Published on: April 23, 2022
ಸುದ್ಧಿ ಸಮಾಚಾರ 22 ಏಪ್ರಿಲ್ 2022
ಸುದ್ಧಿ ಸಮಾಚಾರ 22 ಏಪ್ರಿಲ್ 2022
- ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ಸೆಕ್ಷನ್ 42(2) ರ ಅಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಕೌನ್ಸಿಲರ್ಗಳು ಪೌರಾಡಳಿತ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ
- ಅಪರಾಧಿಗಳ ಮತ್ತು ಆರೋಪಿಗಳ ದೈಹಿಕ ಹಾಗೂ ಜೈವಿಕ ಮಾದರಿಗಳನ್ನು ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಕ್ರಿಮಿನಲ್ ಪ್ರೊಸೀಜರ್ (ಗುರುತು) ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ.
- ದೇಶದ ಆಯುಷ್ ಉತ್ಪನ್ನಗಳ ಗುಣಮಟ್ಟ ದೃಢೀಕರಿಸುವುದಕ್ಕಾಗಿ ಶೀಘ್ರದಲ್ಲೇ ‘ಆಯುಷ್ ಮಾರ್ಕ್’ ಆರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು
- ನೀತಿ ಆಯೋಗವು ಎಲೆಕ್ಟ್ರಿಕ್ ವಾಹನಗಳಲ್ಲಿ ಬಳಸುವ ಬ್ಯಾಟರಿಗಳ ವಿನಿಮಯಕ್ಕೆ ಸಂಬಂಧಿಸಿ ಹೊಸ ನೀತಿಯ ಕರಡನ್ನು ಅನಾವರಣಗೊಳಿಸಿದೆ.
- ಭಾರತದ ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ ಯೋಜನೆಗೆ (ಪಿಎಲ್ಐ) ಭಾರಿ ಬೆಂಬಲ ಲಭಿಸಿದ್ದು, 14 ಕ್ಷೇತ್ರಗಳಲ್ಲಿ 2.34 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.
- ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸಿಖ್ರ ಧರ್ಮಗುರು ಶ್ರೀ ಗುರು ತೇಜ್ ಬಹಾದ್ದೂರ್ ಅವರ 400ನೇ ಪ್ರಕಾಶ ಪೂರಬ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು.
- ಭಾರತೀಯ ನೌಕಾದಳ ಸಾಮರ್ಥ್ಯ ಮತ್ತಷ್ಟು ಹೆಚ್ಚಳವಾಗಿದ್ದು, ಐಎನ್ಎಸ್ ವಾಗ್ಶೀರ್ ಜಲಾಂತರ್ಗಾಮಿ ನೌಕೆ ಲೋಕಾರ್ಪಣೆಯಾಗಿದೆ.
- ಭಾರತದ ಅತ್ಯಂತ ಯಶಸ್ವೀ ಕ್ಷಿಪಣಿ ಎಂದೇ ಖ್ಯಾತಿ ಗಳಿಸಿರುವ ಬ್ರಹ್ಮೋಸ್ ಕ್ಷಿಪಣಿಯ ‘ಡಬಲ್ ಹಿಟ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದ್ದು, ನೌಕೆ ಮತ್ತು ಯುದ್ಧ ವಿಮಾನದ ಮೂಲಕ ಒಂದೇ ಗುರಿ ಧ್ವಂಸ ಮಾಡುವ ಪರೀಕ್ಷೆ ಯಶಸ್ವಿಯಾಗಿದೆ.
- ಉಕ್ರೇನ್ನೊಂದಿಗೆ ಯುದ್ಧದಲ್ಲಿ ನಿರತವಾಗಿರುವಾಗಲೇ ರಷ್ಯಾ ಅತ್ಯಂತ ವಿಧ್ವಂಸಕಾರಿ ಖಂಡಾಂತರ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದೆ. ಸರ್ಮತ್ ಹೆಸರಿನ ಈ ಖಂಡಾಂತರ ಕ್ಷಿಪಣಿ, ಪರಮಾಣು ಸಿಡಿತಲೆಗಳನ್ನು ಹೊತ್ತು ಇಡೀ ಭೂಮಿಯನ್ನು ಒಂದು ಸುತ್ತು ಸುತ್ತಬಲ್ಲ ಸಾಮರ್ಥ್ಯ ಹೊಂದಿದೆ.
- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಯೋಗದೊಂದಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಸಂಶೋಧಕರು ಮಂಗಳ ಗ್ರಹದಲ್ಲಿ ಕಟ್ಟಡದಂತಹ ರಚನೆಗಳನ್ನು ನಿರ್ಮಿಸಲು ಬಳಸಬಹುದಾದ “ಬಾಹ್ಯಾಕಾಶ ಇಟ್ಟಿಗೆಗಳನ್ನು ಅಭಿವೃದ್ಧಿಪಡಿಸಿದ್ದಾರೆ.
- ಇಂದು ವಿಶ್ವ ಭೂ ದಿನ. ಈ ಬಾರಿ ವಿಶ್ವ ಭೂ ದಿನವನ್ನು ‘ನಮ್ಮ ಭೂಮಿಯಲ್ಲಿ ಹೂಡಿಕೆ ಮಾಡಿ’ (Invest in our Planet) ಎನ್ನುವ ಥೀಮ್ನಡಿಯಲ್ಲಿ ಭೂಮಿಯ ಉಳಿವಿಗೆ ಕೈಜೋಡಿಸಿ ಎನ್ನುವ ಅರ್ಥದಲ್ಲಿ ಈ ದಿನವನ್ನು ಆಚರಿಸಲಾಗುತ್ತಿದೆ