Published on: July 26, 2022

ಸುದ್ಧಿ ಸಮಾಚಾರ – 26 ಜುಲೈ 2022

ಸುದ್ಧಿ ಸಮಾಚಾರ – 26 ಜುಲೈ 2022

  • ಜಲ ಜೀವನ್ ಮಿಷನ್ (JJM) ಯೋಜನೆ ಅನುಷ್ಠಾನದಲ್ಲಿ ಗದಗ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಧಾರವಾಡ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ನಂತರದ ಸ್ಥಾನಗಳಲ್ಲಿವೆ. ಯೋಜನೆ ಅನುಷ್ಠಾನಕ್ಕೆ ಗ್ರಾಮಸ್ಥರು ನೀಡಿದ ಅಪಾರ ಬೆಂಬಲ ಯಶಸ್ಸಿಗೆ ಕಾರಣವಾಗಿದೆ.

  • ಕೈಗಾರಿಕೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ಹೊಸ ಉದ್ಯೋಗ ನೀತಿ 2022-25ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹೊಸ ನೀತಿಯಡಿ, ಕೈಗಾರಿಕೆಗಳು ಸ್ಥಳೀಯರಿಗೆ ನಿರ್ದಿಷ್ಟಪಡಿಸಿದಂತೆ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸಬೇಕು. ಈ ನೀತಿಯು ಕರ್ನಾಟಕದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸುವ ಗುರಿ ಹೊಂದಿದೆ.
  • ಸ್ವಾತಂತ್ರ್ಯ ಹೋರಾಟಗಾರರಿಗೆ ಡಿಜಿಟಲ್ ಗೌರವ ಸಲ್ಲಿಸುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಜು.23 ರಂದು ಕರೆ ನೀಡಿದ್ದಾರೆ.
  • ಭಾರತವೂ ಸೇರಿದಂತೆ ಜಗತ್ತಿನ ಅನೇಕ ದೇಶಗಳನ್ನು ಕಾಡುತ್ತಿರುವ ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ತುರ್ತುಪರಿಸ್ಥಿತಿ ಎಂದು ಘೋಷಿಸಿದೆ.
  • ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ತಂದಿದ್ದು, ತ್ರಿವರ್ಣ ಧ್ವಜವನ್ನು ಹಗಲು-ರಾತ್ರಿ ಹಾರಿಸಲು ಅವಕಾಶ ನೀಡಿದೆ.
  • ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದ್ರೌಪತಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದವರೊಬ್ಬರು ರಾಷ್ಟ್ರದ ಪರಮೋಚ್ಚ ಸ್ಥಾನವನ್ನು ಅಲಂಕರಿಸಿದಂತಾಗಿದೆ.
  • ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ (ಸ್ವೈನ್ ಫಿವರ್) ಪತ್ತೆಯಾಗಿದೆ. ಕೇರಳದ ವಯನಾಡ್ ಜಿಲ್ಲೆಯ ಮಾನಂದವಾಡಿಯ ಎರಡು ಸಾಕಣೆ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • ನೀತಿ ಆಯೋಗ ಜುಲೈ 21, 2022 ರಂದು ಪ್ರಕಟಿಸಿರುವ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿ-2021 ರಲ್ಲಿ ಕರ್ನಾಟಕ ಸತತ ಮೂರನೇ ಬಾರಿಗೆ ಅಗ್ರ ಸ್ಥಾನ ಪಡೆದಿದೆ. ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.