Published on: August 27, 2022
ಸುದ್ಧಿ ಸಮಾಚಾರ – 27 ಆಗಸ್ಟ್ 2022
ಸುದ್ಧಿ ಸಮಾಚಾರ – 27 ಆಗಸ್ಟ್ 2022
-
ಪಂಚಾಯತ್ ಮಟ್ಟದಿಂದಲೇ ಎತ್ತಿನಗಾಡಿ ಓಟದ ಸ್ಪರ್ಧೆ
ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು, ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಯುವಜನ ಮತ್ತು ಕ್ರೀಡಾ ಇಲಾಖೆಯೊಂದಿಗೆ ಕೈಜೋಡಿಸಿ ಕ್ರೀಡಾಕೂಟಗಳನ್ನು ಆಯೋಜಿಸಿದ್ದು, ಇದರಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯೂ ಸೇರಿದೆ.
- ಭಾರತೀಯ ನಾವೀನ್ಯ ಶೃಂಗಸಭೆಯ 18ನೇ ಆವೃತ್ತಿ ‘ಇನ್ನೋವರ್ಜ್–2022’ ಇದೇ 25ರಿಂದ ಮೂರು ದಿನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ತಿಳಿಸಿದೆ. ಭಾರತೀಯ ಕೈಗಾರಿಕೆಗಳು ನಾವೀನ್ಯದ ಆಧಾರಲ್ಲಿ ಬೆಳವಣಿಗೆ ಸಾಧಿಸಿ, ಆ ಮೂಲಕ ಡಿಜಿಟಲ್ ಯುಗದಲ್ಲಿ ಜಾಗತಿಕವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯಲು ಈ ಶೃಂಗಸಭೆ ನೆರವಾಗಲಿದೆ ಎಂದು ಸಿಐಐ ಹೇಳಿದೆ.
- 3ಡಿ ತಂತ್ರಜ್ಞಾನ ಬಳಸಿ ನಿರ್ಮಿಸಿದ ಭಾರತದ ಮೊದಲ ಅಂಚೆ ಕಚೇರಿ ಬೆಂಗಳೂರಿನಲ್ಲಿ ನಿರ್ಮಾಣವಾಗಲಿದ್ದು, ಹಲಸೂರಿನ ಕೇಂಬ್ರಿಡ್ಜ್ ಲೇಔಟ್ನಲ್ಲಿ ಈ ಅಂಚೆ ಕಚೇರಿಯು ನಿರ್ಮಾಣವಾಗಲಿದ್ದು, 3ಡಿ ಪ್ರಿಂಟಿಂಗ್ ತಂತ್ರಜ್ಞಾನ ಬಳಸಿ ನಿರ್ಮಿಸಲಾದ ದೇಶದ ಮೊಟ್ಟ ಮೊದಲ ಅಂಚೆ ಕಚೇರಿ ಎನ್ನುವ ಹೆಗ್ಗಳಿಕೆ ಇದರದ್ದಾಗಲಿದೆ.
- ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಯುವ ಬರಹಗಾರ ದಾದಾಪೀರ್ ಜಿಮನ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿವೃತ್ತ ಶಿಕ್ಷಕ ತಮ್ಮಣ್ಣ ಬೀಗಾರ್ ಅವರಿಗೆ 2022ನೇ ಸಾಲಿನ ಕೇಂದ್ರೀಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
- ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, ‘ಕರ್ನಾಟಕ ವಿಷನ್ ವರದಿ’ ಬಿಡುಗಡೆ ಮಾಡಿದರು. ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ‘ಕರ್ನಾಟಕ ವಿಷನ್ ವರದಿ’ ಹೊರತರಲಾಗಿದೆ.
- ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಮೆನುವಿನಲ್ಲಿ ಜೋಳ, ಸಜ್ಜೆ ಮತ್ತು ರಾಗಿಯನ್ನು ರಾಜ್ಯ ಹಾಗೂ ದೇಶದಾದ್ಯಂತ ಪರಿಚಯಿಸಲಾಗುವುದು. ಪೋಷಣ್ ಅಭಿಯಾನದ ಭಾಗವಾಗಿ ಮಕ್ಕಳ ಊಟದಲ್ಲಿ ಪೌಷ್ಟಿಕಾಂಶವನ್ನು ಸೇರಿಸಲು ಇನ್ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ರಿಸರ್ಚ್ (IIMR), ಅಕ್ಷಯ ಪಾತ್ರಾ ಫೌಂಡೇಶನ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
- ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ‘ಕ್ಯೂಆರ್ ಕೋಡ್ ಸಹಿತ ವಿದ್ಯುನ್ಮಾನ ಹುಂಡಿ’ (‘ಇ–ಹುಂಡಿ’ )ವ್ಯವಸ್ಥೆ ಮಾಡಲಾಗಿದೆ.
- ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಹಾವೇರಿಯಲ್ಲಿ ನಡೆಯುತ್ತಿರುವ ‘ಲೇಖಕಿಯರ ರಾಜ್ಯಮಟ್ಟದ ಆರನೇ ಸಮ್ಮೇಳನ’ದ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮ ಹಳ್ಳಿಕೇರಿ ಅವರನ್ನು ಆಯ್ಕೆ ಮಾಡಲಾಗಿದೆ.
- ಕೇರಳದಲ್ಲಿ ಟೊಮೇಟೊ ಜ್ವರ ಪ್ರಕರಣಗಳು ವರದಿಯಾಗುತ್ತಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು, ನಾಗರಿಕರು ಕೂಡ ಜಾಗರೂಕರಾಗಿರಬೇಕು ಮತ್ತು ಯಾವುದೇ ರೀತಿಯ ಚರ್ಮದ ದದ್ದುಗಳು ಕಂಡುಬಂದರೆ ತಕ್ಷಣವೇ ವರದಿ ಮಾಡುವಂತೆ ಸೂಚಿಸಲಾಗಿದೆ. ದೇಹದಲ್ಲಿ ಕೆಂಪು ಬಣ್ಣದ ನೋವಿರುವ ಗುಳ್ಳೆಗಳು ಕೈ, ಕಾಲು ಮತ್ತು ಬಾಯಿ ನೋವು ಟೊಮೋಟೊ ಜ್ವರದ ಲಕ್ಷಣಗಳಾಗಿದ್ದು, ಇದು ಹೆಚ್ಚು ಸಾಂಕ್ರಾಮಿಕವಾಗಿದೆ.
- ಇತ್ತೀಚಿನ ದಿನಗಳಲ್ಲಿ ಭಾರತೀಯ ರೈಲ್ವೆ ಇಲಾಖೆ ಪ್ರಯಾಣಿಕ ಸ್ನೇಹಿಯಾಗುತ್ತಿದೆ. ಕುಡಿಯುವ ನೀರು, ಆಹಾರ, ಟಿಕೆಟ್, ಬುಕ್ಕಿಂಗ್ ಸೇರಿದಂತೆ ಪ್ರತಿಯೊಂದರಲ್ಲಿ ಪ್ರಯಾಣಿಕರ ಕ್ಷೇಮ, ಕುಶಲತೆ, ಅನುಕೂಲತೆಯನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಯುಟಿಎಸ್ (ಕಾಯ್ದಿರಿಸದ ಟಿಕೆಟ್ ವ್ಯವಸ್ಥೆ) ಆಪ್ ಬಿಡುಗಡೆಗೊಳಿಸಿದೆ.
- ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ದೇಶಾದ್ಯಂತ ಹಂಚಿಕೆಯಾಗುತ್ತಿರುವ ಆಹಾರ ಅಧಾನ್ಯಗಳ ಪ್ರಮಾಣ ಮತ್ತು ಬೆಲೆಯಲ್ಲಿ ಏಕರೂಪತೆ ಕಾಯ್ದುಕೊಳ್ಳುವುದಕ್ಕಾಗಿ ಎನ್ಎಫ್ಎಸ್ಎ ಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಖಾದ್ಯ ಸುರಕ್ಷಾ ಯೋಜನೆ ಎಂದು ಮರು ನಾಮಕರಣ ಮಾಡಲಾಗುತ್ತಿದೆ.
