Published on: November 22, 2022

ಸುದ್ಧಿ ಸಮಾಚಾರ – 22 ನವೆಂಬರ್ 2022

ಸುದ್ಧಿ ಸಮಾಚಾರ – 22 ನವೆಂಬರ್ 2022

  • ‘ಸಹ್ಯಾದ್ರಿ ಕೆಂಪು ಮುಕ್ತಿ’ ಹೆಸರಿನ ಕೆಂಪಕ್ಕಿಯ ಭತ್ತದ ತಳಿಯನ್ನು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಈ ಭತ್ತದ ತಳಿಯನ್ನು ಅಭಿವೃದ್ಧಿಪಡಿಸಿದೆ. ಭಾರತೀಯ ಭತ್ತ ತಳಿ ಸಂಶೋಧನಾ ಸಂಸ್ಥೆ ನಡೆಸಿದ ಇಳುವರಿ ಪರೀಕ್ಷೆಯಲ್ಲಿ ‘ಸಹ್ಯಾದ್ರಿ ಕೆಂಪು ಮುಕ್ತಿ’ ತಳಿ ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದೆ.
  • ಒಂದು ತಿಂಗಳ ಕಾಲ ನಡೆಯುವ ಕಾಶಿ–ತಮಿಳು ಸಮಾಗಮ ಕಾರ್ಯಕ್ರಮಕ್ಕೆ ವಾರಾಣಸಿಯ ಬನಾರಸ್‌ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
  • ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ ಕಮೆಂಗ್ ಜಲವಿದ್ಯುತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಸಮರ್ಪಿಸಿದರು.
  • ಏರ್ ಸುವಿಧಾ ಪೋರ್ಟಲ್: ಕೋವಿಡ್ ಉಲ್ಬಣಗೊಂಡಿದ್ದ ಸಮಯದಲ್ಲಿ ಭಾರತಕ್ಕೆ ಬರುತ್ತಿದ್ದ ಅಂತರರಾಷ್ಟ್ರೀ ಯ ಪ್ರಯಾಣಿಕರಿಗಾಗಿ ಈ ನಿಯಮ ಜಾರಿಗೆ ತರಲಾಗಿತ್ತು. ಇದರನ್ವಯ ವಿದೇಶಗಳಿಂದ ಭಾರತಕ್ಕೆ ಬರುವವರು ಏರ್ ಸುವಿಧಾ ಪೋರ್ಟಲ್ನಲ್ಲಿ ತಾವು ಕೋವಿಡ್ ಲಸಿಕೆ ಪಡೆದಿರುವ ಮಾಹಿತಿಯನ್ನು ನಮೂದಿಸಬೇಕಿತ್ತು. ಆದರೆ, ಇನ್ನುಮುಂದೆ ಇದರ ಅಗತ್ಯವಿಲ್ಲ. ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾದ ಇಳಿಕೆ ಮತ್ತು ಜಾಗತಿಕ ಹಾಗೂ ಭಾರತದಲ್ಲಿ ಕೋವಿಡ್ ಲಸಿಕೆ ವಿತರಣೆಯಲ್ಲಾಗಿರುವ ಲಸಿಕೆ ವಿತರಣೆಯನ್ನು ಗಮನದಲ್ಲಿಟ್ಟುಕೊಂಡು ಅಂತರರಾಷ್ಟ್ರೀ ಯ ಪ್ರಯಾಣಿಕರಿಗೆ ನಿಯಮಾವಳಿಗಳನ್ನು ಪರಿಷ್ಕರಿಸಲಾಗಿದೆ.