Published on: January 19, 2022
ಸುದ್ಧಿ ಸಮಾಚಾರ 19 ಜನವರಿ 2022
ಸುದ್ಧಿ ಸಮಾಚಾರ 19 ಜನವರಿ 2022
- ರಾಜ್ಯದ 7 ಜಿಲ್ಲೆಗಳಲ್ಲಿ ನಡೆಯುತ್ತಿರುವ ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಅನುದಾನದ ಸಮಸ್ಯೆ ಇಲ್ಲದಿದ್ದರೂ ಕೊರೊನಾ ಕುಂಟು ನೆಪ ಹೇಳಿ ಕಾಮಗಾರಿಯ ಅಂತಿಮ ಗಡುವನ್ನು ವಿಸ್ತರಿಸಿಕೊಳ್ಳಲಾಗಿದೆ.
- ರೈತರಿಗೆ ಬಲ ತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
- ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಸಮಿತಿ ತಿರಸ್ಕಾರ ಮಾಡಿರುವ ವಿಚಾರ ರಾಜಕೀಯವಾಗಿ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗುತ್ತಿದೆ.
- ಗುರು ರವಿದಾಸ್ ಜಯಂತಿಯನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ನಲ್ಲಿ ಫೆಬ್ರವರಿ 14 ರಂದು ನಿಗದಿಯಾಗಿದ್ದ ವಿಧಾನಸಭೆ ಚುನಾವಣೆಯನ್ನು ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
- ಕಾಲರ್ ವಾಲಿ ಮಾರತರಂ ಎಂದೇ ಪ್ರಸಿದ್ಧಿ ಪಡೆದಿದ್ದ ಮಧ್ಯಪ್ರದೇಶದ ಪೆಂಚ್ ಹುಲಿ ಸಂರಕ್ಷಿತ ಪ್ರದೇಶ(ಪಿಟಿಆರ್)ದಲ್ಲಿ ವಾಸವಿದ್ದ ಸುಮಾರು 16 ವರ್ಷದ ಹೆಣ್ಣು ಹುಲಿ ವಯೋ ಸಹಜ ಅನಾರೋಗ್ಯಕ್ಕೀಡಾಗಿ ಸಾವಿಗೀಡಾಗಿದೆ.
- ಕಳೆದ ವರ್ಷ ಚೀನಾದ ಜನಸಂಖ್ಯೆ 5 ಲಕ್ಷಕ್ಕೂ ಕಡಿಮೆ ಏರಿಕೆ ಕಂಡಿದ್ದು, ಇದರೊಂದಿಗೆ ಸತತ 5 ವರ್ಷಗಳಿಂದ ದೇಶದ ಜನ ಪ್ರಮಾಣ ಕುಸಿತಕ್ಕೊಳಗಾದಂತಾಗಿದೆ.