- ಕೇಂದ್ರ ಸರ್ಕಾರ ವಿಂಡ್ ಫಾಲ್ ಆದಾಯ ತೆರಿಗೆಯ ಪಾಕ್ಷಿಕ ಪರಿಷ್ಕರಣೆಯಲ್ಲಿ ಆಗಸ್ಟ್ 18 ರಂದು ಕಚ್ಚಾ ತೈಲದ ಮೇಲಿನ ಸೆಸ್ ನ್ನು ಪ್ರತಿ ಟನ್ ಗೆ 17,750 ರೂಗಳಿಂದ 13,000 ರೂಪಾಯಿಗಳಿಗೆ ಇಳಿಕೆ ಮಾಡಿದೆ.
- ವಿಡಿಯೋಲ್ಯಾನ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಅತ್ಯಂತ ಜನಪ್ರಿಯ ಮೀಡಿಯಾ ಪ್ಲೇಯರ್ ಸಾಫ್ಟ್ವೇರ್ ಮತ್ತು ಸ್ಟ್ರೀಮಿಂಗ್ ಮೀಡಿಯಾ ಸರ್ವರ್ VLC ಮೀಡಿಯಾ ಪ್ಲೇಯರ್ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ.
- ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳ ಅನುಕೂಲಕ್ಕಾಗಿ ‘ಒಂದು ಬಾರಿ ನೋಂದಣಿ’ (ಒಟಿಆರ್) ಪದ್ಧತಿ ಆರಂಭಿಸಿದೆ. ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಪ್ರತಿಬಾರಿಯೂ ತಮ್ಮ ಮೂಲ ಮಾಹಿತಿ ಭರ್ತಿ ಮಾಡುವುದನ್ನು ತಪ್ಪಿಸುವುದು ಇದರ ಉದ್ದೇಶವಾಗಿದೆ. ಹೀಗೆ ದಾಖಲಿಸಿದ ಮಾಹಿತಿಯನ್ನು ಆಯೋಗದ ಸರ್ವರ್ನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿಡಲಾಗುತ್ತದೆ.
- ಅಧಿಕೃತ ಕೆಲಸಕ್ಕೆ ಸಂಬಂಧಿಸಿದ ದೂರವಾಣಿ ಕರೆಗಳಿಗೆ ಉತ್ತರಿಸುವ ಮೊದಲು ಹಲೊ ಬದಲು ‘ವಂದೇ ಮಾತರಂ’ ಎಂಬುದಾಗಿ ಹೇಳಬೇಕು ಎಂದು ಮಹಾರಾಷ್ಟ್ರ ಸರ್ಕಾರದ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
- ಎನ್ಡಿಟಿವಿ ಅನ್ನು ಅದಾನಿ ಸಮೂಹ ಸ್ವಾಧೀನ ಪಡಿಸಿಕೊಂಡಿದೆ.
- ಎಫ್ ಟಿಎಕ್ಸ್ ಕ್ರಿಪ್ಟೊ ಕಪ್
ಎರಡನೇ ಅತಿದೊಡ್ಡ ಚಾಂಪಿಯನ್ ಚೆಸ್ ಟೂರ್ ಎಫ್ ಟಿಎಕ್ಸ್ ಕ್ರಿಪ್ಟೊ ಕಪ್ (FTX Crypto Cup) ಅಂತಿಮ ಸುತ್ತಿನಲ್ಲಿ ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಜ್ಞಾನಂದ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್ ಸನ್ ಅವರನ್ನು 4-2 ಅಂತರದಿಂದ ಸೋಲಿಸಿದ್ದಾರೆ. ಮ್ಯಾಗ್ನಸ್ ಕಾರ್ಲ್ ಸನ್ ಅವರು ನಾರ್ವೆ ದೇಶದವರು.