Published on: August 11, 2022

ಸುದ್ಧಿ ಸಮಾಚಾರ – 11 ಆಗಸ್ಟ್ 2022

ಸುದ್ಧಿ ಸಮಾಚಾರ – 11 ಆಗಸ್ಟ್ 2022

  • ಹೊಸ ಜಿಲ್ಲೆ ವಿಜಯನಗರದ ಕೇಂದ್ರ ಸ್ಥಾನವಾದ ಹೊಸಪೇಟೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ದೇಶದ ಅತಿ ಎತ್ತರದ ಧ್ವಜಸ್ತಂಭ(123 ಮೀಟರ್‌ )ವನ್ನು ಅನಾವರಣಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

  • ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಎಂದು ಒತ್ತಾಯಿಸಿದ ಕ್ವಿಟ್ ಇಂಡಿಯಾ ಚಳವಳಿ ಆಗಸ್ಟ್ 8 ರಂದು 80ನೇ ವರ್ಷಾಚರಣೆ ಹಾಗೂ ಭಾರತದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಆಜಾದಿ ಕಾ ಅಮೃತ್ ಮಹೋತ್ಸವ ಭಾಗವಾಗಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್  ಬೆಂಗಳೂರಿನಲ್ಲಿರುವ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ ನೀಡಿ ಅವರನ್ನು ಗೌರವಿಸಿದರು.
  • ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಕಾಕೋರಿ ರೈಲು ಪ್ರಕರಣದ ಸ್ಮರಣಾರ್ಥ ‘ರೇಡಿಯೊ ಜಯಘೋಷ್’ ಚಾನಲ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು  ಚಾಲನೆ ನೀಡಿದರು.
  • ಭಾರತದಲ್ಲಿ ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಯಿತು. ಈ ದಿನವು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯಲ್ಲಿ ಕೈಮಗ್ಗ ಉದ್ಯಮದ ಕೊಡುಗೆಯನ್ನು ಎತ್ತಿ ತೋರಿಸುತ್ತದೆ. ಇದು ಕೈಮಗ್ಗ ಉದ್ಯಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ. ಜವಳಿ ಸಚಿವಾಲಯವು ಆಚರಣೆಯ ನೋಡಲ್ ಏಜೆನ್ಸಿಯಾಗಿದೆ.
  • ಕಾಮನ್ ವೆಲ್ತ್ ಕ್ರೀಡಾ ಕೂಟದಲ್ಲಿ ಹಾಕಿ ಪುರುಷರ ವಿಭಾಗದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 0-7 ಗೋಲುಗಳ ಅಂತರದಿಂದ ಸೋತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ.