Published on: November 28, 2022
ಸುದ್ಧಿ ಸಮಾಚಾರ : 28 ನವೆಂಬರ್ 2022
ಸುದ್ಧಿ ಸಮಾಚಾರ : 28 ನವೆಂಬರ್ 2022
- ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ನಡಿ ಆರೋಗ್ಯ ವೃತ್ತಿಪರರು ಮತ್ತು ಆರೋಗ್ಯ ಸೌಲಭ್ಯ ನೋಂದಣಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಆರೋಗ್ಯ ಆರೈಕೆ ವೃತ್ತಿಪರರ ನೋಂದಣಿ (ಎಚ್.ಪಿ.ಆರ್) ವಲಯದಲ್ಲಿ 28,643 ವೈದ್ಯರು ಮತ್ತು ದಾದಿಯರು ನೋಂದಣಿಯಾಗಿದ್ದು, ರಾಜ್ಯ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸೌಲಭ್ಯ ನೋಂದಣಿಯಡಿ(ಎಚ್.ಎಫ್.ಆರ್) ಕರ್ನಾಟಕ 2ನೇ ಸ್ಥಾನದಲ್ಲಿದ್ದು, 27,244 ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
- ರಸ್ತೆ ಗುಂಡಿ, ಸಂಚಾರ ದಟ್ಟಣೆಯಿಂದಾಗಿ ಎದುರಿಸುತ್ತಿರುವ, ಸಮಸ್ಯೆಗಳನ್ನು ದೂರಾಗಿಸಲು ಬಿಬಿಎಂಪಿ ರ್ಯಾಪಿಡ್ ರೋಡ್ಸ್ ಎಂಬ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಕ್ಷಿಪ್ರಗತಿಯಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದೆ. “ಇದರಲ್ಲಿ ಪ್ರಿ-ಕಾಸ್ಟ್ ವಿಧಾನವನ್ನು ಬಳಸಲಾಗುತ್ತದೆ.
- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಳೀಯ ನಿರ್ಮಿತ ರೋಹಿಣಿ ಆರ್ಎಚ್-200 ಸೌಂಡಿಂಗ್ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
- ಹಿಮಾಲಯ ಪ್ರದೇಶದ ಎತ್ತರದ ಪರ್ವತಗಳಲ್ಲಿ ಜೀವಿಸುವ ಬಹುಪಯೋಗಿ ಪ್ರಾಣಿ ಯಾಕ್ ಅನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್ಎಸ್ಎಸ್ಎಐ) ಆಹಾರ ಪ್ರಾಣಿ ಎಂದು ಘೋಷಿಸಿದೆ.