Published on: October 30, 2021
ಸುದ್ಧಿ ಸಮಾಚಾರ 30 ಅಕ್ಟೋಬರ್ 2021
ಸುದ್ಧಿ ಸಮಾಚಾರ 30 ಅಕ್ಟೋಬರ್ 2021
- ರಾಜ್ಯಗಳ ಆಡಳಿತದ ಕಾರ್ಯಕ್ಷಮತೆಯ 6ನೇ ವರ್ಷದ ಶ್ರೇಯಾಂಕವು ಬಿಡುಗಡೆಗೊಂಡಿದ್ದು, ದಕ್ಷಿಣದ ರಾಜ್ಯಗಳು ಪ್ರಾಬಲ್ಯ ಸಾಧಿಸಿವೆ. ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದು, ತಮಿಳುನಾಡು ಎರಡನೇ ಸ್ಥಾನ ಹಾಗೂ ತೆಲಂಗಾಣ ಮೂರನೇ ಸ್ಥಾನ ಪಡೆದಿದೆ. . ಛತ್ತೀಸ್ಗಡ, ಗುಜರಾತ್ ಹಾಗೂ ಪಂಜಾಬ್ ಕ್ರಮವಾಗಿ ನಂತರದ ಸ್ಥಾನಗಳಲ್ಲಿವೆ. ಕರ್ನಾಟಕ ಸೂಚ್ಯಂಕದೊಂದಿಗೆ 7ನೇ ಸ್ಥಾನವನ್ನು ಪಡೆದಿದೆ. ಕಳೆದ ವರ್ಷ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿತ್ತು.
- ಮೈಸೂರಿನ ಚಾಮುಂಡಿ ಬೆಟ್ಟವನ್ನು ಪ್ರಸಾದ್ ಯೋಜನೆ ವ್ಯಾಪ್ತಿಯಲ್ಲಿ ಸೇರಿಸುವಲ್ಲಿ ಅಗತ್ಯ ವಿವರ ಒದಗಿಸುವಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲೋಪ ಕಂಡುಬಂದ ಮಾರನೇ ದಿನವೇ ಪ್ರವಾಸೋದ್ಯಮ ಸಚಿವಾಲಯ ಈ ಪ್ರಸ್ತಾವಕ್ಕೆ ತಾತ್ವಿಕ ಅನುಮೋದನೆ ನೀಡಿದೆ.
- ಭಾರತೀಯ ನೌಕಾಪಡೆಗೆ ಮುಂಬೈನ ನೌಕಾ ಹೆಲಿಕಾಪ್ಟರ್ ಬೇಸ್ ಐಎನ್ಎಸ್ ಶಿಕ್ರಾದಲ್ಲಿ ಎರಡು ಸುಧಾರಿತ ಲಘು ಹೆಲಿಕಾಪ್ಟರ್ಗಳು(ALH) MK III ಸೇರ್ಪಡೆಗೊಂಡಿವೆ.