ್ವಜ ಸಂಹಿತೆ-2002ಕ್ಕೆ ತಿದ್ದುಪಡಿ ತಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್ ಧ್ವಜಗಳಿಗೆ ಅನುಮತಿ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ‘ಮೈಸೂರು ಖಾದಿ ನೂಲುಗಾರರ ಬಳಗ’ವು ಮಕ್ಕಳು ಮತ್ತು ನಾಗರಿಕರಿಗೆ ಖಾದಿ ನೂಲು ನೇಯುವ ಕಾರ್ಯಾಗಾರ ನಡೆಸಿ ಮೌನ ಪ್ರತಿಭಟನೆ ದಾಖಲಿಸಿತು.
  • ಪ್ಲಾಸ್ಟಿಕ್ ತ್ಯಾಜ್ಯದ ಅಪಾಯಗಳನ್ನು ಪರಿಗಣಿಸಿ, ಮಾಲಿನ್ಯವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ದೇಶದಲ್ಲಿ ಏಕಬಳಕೆಯ ಪ್ಲಾಸ್ಟಿಕ್ನ ಮೇಲೆ ನಿಷೇಧ ಹೇರಲಾಗಿದೆ. ಇದೇ ಜುಲೈ 1ರಿಂದ ಜಾರಿ ಬರುವಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಹೇರಲಾಗಿದೆ.
  • ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್ ಎಲ್ ವಿ ಸಿ-53 ರಾಕೆಟ್ ಉಡಾವಣೆಯಾಯಿತು. PSLV-C53 ಬಾಹ್ಯಾಕಾಶ ಸಂಸ್ಥೆಯ ವಾಣಿಜ್ಯ ಅಂಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ನ ಎರಡನೇ ವಾಣಿಜ್ಯಾತ್ಮಕ ಮಿಷನ್ ಆಗಿದೆ.
  • 15 ವಾರಗಳ ಬಳಿಕ ಗರ್ಭಪಾತ ಮಾಡಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡುತ್ತಿದ್ದಂತೆಯೇ ಅಮೆರಿಕದಲ್ಲಿ ಪ್ರತಿಭಟನೆಗಳು ತೀವ್ರವಾಗವೆ. ಇದು ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳಲಿದೆ. ಅವರನ್ನು ಇನ್ನಷ್ಟು ದುರ್ಬಲರನ್ನಾಗಿ ಮಾಡಲಿವೆ. ಅವರ ಆರೋಗ್ಯಕ್ಕೂ ಇದು ಸಮಸ್ಯೆ ಉಂಟು ಮಾಡಲಿದೆ. ಕೋರ್ಟ್‌ ತೀರ್ಪಿನಿಂದಾಗಿ ಮಹಿಳೆಯ ಸಾಂವಿಧಾನಿಕ ಹಕ್ಕಿನ ಮೇಲೆ ದಾಳಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
  • ವಿಶ್ವಕಪ್ ಚಿನ್ನ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ ನಿಧನ: ಭಾರತ ತಂಡವು ಕ್ವಾಲಾಲಂಪುರ ನಡೆದ 1975ರ ವಿಶ್ವಕಪ್‌ನ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು 2–1ರಿಂದ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿತ್ತು. ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತ ಜಯಿಸಿದ ಏಕೈಕ ಚಿನ್ನ ಇದು. ಈ ತಂಡವನ್ನು ವರಿಂದರ್ ಪ್ರತಿನಿಧಿಸಿದ್ದರು. 1972ರ ಮ್ಯೂನಿಕ್‌ ಒಲಿಂಪಿಕ್ಸ್‌ನಲ್ಲಿ ಕಂಚು ಮತ್ತು 1973ರಲ್ಲಿ ಆ್ಯಮ್‌ಸ್ಟರ್‌ಡ್ಯಾಮ್‌ ವಿಶ್ವಕಪ್‌ನಲ್ಲಿ ಬೆಳ್ಳಿ ಜಯಿಸಿದ್ದ ತಂಡದಲ್ಲಿಯೂ ಅವರು ಆಡಿದ್ದರು. 1974 ಮತ್ತು 1978ರ ಏಷ್ಯನ್ ಗೇಮ್ಸ್‌ಗಳಲ್ಲಿ ಬೆಳ್ಳಿ ವಿಜೇತ ಮತ್ತು 1975ರ ಮಾಂಟ್ರಿಯಲ್ ಒಲಿಂಪಿಕ್ಸ್‌ಗಳಲ್ಲಿ ಆಡಿದ್ದ ತಂಡದಲ್ಲಿ ವರಿಂದರ್ ಇದ್ದರು.
  • ವಿಶ್ವ ಅಥ್ಲೆಟಿಕ್ಸ್‌: ಭಾರತ ತಂಡಕ್ಕೆ ನೀರಜ್ ನಾಯಕ :ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಅಥ್ಲೀಟ್ ನೀರಜ್ ಚೋಪ್ರಾ ಇದೇ ತಿಂಗಳು  ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಸ್ಪರ್ಧಿಸುವ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.