Published on: October 18, 2022

ಸುದ್ಧಿ ಸಮಾಚಾರ – 18 ಅಕ್ಟೋಬರ್ 2022

ಸುದ್ಧಿ ಸಮಾಚಾರ – 18 ಅಕ್ಟೋಬರ್ 2022

  • ಮಾನ್ಯತೆ ಪಡೆದ ಪಕ್ಷವು ವಿಭಜನೆಯಾದಾಗ ಆ ಪಕ್ಷದ ಚಿಹ್ನೆಯ ಮೇಲೆ ಹಕ್ಕು ಸಾಧಿಸಲು ವಿಭಜಿತ ಬಣಗಳು ಪ್ರಯತ್ನಿಸುತ್ತವೆ. ಈ ಸಂಗತಿ ಇತ್ಯರ್ಥ ಆಗುವವರೆಗೂ ಚುನಾವಣೆ ಆಯೋಗವು ಆ ಚಿಹ್ನೆಯನ್ನು ಸ್ಥಗಿತಗೊಳಿಸುತ್ತದೆ. ಆಗ ವಿಭಜಿತ ಬಣಗಳು ಹೊಸ ಚಿಹ್ನೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಈಗ ಮಹಾರಾಷ್ಟ್ರದ ಶಿವಸೇನೆಯಲ್ಲಿ ಇಂತಹ ಪರಿಸ್ಥಿತಿ ಉದ್ಭವಿಸಿದೆ.
  • ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿದ್ದಾರೆ. ನೇಮಕಾತಿಯೂ ನವೆಂಬರ್ 9, 2022 ರಿಂದ ಜಾರಿಗೆ ಬರಲಿದ್ದು, ಅಂದು ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
  • ಮಧ್ಯಪ್ರದೇಶ ಸರ್ಕಾರವು ಹಿಂದಿ ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯನ್ನು ಕಾರ್ಯಗತಗೊಳಿಸುವ ದಿಸೆಯಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಹಿಂದಿಯಲ್ಲಿ ಎಂಬಿಬಿಎಸ್ ಕೋರ್ಸ್ ಆರಂಭಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶ ಭಾಜನವಾಗಿದೆ’
  • ದೇಶದ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳ (ಡಿಬಿಯು) ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮಾಧ್ಯಮದ ಮೂಲಕ ನೆರವೇರಿಸಿದರು.