Published on: January 10, 2022

ಸುದ್ಧಿ ಸಮಾಚಾರ 10 ಜನವರಿ 2022

ಸುದ್ಧಿ ಸಮಾಚಾರ 10 ಜನವರಿ 2022

  • ಕರ್ನಾಟಕದಲ್ಲಿ ಕೊರೊನಾ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಮನ್ನಣೆ ದೊರೆತಿದೆ. ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಡೆಸುತ್ತಿರುವ ನಿರ್ವಹಣೆಯಲ್ಲಿ ತೊಡಗಿರುವ ಕೋವಿಡ್ ರೂಮ್‌ಗೆ ಈಗ ರಾಷ್ಟ್ರಪ್ರಶಸ್ತಿ ದೊರೆತಿದೆ.
  • ಗ್ರಾಮೀಣ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿ ನಿಖರತೆಗಾಗಿ ‘ಗಾಂಧಿ ಸಾಕ್ಷಿ ಕಾಯಕ ತಂತ್ರಾಂಶ’ ಉನ್ನತೀಕರಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ‘ಗಾಂಧಿ ಸಾಕ್ಷಿ ಕಾಯಕ 2.0’ ತಂತ್ರಾಂಶವನ್ನು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿತು.
  • ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಅವರು ಬೆಂಗಳೂರಿನಲ್ಲಿ ನಿಧನರಾದರು. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರು. ಚಂದ್ರಶೇಖರ್ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾದವರು.
  • ಸುಮಾರು ಮೂರು ವರ್ಷಗಳ ಹಿಂದೆ ಹಣಕಾಸು ತಂತ್ರಜ್ಞಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ), ಇದೀಗ ಶೀಘ್ರದಲ್ಲೇ ಫಿನ್‌ಟೆಕ್ ವಿಭಾಗ ಪ್ರಾರಂಭಿಸಲಿದೆ. ಫಿನ್‌ಟೆಕ್ ಇಲಾಖೆ ತೆರೆಯುವ ಮೂಲಕ ಭಾರತದ ಫಿನ್‌ಟೆಕ್ ವಲಯದಲ್ಲಿ ನಾವೀನ್ಯತೆಯನ್ನು ಉತ್ತೇಜಿಸಲು ಕೇಂದ್ರೀಯ ಬ್ಯಾಂಕ್ ಬಯಸುತ್ತದೆ
  • ಭಾರತದ ಕೃಷಿ ಉತ್ಪನ್ನಗಳನ್ನು ವಿದೇಶಕ್ಕೆ ರಫ್ತು ಮಾಡುವ ಯೋಜನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳಿನಿಂದ ಭಾರತದಿಂದ ಅಮೆರಿಕಾಗೆ ಮಾವು ಮತ್ತು ದಾಳಿಂಬೆ ರಫ್ತಾಗಲಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ.
  • ಜನವರಿ 9ರಂದು ದೇಶದಾದ್ಯಂತ ಪ್ರವಾಸಿ ಭಾರತೀಯ ದಿವಸ ಆಚರಿಸಲಾಗುತ್ತದೆ. ದೇಶದ ಅಭಿವೃದ್ಧಿಯಲ್ಲಿ ವಿದೇಶಗಳಲ್ಲಿ ಅನಿವಾಸಿ ಭಾರತೀಯರು ನೀಡುವ ಕೊಡುಗೆ ಸ್ಮರಿಸುವ ದಿನ ಇದಾಗಿದೆ.
  • ಮೊಘಲ್ ಅರಸರಿಂದ ಗಲ್ಲಿಗೇರಿದ 10ನೇ ಸಿಖ್ ಗುರು ಗೋವಿಂದ ಸಿಂಗ್ ಅವರ ನಾಲ್ವರು ಪುತ್ರರ ಸ್ಮರಣಾರ್ಥ ಡಿಸೆಂಬರ್ 26 ಅನ್ನು ಇನ್ನು ಮುಂದೆ ‘ವೀರ ಬಾಲ ದಿವಸ’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.