Published on: November 21, 2022
ಸುದ್ಧಿ ಸಮಾಚಾರ – 21 ನವೆಂಬರ್ 2022
ಸುದ್ಧಿ ಸಮಾಚಾರ – 21 ನವೆಂಬರ್ 2022
- ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಚಿತ್ರನಟ ದರ್ಶನ್ ತೂಗುದೀಪ್ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
- ನಟ ದರ್ಶನ್ ಅವರು ವನ್ಯಜೀವಿ ಛಾಯಾಗ್ರಾಹಕ ಹಾಗೂ ಪ್ರಾಣಿಶಾಸ್ತ್ರ ಪ್ರಾಧಿಕಾರದ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ
- ರಾಜ್ಯದಲ್ಲಿ ಹೊಸದಾಗಿ ಉತ್ತಾರೆಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ ಮತ್ತು ಅರಸೀಕೆರೆ ಕರಡಿ ಲಗತ್ತಿ ಧಾಮಗಳನ್ನು ಹಾಗೂ ಹಿರೆಸೂಲೇಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಮತ್ತು ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸುವ ಪ್ರಸ್ತಾವನೆಗಳಿಗೆ ಸಂಪುಟ ಅನುಮೋದನೆ ನೀಡಿದೆ.
- ಕರ್ನಾಟಕ ರಾಜ್ಯ ದತ್ತಿ ಇಲಾಖೆಯು ಚಿಕ್ಕಮಗಳೂರಿನ ಗುರು ದತ್ತಾತ್ರೇಯ ಬಾಬಾಬುಡನ್ ದೇಗುಲದಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಮೇಲ್ವಿಚಾರಣೆಗಾಗಿ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದೆ. ಕರ್ನಾಟಕ ದತ್ತಿ ಇಲಾಖೆಯು ತನ್ನ ಸಭೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಕಾಯಿದೆ, 2011 ರ ಸೆಕ್ಷನ್ 25 ರ ಅಡಿಯಲ್ಲಿ ಸಮಿತಿಯನ್ನು ರಚಿಸಲಾಗಿದೆ.
- ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಕರ್ನಾಟಕ ರಾಜ್ಯ ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.ಈ ಹೊಸ ನೀತಿಯಡಿ ಅರಣ್ಯ ಇಲಾಖೆಯಿಂದ ರೈತರನ್ನು ಕಳ್ಳಸಾಗಣೆದಾರರಿಂದ ರಕ್ಷಿಸಲಾಗುವುದು. ಯಾರಾದರೂ ಶ್ರೀಗಂಧದ ಮರಗಳನ್ನು ಕಡಿಯಲು ಪ್ರಯತ್ನಿಸಿದಾಗ ಅಧಿಕಾರಿಗಳಿಗೆ ಅಲರ್ಟ್ ನೀಡಲು ಮರಗಳಿಗೆ ಮೈಕ್ರೋಚಿಪ್ ಅಳವಡಿಸಲಾಗುವುದು
- ಆಸ್ಟ್ರೇಲಿಯಾ ತನ್ನ ರಾಯಭಾರ ಕಚೇರಿಯನ್ನು 2023 ರಲ್ಲಿ ಬೆಂಗಳೂರಿನಲ್ಲಿ ತೆರೆಯಲು ನಿರ್ಧರಿಸಿದೆ. ಹೊಸ ರಾಯಭಾರಿ ಕಚೇರಿಯು ಭಾರತದಲ್ಲಿ ಐದನೇ ರಾಜತಾಂತ್ರಿಕ ಕಚೇರಿಯಾಗಲಿದೆ.
- ವೈಯಕ್ತಿಕ ದತ್ತಾಂಶ ರಕ್ಷಣೆ ಮಸೂದೆ 2022ರ ಅಡಿಯಲ್ಲಿನ ನಿಬಂಧನೆಗಳನ್ನು ಉಲ್ಲಂಘಿಸಿದರೆ ವಿಧಿಸುವ ದಂಡದ ಮೊತ್ತವನ್ನು 6 ಬಗೆಯಲ್ಲಿ 500 ಕೋಟಿ ರೂವರೆಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಉದ್ದೇಶಿತ ಕರಡು ಪ್ರಸ್ತಾವನೆ ಹೊರಡಿಸಿದೆ.
- ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕರ ಸೇವಾ ಅವಧಿಯನ್ನು ಗರಿಷ್ಠ 10 ವರ್ಷಗಳವರೆಗೆ ಹೆಚ್ಚಿಸಲಾಗಿದೆ. ನೇಮಕಾತಿ ಅವಧಿಯನ್ನು 5 ವರ್ಷಗಳಿಂದ 10 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಇದು 60 ವರ್ಷಗಳ ನಿವೃತ್ತಿ ವಯಸ್ಸಿನ ಮಿತಿಗೆ ಒಳಪಟ್ಟಿದೆ. ಈ ಮೊದಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಸಿಇಒ ಅವಧಿಯು ಗರಿಷ್ಠ 5 ವರ್ಷ ಅಥವಾ 60 ವರ್ಷ ವಯಸ್ಸು; ಇವುಗಳಲ್ಲಿ ಯಾವುದು ಮೊದಲೋ ಅದು ಅನ್ವಯವಾಗುವಂತೆ ಇತ್ತು. ಉದ್ದೇಶ: ಉತ್ತಮ ಪ್ರತಿಭೆಗಳನ್ನು ಬ್ಯಾಂಕಿಂಗ್ ವಲಯದಲ್ಲಿ ಉಳಿಸಿಕೊಳ್ಳಲು ಈ ನಿರ್ಧಾರವು ಸರ್ಕಾರಕ್ಕೆ ನೆರವಾಗಲಿದೆ.
- ದೇವರ ಮೊಸಳೆ’ ಎಂದೇ ಹೆಸರಾಗಿದ್ದ ಇಲ್ಲಿನ ಅನಂತಪುರ ಪದ್ಮನಾಭ ಸ್ವಾಮಿ ದೇವಾಲಯದ ಸರೋವರದಲ್ಲಿದ್ದ ಮೊಸಳೆ ಬಬಿಯಾ ಸ್ಮರಣಾರ್ಥ ಅಂಚೆ ಇಲಾಖೆಯು ವಿಶೇಷ ಲಕೋಟೆ ಬಿಡುಗಡೆ ಮಾಡಿದೆ. ಈ ಲಕೋಟೆಯಲ್ಲಿ ಅನಂತಪುರದ ಸರೋವರ ದೇವಾಲಯ ಮತ್ತು ಬಬಿಯಾ ಚಿತ್ರಗಳಿವೆ. ಹಿಂಬದಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ದೇವಾಲಯದ ಇತಿಹಾಸ ಮತ್ತು ಬಬಿಯಾ ಜೀವನಚರಿತ್ರೆ ಮುದ್ರಿಸಲಾಗಿದೆ.
- ಮಿಷನ್ ಪ್ರಾರಂಭ’ ಯಶಸ್ವಿ: ಭಾರತದ ಮೊದಲ ಖಾಸಗಿ ಉಡಾವಣಾ ವಾಹಕ ವಿಕ್ರಮ್-ಎಸ್ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿದೆ.
- ಎಲ್ಲಾ ಲಿಂಗಗಳ ಸೂಚನೆಗೆ ‘She’ ಬಳಕೆ: ಶಾಸಕಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ, ಸಂಪೂರ್ಣ ಕರಡು ಮಸೂದೆಯಲ್ಲಿ ಎಲ್ಲಾ ಲಿಂಗಗಳನ್ನು ಸೂಚಿಸಲು ”her’ ಮತ್ತು ‘She’ ಬಳಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ರೈಲ್ವೆ, ಸಂವಹನ, ಇಡೀ ಮಸೂದೆಯಲ್ಲಿ ‘him’ ಮತ್ತು ‘his’ ಬದಲಿಗೆ ‘her’ ಮತ್ತು ‘She’ ಪದವನ್ನು ಬಳಸಲು ಪ್ರಯತ್ನಿಸಿದ್ದೇವೆ.
- ವಿಶ್ವ ರ್ಯಾಂಕಿಂಗ್ನಲ್ಲಿ 44ನೇ ಸ್ಥಾನದಲ್ಲಿರುವ ಒಲಿಂಪಿಯನ್ ಮಣಿಕಾ ಬಾತ್ರಾ ಅವರು ಐಟಿಟಿಎಫ್–ಎಟಿಟಿಯು ಏಷ್ಯಾಕಪ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಮೊದಲ ಆಟಗಾರ್ತಿ ಎಂಬ ಸಾಧನೆಗೆ ಭಾಜನರಾದರು. ಶರತ್ ಕಮಲ್ ಮತ್ತು ಜಿ.ಸತ್ಯನ್ ಅವರು ಕ್ರಮವಾಗಿ 2015 ಮತ್ತು 2019ರಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಆರನೇ ಸ್ಥಾನ ಗಳಿಸಿದ್ದೇ ಭಾರತದ ಆಟಗಾರರ ಇದುವರೆಗಿನ ಶ್ರೇಷ್ಠ ಸಾಧನೆಯಾಗಿತ್ತು.